ಫ್ಯಾಕ್ಟ್‌ಚೆಕ್ : ರಾಷ್ಟ್ರಪತಿಗೂ ಪ್ರಧಾನಿ ಮೋದಿ ಗೌರವ ನೀಡಲಿಲ್ಲವೇ?

ಸಂಸತ್ತಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪಾಧ್ಯಕ್ಷ ಜಗದೀಪ್ ಧನಕರ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮಸ್ಕರಿಸಿದರೆ ಅದನ್ನು ಗೌರವಿಸದ ಪ್ರಧಾನಿಗಳು ಎಂಬ ಪ್ರತಿಪಾಧನೆಯೊಂದಿಗೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಉಪಾಧ್ಯಕ್ಷ ಜಗದೀಪ್ ಧನಖರ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮನಸ್ಕರಿಸಿದರೆ ಪ್ರಧಾನಿ ಮೋದಿ ಸುಮ್ಮನೆ ನಿಂತು ನೋಡುತ್ತಿರುವ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ.

ಹಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉಪಾಧ್ಯಕ್ಷ ಜಗದೀಪ್ ಧನಕರ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಲ್ಲಿ ಅಗೌರವ ತೋರಿದರೆ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ,  ಹೊಸ ಸಂಸತ್ ಭವನದ ಕಟ್ಟಡದಲ್ಲಿ ಡಿಸೆಂಬರ್ 6 ರಂದು ನಡೆದ ಅಂಬೇಡ್ಕರ್ ಪರಿನಿಬ್ಬಾಣ ದಿನದ ಪ್ರಯುಕ್ತ ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪೋಟೊಗೆ ಫೋಸ್ ನೀಡಿದ ಸಂದರ್ಭದಲ್ಲಿ ಈ ಫೋಟೊವನ್ನು ಕ್ಲಿಕಿಸಲಾಗಿದೆ.

ಮಾಧ್ಯಮದವರಿಗೆ ಪೋಟೊಗೆ ಫೋಸ್ ನೀಡಿ ಹೊರನಡೆಯುವಾಗ ಸೆರೆ ಹಿಡಿದ ಚಿತ್ರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉಪಾಧ್ಯಕ್ಷ ಜಗದೀಪ್ ಧನಕರ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾಅವರ ಜೊತೆಯಲ್ಲಿ ಪ್ರಧಾನಿ ಮೋದಿಯವರು ನಮಸ್ಕರಿಸುತ್ತಿರುವುದನ್ನು ಕಾಣಬಹುದು.

ಪ್ರಧಾನಿ ಮೋದಿ ಹೊರಡಲು ಮುಂದಾದಾಗ ಸರೆ ಹಿಡಿದ ಚಿತ್ರದಲ್ಲಿ ಪ್ರಧಾನಿ ಮೋದಿ ಮೂವರಿಗೂ ಅಗೌರವ ತೋರಿದ್ದಾರೆ ಎಂಬಂತೆ ಬಿಂಬಿಸಲು ಚಿತ್ರವನ್ನು ಬಳಸಿಕೊಳ್ಳಲಾಗಿದೆ. ಮೂವರು ನಾಯಕರು ತಮ್ಮ ಕಡೆಗೆ ಕೈ ಜೋಡಿಸಿ ನಿಂತಿದ್ದರಿಂದ ಮೋದಿ ಅವರನ್ನು ಸ್ವಾಗತಿಸಲು ನಿರಾಕರಿಸಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಆದರೆ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪಾಧ್ಯಕ್ಷ ಜಗದೀಪ್ ಧನಕರ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಾಧ್ಯಮಗಳಿಗೆ ಶುಭಾಶಯ ಕೋರಿದ ಸಂದರ್ಭದಲ್ಲಿ ಸೆರೆಹಿಡಿದಯಲಾಗಿದೆ ಎಂಬುದನ್ನು ಪೂರ್ಣ ವಿಡಿಯೋದಲ್ಲಿ ನೋಡಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಲೋಕಸಭೆಯ ಸ್ಪೀಕರ್ ಅವರ ಶುಭಾಶಯಗಳನ್ನು ಪ್ರಧಾನಿ ನಿರ್ಲಕ್ಷಿಸಿದ್ದಾರೆ ಎಂಬಂತೆ ಚಿತ್ರಿಸಲು ಫೋಟೊವನ್ನು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights