ಫ್ಯಾಕ್ಟ್‌ಚೆಕ್ : ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಗೆ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಿರಲಿಲ್ಲವೇ?

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿರಲಿಲ್ಲ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

“ಇವರು ನಮ್ಮ ದೇಶದ ರಾಷ್ಟ್ರಪತಿ ದೌಪದಿ ಮುರ್ಮು ಇವರು ರಾಮಾಯಣವನ್ನು ರಚಿಸಿದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದಿವಾಸಿ ಜನಾಂಗಕ್ಕೆ ಸೇರಿದವರು. ವಿಪರ್ಯಾಸವೆಂದರೆ ಇವರನ್ನು ಅಯೋಧ್ಯೆಯ ದೇಗುಲದ ಹೊರಾಂಗಣದಲ್ಲಿ ನಡೆಯುತ್ತಿರುವ ಸಾರ್ವಜನಿಕ ಕಾರ್ಯಕ್ರಮಕ್ಕೂ ಆಹ್ವಾನಿಸಿಲ್ಲ” ಎಂಬ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹಂಚಿಕೆಯಾಗುತ್ತಿದೆ. ಹಾಗಿದ್ದರೆ ಭಾರತದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಿರಲಿಲ್ಲವೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ರಾಷ್ಟ್ರಪತಿ ಮುರ್ಮು ಅವರಿಗೆ ಅಯೋಧ್ಯೆ ದೇಗುಲ ಟ್ರಸ್ಟ್ ಆಹ್ವಾನ ಕೊಟ್ಟಿದ್ದರ ಬಗ್ಗೆ ಮಾಧ್ಯಮಗಳು ಮಾಡಿದ ಹಲವು ವರದಿಗಳು ಲಭ್ಯವಾಗಿವೆ.

ಜನವರಿ 12, 2024ರಂದು ANI ತನ್ನ ಎಕ್ಸ್ ಪೋಸ್ಟ್ ನಲ್ಲಿ ಅಯೋಧ್ಯೆ ರಾಮ ದೇಗುಲದ ಪ್ರಾಣ ಪ್ರತಿಷ್ಠಾಪನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಯಿತು ಎಂದು ವಿವರಿಸಿದೆ. ANI ಟ್ವೀಟ್ ಇಲ್ಲಿದೆ.

ದಿ ಹಿಂದೂ ಪ್ರಕಟಿಸಿದ ವರದಿ ಪ್ರಕಾರ, ರಾಮ ದೇಗುಲದ ಪ್ರಾಣ ಪ್ರತಿಷ್ಠಾಪನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜನವರಿ 12ರಂದು ಆಹ್ವಾನ ನೀಡಲಾಗಿದೆ. ರಾಮ ಮಂದಿರ ನಿರ್ಮಾಣ ಸಮಿತಿಯ ನೃಪೇಂದ್ರ ಮಿಶ್ರಾ ಮತ್ತು ವಿಶ್ವಹಿಂದೂ ಪರಿಷತ್ ನ ಕಾರ್ಯಕಾರಿ ಅಧ್ಯಕ್ಷ ಅಲೋಕ್‌ ಕುಮಾರ್ ಅವರು ಮತ್ತು ಅವರೊಂದಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಇಬ್ಬರು, ರಾಷ್ಟ್ರಪತಿಯವರನ್ನು ಪ್ರತಿಷ್ಠಾಪನೆಗೆ ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ.

Fact Check: ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ಕೊಟ್ಟಿಲ್ಲ ಎನ್ನುವುದು ಸತ್ಯವೇ?

ಈ ವರದಿಗಳ ಆಧಾರದಲ್ಲಿ ಹೇಳುವುದಾದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಿರುವುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರಲಿಲ್ಲ ಎಂಬುದು ಸುಳ್ಳು. ವಾಸ್ತವವಾಗಿ ಅವರಿಗೆ ಆಹ್ವಾನ ನಿಡಲಾಗಿತ್ತು ಎಂಬುದು ವರದಿಗಳ ಆಧಾರದಲ್ಲಿ ದೃಢಪಟ್ಟಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ



ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights