ಫ್ಯಾಕ್ಟ್‌ಚೆಕ್ : 26ನೇ ವಯಸ್ಸಿನಲ್ಲಿ ನರೇಂದ್ರ ಮೋದಿ ಕೇದಾರನಾಥ ದೇವಾಲಯದಲ್ಲಿ ತಲೆಕೆಳಗಾಗಿ ಪ್ರದಕ್ಷಿಣೆ ಹಾಕುತ್ತಿದ್ದರಂತೆ? ನಿಜವೇ?

ವ್ಯಕ್ತಿಯೊಬ್ಬರು ಕೇದಾರನಾಥ ದೇಗುಲಕ್ಕೆ ಪ್ರದಕ್ಷಿಣೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ವಿಡಿಯೊದಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ ಎಂದು ಹೇಳಲಾಗಿದೆ. ಪ್ರಧಾನಿ ಮೋದಿಯು 26 ವರ್ಷ ಯುವಕನಾಗಿದ್ದಾಗ ಇಂತಹ ಕಸರತ್ತು ಮಾಡುತ್ತಿದ್ದರು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

“ಮೋದಿ ಜಿಯವರು 26 ನೇ ವಯಸ್ಸಿನಲ್ಲಿ ಕೇದಾರನಾಥದ ಪ್ರದಕ್ಷಿಣೆ. ರಾಷ್ಟ್ರದ ಪರವಾಗಿ ಭಗವಂತನಿಗೆ ಭಕ್ತಿಯನ್ನು ಅರ್ಪಿಸುವ ಇಂತಹ ಭಕ್ತನನ್ನು ನೀವು ಎಂದಾದರೂ ನೋಡಿದ್ದೀರಾ? “ಎಂಬ ಒಕ್ಕಣೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಇಂದು ನಾನು ನಿಮ್ಮೆಲ್ಲರ ನಡುವೆ ಬಹಳ ಸುಂದರವಾದ ವೀಡಿಯೊವನ್ನು ಪ್ರಸ್ತುತಪಡಿಸುತ್ತಿದ್ದೇನೆ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೀ, ಅವರು 26 ವರ್ಷ ವಯಸ್ಸಿನವರಾಗಿದ್ದಾಗ, ಅವರು ಕೇದಾರನಾಥವನ್ನು ಹೇಗೆ ಪ್ರದಕ್ಷಿಣೆ ಮಾಡಿದರು, ನೀವೆಲ್ಲರೂ ಒಮ್ಮೆ ನೋಡಿ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋದ ಕೀ ಫ್ರೇಮ್‌ಗಳನ್ನು ಬಳಸಿ ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 21 ಜೂನ್ , 2021 ರಂದು ETV ಭಾರತ್ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ, ವೈರಲ್  ವೀಡಿಯೊದಲ್ಲಿರುವ ವ್ಯಕ್ತಿಯನ್ನು ಕೇದಾರನಾಥ ದೇವಾಲಯದ ಅರ್ಚಕ ಸಂತೋಷ್ ತ್ರಿವೇದಿ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ತ್ರಿವೇದಿ ಅವರು ತಮ್ಮ ಕೈಗಳಿಂದ ಕೇದಾರನಾಥ ದೇವಾಲಯವನ್ನು ಪ್ರದಕ್ಷಿಣೆ ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ.

ವೈರಲ್ ವಿಡಿಯೋವನ್ನು ETV ಭಾರತ್‌ನ ಅಪ್‌ಲೋಡ್ ಮಾಡಿದ ವಿಡಿಯೋದೊಂದಿಗೆ ಹೋಲಿಕೆ ಮಾಡಿ ನೋಡಿದಾಗ  ಅನೇಕ ಹೋಲಿಕೆಗಳು ಕಂಡುಬಂದವು, ಇದೇ ರೀತಿಯ ವಿಡಿಯೊವನ್ನು ಇಂಡಿಯಾ ಟಿವಿ ಜೂನ್ 21, 2020 ರಂದು ವಿವರಣೆಯೊಂದಿಗೆ ವರದಿ ಮಾಡಿತ್ತು “ಕೇದಾರನಾಥ ಧಾಮ್ ದೇವಾಲಯದ ಅರ್ಚಕ ಸಂತೋಷ್ ತ್ರಿವೇದಿ ಅವರು ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಅನನ್ಯ ಯೋಗವನ್ನು ಮಾಡಿದರು” ಎಂದು ವರದಿ ಮಾಡಿದೆ.

ವೈರಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿಗಳು ಇವೆಯೇ ಎಂದು ಕೀವರ್ಡ್‌ಗಳೊಂದಿಗೆ ಸರ್ಚ್ ಮಾಡಿದರೂ,  ವೈರಲ್ ವಿಡಿಯೋದಲ್ಲಿ ಮಾಡಲಾದ ಪ್ರತಿಪಾದನೆಯನ್ನು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ಮಾಧ್ಯಮ ವರದಿಯನ್ನು ಕಂಡುಹಿಡಿಯಲಾಗಲಿಲ್ಲ. ಇಂತಹ ಘಟನೆ ನಡೆದಿದ್ದರೆ ಅದನ್ನು ಮುಖ್ಯವಾಹಿನಿಯ ಮಾಧ್ಯಮಗಳು ದೊಡ್ಡ ಮಟ್ಟದಲ್ಲಿ ಸುದ್ದಿ ಪ್ರಕಟಿಸುತ್ತಿದ್ದವು ಆದರೆ ಹಂತಹ ವಿಶ್ವಾಸಾರ್ಹ ಮೂಲಗಳು ಕಂಡುಬಂದಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಕೇದಾರನಾಥ ದೇವಾಲಯದ ಅರ್ಚಕ ಸಂತೋಷ್ ತ್ರಿವೇದಿ ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಮಾಡಿದ ಪ್ರದರ್ಶನವನ್ನು ಪ್ರಧಾನಿ ಮೋದಿ ತಮ್ಮ 26ನೇ ವಯಸ್ಸಿನಲ್ಲಿ ಮಾಡಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights