ಫ್ಯಾಕ್ಟ್ಚೆಕ್ : ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಭಾರತೀಯರಲ್ಲಿ ಕ್ಷಮೆಯಾಚಿಸಿದರೆ?
ಮಾಲ್ಡೀವ್ಸ್ನ ಅಧ್ಯಕ್ಷ ಮೊಹಮ್ಮದ್ ಮುಯಿಝು, ತಮ್ಮ ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಭಾರತೀಯರಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಸ್ಕ್ರೀನ್ ಶಾಟ್ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಜನವರಿ 7ರಂದು 10.09 ಗಂಟೆ ಸಮಯದಲ್ಲಿ ಈ ಟ್ವೀಟ್ ಮಾಡಲಾಗಿದೆ. ಈಗ ಟ್ವೀಟ್ ಡಿಲೀಟ್ ಮಾಡಲಾಗಿದೆ ಎಂದು ಸ್ಕ್ರೀನ್ ಶಾಟ್ ಹಂಚಿಕೊಂಡಿರುವ ಅನೇಕರು ಪ್ರತಿಪಾದಿಸಿದ್ದಾರೆ.
Maldives Pres tenders an unconditional Apology with an Folded Hand pic.twitter.com/jLsSIUBLlt
— Rishi Bagree (@rishibagree) January 8, 2024
ಮಾಲ್ಡೀವ್ಸ್ ಅಧ್ಯಕ್ಷ ಟ್ವೀಟ್ ಮಾಡಿದ್ದಾರೆ ಎನ್ನಲಾದ ಸ್ಕ್ರೀನ್ ಶಾಟ್ನಲ್ಲಿ, ” ನನ್ನ ಸಚಿವರು, ಪ್ರಧಾನಿ ನರೇಂದ್ರ ಮೋದಿ ಕುರಿತು ನೀಡಿದ ಬೇಜವಾಬ್ದಾರಿ ಹೇಳಿಕೆಯಿಂದಾಗಿ ನನ್ನ ಭಾರತೀಯ ಸ್ನೇಹಿತರಲ್ಲಿ ಕೈಮುಗಿದು ಕ್ಷಮೆಯಾಚಿಸುತ್ತಿದ್ದೇನೆ. ಭಾರತೀಯ ಸ್ನೇಹಿತರನ್ನು ಸ್ವಾಗತಿಸಲು ಎದುರು ನೋಡುತ್ತೇನೆ ಮತ್ತು ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಬಲಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಬರೆಯಲಾಗಿದೆ. ಇದನ್ನು ಬಿಜೆಪಿ ಬೆಂಬಲಿತ ರಿಷಿ ಬಾಗ್ರಿ ” ಮಾಲ್ಡೀವ್ಸ್ ಅಧ್ಯಕ್ಷ ಕೈ ಮುಗಿದು ಕ್ಷಮೆಯಾಚಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್ನ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಬಾರತೀಯರಲ್ಲಿ ಕ್ಷಮೆಯಾಚಿಸಿ ಟ್ವೀಟ್ ಮಾಡಿದ್ದಾರೆ ಎನ್ನಲಾದ ಪೋಸ್ಟ್ ನಿಜವೇ ಎಂದು ಪರಿಶೀಲಿಸಲು ಅವರ ಎಕ್ಸ್ ಖಾತೆಯನ್ನು ಪರಿಶೀಲಿಸಲಾಗಿದ್ದು, ಅಧ್ಯಕ್ಷ ಮುಯಿಝು ಅವರ ಟೈಮ್ನಲ್ಲಿ ಕಡೆಯದಾಗಿ ಟ್ವೀಟ್ ಆಗಿರುವುದು ಜ. 5ರಂದು ರಾತ್ರಿ 11.04ಕ್ಕೆ. ಅದು ಈ ಕೆಳಗಿನಂತಿದೆ.
I have received concerns from some staff of HDC regarding the shift of municipal services from HDC to MCC. I would like to give full assurance that none of the staff will end up being forced to accept a reduction in salary, insurance, or any other benefits they currently receive,… https://t.co/0apsdWKb1H
— Dr Mohamed Muizzu (@MMuizzu) January 5, 2024
ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಎಕ್ಸ್ ಖಾತೆಯಲ್ಲಿ ಕಳೆದ ಎರಡು ವಾರಗಳ ಮಾಡಲಾಗಿರುವ ಟ್ವೀಟ್ಗಳನ್ನು ಪರಿಶೀಲಿಸಲಾಗಿದ್ದು, ಅದರ ಪ್ರಕಾರ ಜನವರಿ 5ರ ನಂತರ ಯಾವುದೇ ಟ್ವೀಟ್ ಪ್ರಕಟವಾಗಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಸ್ಕ್ರೀನ್ಶಾಟ್ ಹಂಚಿಕೊಂಡಿರುವ ಕೆಲವರು ಮೂಲ ಟ್ವೀಟ್ಅನ್ನು ಡಿಲೀಟ್ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಆದರೆ ಯಾವುದೇ ಎಕ್ಸ್ನಲ್ಲಿ ಟ್ವೀಟ್ ಮಾಡಿ ಡಿಲೀಟ್ ಮಾಡಿದರೂ, ಆ ಟ್ವೀಟ್ಗೆ ಬಂದ ಪ್ರತಿಕ್ರಿಯೆಗಳು ಹಾಗೇ ಇರುತ್ತವೆ. ಮುಯಿಝು ಅವರ ಟ್ವೀಟ್ಗೆ ಅಂತಹ ಯಾವುದೇ ಪ್ರತಿಕ್ರಿಯೆ ಬಂದ ದಾಖಲೆಗಳು ಇಲ್ಲ. ಮಾಲ್ಡೀವ್ಸ್ ಅಧ್ಯಕ್ಷರು ಕ್ಷಮೆಯಾಚಿಸಿದ ಸುದ್ದಿಯೂ ಯಾವುದೇ ಮಾಧ್ಯಮಗಳಲ್ಲಿ ವರದಿಯಾಗಿಲ್ಲ.
ಮಾಲ್ಡೀವ್ಸ್ ಸರ್ಕಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ” ಮಾಲ್ಡೀವ್ಸ್ ಸರ್ಕಾರ ಸೋಷಿಯಲ್ ಮೀಡಿಯಾದಲ್ಲಿ ವಿದೇಶ ನಾಯಕರು ಮತ್ತು ಗಣ್ಯ ವ್ಯಕ್ತಿಗಳ ಬಗ್ಗೆ ಅವಹೇಳನಕಾರಿ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದು ಗಮನಿಸಿದೆ.ಇವು ವ್ಯಕ್ತಿಗತ ಅಭಿಪ್ರಾಯಗಳೇ ಹೊರತು ಮಾಲ್ಡೀವ್ಸ್ ಸರ್ಕಾರದ ಅಭಿಪ್ರಾಯಗಳಲ್ಲ ಎಂದು ಸ್ಪಷ್ಟಪಡಿಸಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಮಾಲ್ಡೀವ್ಸ್ ಅಧ್ಯಕ್ಷರು ಭಾರತೀಯರನ್ನು ಕ್ಷಮೆಯಾಚಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಎಕ್ಸ್ನ ಸ್ಕ್ರೀನ್ಶಾಟ್ ನಕಲಿ ಎಂದು ಸ್ಪಷ್ಟವಾಗುತ್ತದೆ. ಹಾಗಾಗಿ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : ಫ್ಯಾಕ್ಟ್ಚೆಕ್ : ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್ ಬಾಂಬ್ ಸ್ಪೋಟದಲ್ಲಿ ಸಾವನ್ನಪ್ಪಿದನೇ?

