ಫ್ಯಾಕ್ಟ್‌ಚೆಕ್ : ತಮಿಳುನಾಡಿನ ಅಯ್ಯಪ್ಪ ಭಕ್ತನನ್ನು ಕೇರಳ ಪೊಲೀಸರು ಥಳಿಸಿದ್ದು ನಿಜವೇ?

ಶಬರಿಮಲೆ ಸ್ವಾಮಿ ಅಯ್ಯಪ್ಪನ ಭಕ್ತರು ಮಾಲೆ ಧರಿಸಿ ಕೇರಳದ ಅಯ್ಯಪ್ಪನ ಸನ್ನಿಧಿಯಲ್ಲಿ ದರ್ಶನ ಪಡೆಯಲು ತೆರಳುತ್ತಿದ್ದಾರೆ ಕೇರಳದ ಪೊಲೀಸರು ಭಕ್ತರಿಗೆ ರಕ್ತ ಬರುವಂತೆ ಹೊಡೆದಿದ್ದಾರೆ ಎಂದು ಪ್ರತಿಪಾದಿಸಿ ಮಾಲೆಧಾರಿ ಭಕ್ತರೊಬ್ಬರ ಹಣೆಯಿಂದ ರಕ್ತ ಸುರಿಯುತ್ತಿರುವ ವಿಡಿಯೋವೊನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

‘ಶಬರಿಮಲೆ ಪೊಲೀಸರು ಭಕ್ತನ ತಲೆ ಒಡೆದಿದ್ದಾರೆ’ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಅಯ್ಯಪ್ಪ ಮಾಲಾಧಾರಿ ಭಕ್ತನಿಗೆ ದೇವಸ್ಥಾನದ ಸಿಬ್ಬಂದ್ದಿ ಥಳಿಸಿರುವ ಘಟನೆ ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಶ್ರೀರಂಗಂನಲ್ಲಿ ನಡೆದಿದೆ ಎಂಬ ವರದಿಗಳು ಲಭ್ಯವಾಗಿದೆ. ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತರು ಮತ್ತು ಸೆಕ್ಯೂರಿಟಿ ನಡುವೆ ನಡೆದ ಗಲಾಟೆಯಲ್ಲಿ ಇಬ್ಬರು ಭಕ್ತರು ಮತ್ತು ಮೂವರು ಗಾರ್ಡ್‌ಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಟ್ವೀಟ್ ಮಾಡಿದ್ದು  ಶ್ರೀರಂಗಂ ರಂಗನಾಥ ಸ್ವಾಮಿ ದೇಗುಲದೊಳಗೆ ಅಯ್ಯಪ್ಪ ಭಕ್ತರು ಹೆಚ್ಚು ಹೊತ್ತು ಸರದಿಯಲ್ಲಿ ಕಾಯುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು ಇದನ್ನು ಪ್ರಶ್ನಿಸಿದ ಭಕ್ತರ ಮೇಲೆ ತಮಿಳುನಾಡು ಸರ್ಕಾರದ ಅಡಿಯಲ್ಲಿ ಬರುವ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ (ಎಚ್‌ಆರ್‌ & ಸಿಇ) ಸಿಬ್ಬಂದಿ ಥಳಿಸಿದ್ದಾರೆ ಎಂದು ಆರೋಪಿಸಿ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

“42 ದಿನಗಳ ವ್ರತವನ್ನು ಆಚರಿಸಿದ ಅಯ್ಯಪ್ಪ ಭಕ್ತರು ಶಬರಿಮಲೆಯಿಂದ ಹಿಂದಿರುಗಿದ ನಂತರ ರಂಗನಾಥ ಸ್ವಾಮಿ ಸನ್ನಿದಿಗೆ ಆಗಿಮಿಸಿ ದೇವರ ದರ್ಶನಕ್ಕೆಂದು ಸರತಿ ಸಾಲಿನಲ್ಲಿ ನಿಂತ ಭಕ್ತರನ್ನು ಬಿಡುವುದು ತಡವಾಗಿದೆ ಅದನ್ನು ಪ್ರಶ್ನಿಸಿದ ಭಕ್ತರ ಮೇಲೆ ಹಲ್ಲೆ ನಡೆಸಿ ರಕ್ತ ಬರುವಂತೆ ಥಳಿಸಿದ್ದಾರೆ ಎಂದು ಆರೋಪಿಸಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

“ಕೇರಳದಲ್ಲಿ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ವೈರಲ್ ಆದ ಹಿನ್ನಲೆಯಲ್ಲಿ  ಕೇರಳ ಪೊಲೀಸರು ಪ್ರಕಟಣೆಯನ್ನು ಹೊರಡಿಸಿದ್ದು ” ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ ನಡೆಸಿದ ದೃಶ್ಯಾವಳಿಗಳು ಕೇರಳದಲ್ಲಿ ನಡೆದಿಲ್ಲ. ಈ ವಿಡಿಯೋ ಕೇರಳದಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ನಕಲಿ ವಿಡಿಯೋಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪೊಲೀಸ್ ಮುಖ್ಯಸ್ಥರು ಸೂಚಿಸಿದ್ದಾರೆ”

 

View this post on Instagram

 

A post shared by Kerala Police (@kerala_police)

ತಮಿಳುನಾಡಿನ ಶ್ರೀರಂಗಂನ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ದೇವಸ್ಥಾನದ ಸಿಬ್ಬಂದಿಯೊಂದಿಗೆ ನಡೆದ ಜಗಳದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರೊಬ್ಬರು ಗಾಯಗೊಂಡಿದ್ದಾರೆ, ಹಲ್ಲೆಗೊಳಗಾದ ವ್ಯಕ್ತಿ ಘಟನೆಯನ್ನು ಖಂಡಿಸಿ ಪ್ರತಿಭಟಿಸಿದ್ದಾರೆ. ಹಲ್ಲೆಗೊಳಗಾದ ಅದೇ ವ್ಯಕ್ತಿ ಪ್ರತಿಭಟನೆಯಲ್ಲಿ ಕುಳಿತಿರುವ ವೀಡಿಯೊವನ್ನು ಕೇರಳ ಪೊಲೀಸರು ಶಬರಿಮಲೆ ಭಕ್ತನನ್ನು ಥಳಿಸಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ತಮಿಳುನಾಡಿನ ಶ್ರೀರಂಗಂನ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಸಿಬ್ಬಂದಿಗಳಿಂದ  ಅಯ್ಯಪ್ಪನ ಭಕ್ತನ ಮೇಲೆ ನಡೆದ ಹಲ್ಲೆಯನ್ನು, ಕೇರಳದಲ್ಲಿ ಅಯ್ಯಪ್ಪ ಭಕ್ತರ ಮೇಲೆ ಪೊಲೀಸರಿಂದ ಹಲ್ಲೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಅಯೋಧ್ಯೆಯ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸುವ ಶ್ರೀರಾಮನ ವಿಗ್ರಹ ನಿರ್ಮಿಸುತ್ತಿರುವುದು ಮುಸ್ಲಿಮರಲ್ಲ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights