ಫ್ಯಾಕ್ಟ್‌ಚೆಕ್ : ಅಯೋಧ್ಯ ರಾಮಮಂದಿರದ ಅಧಿಕಾರಿಗಳಿಂದ ದಲಿತ ಬಾಲಕನ ಮೇಲೆ ಹಲ್ಲೆ ನಡೆದಿದ್ದು ನಿಜವೇ?

“ಅಯೋಧ್ಯೆಯಲ್ಲಿ ದಲಿತ ಬಾಲಕನ ಮೇಲೆ ರಾಮಮಂದಿರದ ಅಧಿಕಾರಿಗಳು ಹೇಗೆ ಹಲ್ಲೆ ನಡೆಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದೆ.

ಈ ವಿಡಿಯೋ ನೋಡಿ ಇದು ನಿಜಕ್ಕೂ ಆಘಾತಕಾರಿ ಎಂದು ವ್ಯಕ್ತಿಯೊಬ್ಬ ಬಾಲಕನನ್ನು ಥಳಿಸುತ್ತಿರುವಂತಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ  ಪ್ರಸಾರವಾಗುತ್ತಿದೆ. ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ.

ಈ ವಿಡಿಯೋದಲ್ಲಿ ಸೂಕ್ಷ್ಮವಾಗಿ ಗಮನಿಸಿದಾಗ ಇಬ್ಬರು ವ್ಯಕ್ತಿಗಳು ಸಮವಸ್ತ್ರ ಧರಿಸಿದ ಬಾಲಕನೊಬ್ಬನನ್ನು ರಸ್ತೆಯ ಮೇಲೆಯೇ ಮನಸ್ಸೋ ಇಚ್ಛೆ ಥಳಿಸುತ್ತಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಇದೇ ವಿಡಿಯೋದಲ್ಲಿ ಹಲವು ವಿದ್ಯಾರ್ಥಿಗಳಿರುವುದು, ಕೆಲವು ಬಾಲಕಿಯರು ಸಾಂಸ್ಕೃತಿಕ ಉಡುಗೆಗಳನ್ನು ತೊಟ್ಟು ನೃತ್ಯ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಅದೇ ಸ್ಥಳದಲ್ಲಿ ಸಾಂಸ್ಕೃತಿಕ ಉಡುಗೆಗಳನ್ನು ಧರಿಸಿ ಸಂಗೀತ ಪರಿಕರಗಳನ್ನು ಉಪಯೋಗಿಸುತ್ತಿರುವುದು ಕಂಡು ಬಂದಿದೆ.

ಫ್ಯಾಕ್ಟ್‌ಚೆಕ್‌ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ನ್ಯೂಸ್ 24 ಸುದ್ದಿ ವಾಹಿನಿ ಡಿಸೆಂಬರ್ 24ರಂದು ಮಾಡಿದ ವರದಿಯೊಂಂದು ಲಭ್ಯವಾಗಿದೆ.

ಹರಿಯಾಣದ ಫರೀದಾಬಾದ್ ನಲ್ಲಿ ಶಿಕ್ಷಕರಿಬ್ಬರು ವಿದ್ಯಾರ್ಥಿಯೊಬ್ಬನನ್ನು ಗೀತಾ ಜಯಂತಿಯ ಆಚರಣೆಯ ಸಂದರ್ಭದಲ್ಲಿ ಮನಸ್ಸೋ ಇಚ್ಚೆ ಥಳಿಸಿದ್ದಾರೆ ಎಂದು ಸುದ್ದಿಯನ್ನು ಪ್ರಸಾರ ಮಾಡಿದೆ.

ಹೆಚ್ಚಿನ ಮಾಹಿತಿಗಾಗಿ ಕೀ ವರ್ಡ್‌ಗಳನ್ನ ಬಳಸಿ ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ,  ಹಲವು ವರದಿಗಳು ಲಭ್ಯವಾಗಿದೆ. ಈ ವರದಿಗಳ ಪ್ರಕಾರ ಗೀತಾ ಜಯಂತಿಯ ಸಂದರ್ಭದಲ್ಲಿ ಹೈ ಸ್ಕೂಲ್ ವಿದ್ಯಾರ್ಥಿಯೊಬ್ಬ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಹೂಗಳನ್ನು ಎಸೆದಿದ್ದ ಎಂದು ಆರೋಪಿಸಲಾಗಿತ್ತು. ಇದರಿಂದ ಸಿಟ್ಟಿಗೆದ್ದ ಶಿಕ್ಷಕರು ವಿದ್ಯಾರ್ಥಿಗೆ ಥಳಿಸಿದ್ದಾರೆ ಎಂದು ಆ ವರದಿಗಳಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಈ ಕುರಿತು ದೈನಿಕ್ ಭಾಸ್ಕರ್ ವರದಿಯಲ್ಲಿ ಈ ಘಟನೆ ಡಿಸೆಂಬರ್ 22 ರಂದು ನಡೆದಿದ್ದು ಹಲ್ಲೆ ನಡೆಸಿದ ಇಬ್ಬರು ಶಿಕ್ಷಕರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಈ ಕುರಿತು ಫರಿದಾಬಾದ್ ಸೆಂಟ್ರಲ್ ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ದೈನಿಕ್ ಭಾಸ್ಕರ್ ವರದಿಯಲ್ಲಾಗಲಿ ಅಥವಾ ಬೇರೆ ಯಾವುದೇ ವರದಿಯಲ್ಲಾಗಲಿ, ಬಾಲಕ ದಲಿತ ಸಮುದಾಯಕ್ಕೆ ಸೇರಿದವನು ಎಂಬುದು ಉಲ್ಲೇಖವಾಗಿಲ್ಲ.

 

ಈ ಘಟನೆಯು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಪ್ರತಿಪಾದನೆಯೊಂದಿಗೆ ಪ್ರಸಾರವಾಗುತ್ತಿದಂತೆ ಎಚ್ಚೆತ್ತ ಆಯೋಧ್ಯೆ ಪೊಲೀಸರು ಈ ಕುರಿತು  ಎಕ್ಸ್‌ ಖಾತೆಯಲ್ಲಿ ವಿವರಣೆಯನ್ನು ನೀಡಿದ್ದು ಈ ಘಟನೆಗೂ ಅಯೋಧ್ಯೆಯ ರಾಮಮಂದಿರದ ಅಧಿಕಾರಿಗಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಮುಖ್ಯಶಿಕ್ಷಕ ಮತ್ತು ಬಾಲಕಿಯ ಚಿತ್ರವನ್ನು ದಂಪತಿಗಳು ಎಂದು ತಪ್ಪಾಗಿ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights