ಫ್ಯಾಕ್ಟ್‌ಚೆಕ್ : ಶಿವರಾಜ್ ಸಿಂಗ್ ಚೌಹಾಣ್ ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲವೆಂದು ಬಿಕ್ಕಿ ಬಿಕ್ಕಿ ಅತ್ತರೆ?

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ , ಮತ್ತೊಮ್ಮೆ ಮಧ್ಯಪ್ರದೇಶದ  ಆಡಳಿತದ ಚುಕ್ಕಾಣಿ ಹಿಡಿದಿದೆ. ಶಿವರಾಜ್ ಸಿಂಗ್ ಚೌಹಾಣ್  ಮತ್ತೊಮ್ಮೆ ಸಿಎಂ ಆಗುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ನಿರೀಕ್ಷೆ ಸುಳ್ಳಾಗಿದ್ದು, ಅಚ್ಚರಿಯ ಅಭ್ಯರ್ಥಿಯನ್ನು ರಾಜಸ್ಥಾನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಮೋಹನ್ ಯಾದವ್‌ಗೆ ಮಧ್ಯಪ್ರದೇಶ ಸಿಎಂ ಆಗಿ ಆಯ್ಕೆಯಾಗಿದ್ದಾರೆ.

ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತಮ್ಮ ಬೆಂಬಲಿಗರ ಸಮ್ಮುಖದಲ್ಲಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಬಿಕ್ಕಿ ಬಿಕ್ಕಿ ಆಳುತ್ತಿದ್ದಾರೆ ಎಂದು ಪ್ರತಿಪಾದಿಸಿ ಶಿವರಾಜ್ ಸಿಂಗ್ ಚೌಹಾಣ್ ಅಳುತ್ತಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ.

https://twitter.com/niayayakkural/status/1734239314488209715?ref_src=twsrc%5Etfw%7Ctwcamp%5Etweetembed%7Ctwterm%5E1734239314488209715%7Ctwgr%5E1720eef89456a5fcece647fa9436c7441896a371%7Ctwcon%5Es1_&ref_url=https%3A%2F%2Fnewsmeter.in%2Ffact-check-kannada%2Fformer-madhya-pradesh-chief-minister-shivraj-singh-chouhan-shed-tears-because-he-did-not-get-a-chief-minister-721928

“ಮೋದಿ ಅಮಿತ್ ಶಾ ಅವರಿಂದ ಆದ ವಿಶ್ವಾಸ ದ್ರೋಹದಿಂದ ನೊಂದು ಕಣ್ಣೀರು ಹಾಕಿದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ” ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

X ಅಕೌಂಟ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿರುವ ಬಳಕೆದಾರರು, ಶಿವರಾಜ್‌ ಸಿಂಗ್‌ ಚೌಹಾಣ್ ಅವರಿಗೆ ಮೋದಿ- ಶಾ ಅವರಿಂದ ಆಗಿರುವ ವಿಶ್ವಾಸದ್ರೋಹ ಎಲ್ಲಕ್ಕಿಂತ ದೊಡ್ಡದು. ಇದು ಮಧ್ಯಪ್ರದೇಶಕ್ಕೆ ಆದ ಅವಮಾನ. ಮೋದಿ ಮತ್ತು ಶಾ ನೆನಪಿಡಿ 2024ರ ಚುನಾವಣೆಯಲ್ಲಿ ಸೋತ ನಂತರ ನೀವೂ ಅಳುತ್ತೀರಾ? ಅತ್ಯಂತ ಹಿರಿಯ ನಾಯಕ ಕಣ್ಣೀರು ಹಾಕುತ್ತಿದ್ದಾರೆ. ನನಗೆ ಬಹಳ ಬೇಸರವಾಗುತ್ತಿದೆ. ಬಿಜೆಪಿ ಯಾರೊಬ್ಬರ ಸ್ವತ್ತಲ್ಲ” ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 17 ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಶಿವರಾಜ್‌ ಸಿಂಗ್ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಮುಖ್ಯಮಂತ್ರಿ ಸ್ಥಾನದಿಂದ ವಂಚಿತರಾದ ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್‌ಸಿಂಗ್ ಚೌಹಾಣ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋ ಪೋಸ್ಟ್‌ಅನ್ನು ಪರಿಶೀಲಿಸಿದಾಗ, 2019ರ, ಜುಲೈ 19ರಂದು ಆಜ್‌ತಕ್‌, ನ್ಯೂಸ್‌ತಕ್‌ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ಆಗಿರುವ ವಿಡಿಯೋವನ್ನು ಹೋಲುವ ಮೂಲ ವಿಡಿಯೋ ಲಭ್ಯವಾಗಿದೆ.  ಈ ವಿಡಿಯೋದಲ್ಲಿ ಶಿವರಾಜ್ ಸಿಂಗ್‌ ಚೌಹಾಣ್ ಅವರು ಬಿಕ್ಕಿ ಬಿಕ್ಕಿ ಅಳುತ್ತಿರುವ ದೃಶ್ಯಗಳನ್ನು ಕಾಣಬಹುದು.

ತಮ್ಮ ದತ್ತು ಪುತ್ರಿ ಭಾರರ್ತ ವರ್ಮ ನಿಧನರಾದ ಸಂದರ್ಭದಲ್ಲಿ ಭಾವುಕರಾಗಿದ್ದ ಶಿವರಾಜ್ ಅವರು ಕಣ್ಣೀರು ಹಾಕಿದ್ದರು. ಈ ವಿಡಿಯೋವನ್ನು ಈಗ ಸಿಎಂ ಪದವಿ ತಪ್ಪಿದ ಹಿನ್ನೆಲೆಯಲ್ಲಿ ವೈರಲ್ ಮಾಡಲಾಗಿದೆ. ದತ್ತುಪುತ್ರಿ ಸಾವಿನ ಸುದ್ದಿಯನ್ನು ಖಚಿತ ಪಡಿಸಿಕೊಳ್ಳಲು ಕೆಲವು ಕೀವರ್ಡ್‌ಗಳನ್ನು ಬಳಸಿಕೊಂಡು ಗೂಗಲ್‌ ಮೂಲಕ ಹುಡುಕಾಟ ನಡೆಸಿದೆವು. ಭಾರತಿ ವರ್ಮ ಸಾವಿನ ಕುರಿತು ಹಲವು ವರದಿಗಳು ಲಭ್ಯವಾದವು.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟವಾಗಿರುವ ಸುದ್ದಿಯಲ್ಲಿ ಚೌಹಾನ್ ಅವರ ಪತ್ನಿ, ಪುತ್ರ ಕಾರ್ತಿಕೇಯ್ ಸೇರಿದಂತೆ ಬಿಜೆಪಿಯ ಹಲವು ನಾಯಕರು ವಿದಿಶಾ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಚೌಹಾನ್ ಮತ್ತು ಅವರ ಪತ್ನಿ ಕಣ್ಣೀರು ಹಾಕಿದ್ದರು ಎಂದು ವರದಿಯಾಗಿದೆ.
ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌  ನಲ್ಲಿ ಪ್ರಕಟವಾಗಿರುವ ಸುದ್ದಿಯಲ್ಲಿ ಚೌಹಾನ್ ಅವರ ಪತ್ನಿ, ಪುತ್ರ ಕಾರ್ತಿಕೇಯ್ ಸೇರಿದಂತೆ ಬಿಜೆಪಿಯ ಹಲವು ನಾಯಕರು ವಿದಿಶಾ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಚೌಹಾನ್ ಮತ್ತು ಅವರ ಪತ್ನಿ ಕಣ್ಣೀರು ಹಾಕಿದ್ದರು ಎಂದು ವರದಿಯಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ. 2019ರಲ್ಲಿ ತಮ್ಮ ದತ್ತು ಪುತ್ರಿ ಭಾರರ್ತ ವರ್ಮ ನಿಧನರಾದ ಸಂದರ್ಭದಲ್ಲಿ ಭಾವುಕರಾಗಿದ್ದ ಶಿವರಾಜ್ ಅವರು ಕಣ್ಣೀರು ಹಾಕಿದ್ದರು, ಹಳೆಯ ವಿಡಿಯೋವನ್ನು ತೆಗೆದುಕೊಂಡು ಮುಖ್ಯಮಂತ್ರಿ ಹುದ್ದೆ ತಪ್ಪಿದ್ದಕ್ಕೆ ಕಣ್ಣೀರು ಹಾಕಿದ ಶಿವರಾಜ್‌ಸಿಂಗ್ ಚೌಹಾಣ್ ಎಂದು ಸುಳ್ಳು ಪ್ರತಿಪಾದನೆಯಪಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೊಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇನ್ನು ಶಿವರಾಜ್ ಸಿಂಗ್ ಸಿಎಂ ಆಗದೇ ಇರುವುದಕ್ಕೆ ಅವರ ಅಭಿಮಾನಿಗಳು, ಬೆಂಬಲಿಗರು ಕಣ್ಣೀರಿಟ್ಟಿದ್ದಾರೆ. ಮುಖ್ಯವಾಗಿ ಅವರು ಜಾರಿಗೆ ತಂದಿದ್ದ ‘ಲಾಡ್ಲಿ ಲಕ್ಷ್ಮಿ’ ಯೋಜನೆಯ ಫಲಾನುಭವಿ ಮಹಿಳೆಯರು ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಪಾರ್ಲಿಮೆಂಟ್‌ನಿಂದ ಮಹುವಾ ಅವರನ್ನು ಬಲವಂತವಾಗಿ ಹೊರಹಾಕಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights