ಫ್ಯಾಕ್ಟ್‌ಚೆಕ್ : ಇಂಗ್ಲೆಂಡ್ ವಿರುದ್ದ ಟೆಸ್ಟ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಆಡದಿರಲು ತಾಯಿಯ ಅನಾರೋಗ್ಯ ಕಾರಣವೇ?

ಫೆಬ್ರವರಿ 2 ರಿಂದ ವಿಶಾಖಪಟ್ಟಣದಲ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯಕ್ಕೆ ಭಾರತ ಕ್ರಿಕೆಟ್ ತಂಡವು ಸಜ್ಜಾಗುತ್ತಿದೆ. ಮೊದಲೆರಡು ಪಂದ್ಯಗಳನ್ನು ತಪ್ಪಿಸಿಕೊಂಡಿರುವ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಮೂರನೇ ಟೆಸ್ಟ್‌ ಪಂದ್ಯಕ್ಕೆ ಲಭ್ಯತೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕೊಹ್ಲಿ ಟೆಸ್ಟ್‌ನಲ್ಲಿ ಆಡದಿರಲು ತನ್ನ ತಾಯಿಯ ಅನಾರೋಗ್ಯ ಕಾರಣ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ತಾಯಿಯ ಜತೆಗಿರುವ ಉದ್ದೇಶದಿಂದ ಕೊಹ್ಲಿ ಪಂದ್ಯದಿಂದ ವಿರಾಮ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Is Virat Kohli's mother sick? Virat's brother gives massive update

ಭಾರತ ತಂಡದ ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿ  ವೈಯಕ್ತಿಕ ಕಾರಣಗಳಿಂದಾಗಿ ಪ್ರವಾಸಿ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಯ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ತಂಡ ಘೋಷಿಸುವ ವೇಳೆ ಅವರು ಅವಕಾಶ ಪಡೆದಿದ್ದರೂ ನಂತರ ಅವರು ಶಿಬಿರ ಬಿಟ್ಟು ಹೊರ ನಡೆದಿದ್ದರು. ಅವರು ಗೈರಾಗಲು ಕಾರಣ ಗೊತ್ತಿಲ್ಲದೇ ಹೋದರೂ, ಅವರ ತಾಯಿಗೆ ಅನಾರೋಗ್ಯವಿದೆ ಎಂಬುದಾಗಿ ಸುದ್ದಿ ಹರಡಿತ್ತು. ಸೋಶಿಯಲ್ ಮೀಡಿಯಾಗಳಲ್ಲಿ ಈ ಬಗ್ಗೆ ಚರ್ಚೆಯೂ ನಡೆಯುತ್ತಿವೆ. ಹಾಗಿದ್ದರೆ  ಸುದ್ದಿ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಭಾರತದ ಕ್ರಿಕೆಟ್‌ ಆಟಗಾರ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ದ ಪಂದ್ಯ ಆಡದಿರಲು ತಾಯಿಯ ಅನಾರೋಗ್ಯ ಕಾರಣ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದಂತೆ ವಿರಟ್‌ ಕೊಹ್ಲಿ ಸಹೋದರ ವಿಕಾಸ್ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ತಾಯಿಗೆ ಅನಾರೋಗ್ಯ ಇರುವ ವಿಚಾರವನ್ನು ವಿರಾಟ್ ಅವರ ಹಿರಿಯ ಸಹೋದರ ವಿಕಾಸ್ ನಿರಾಕರಿಸಿದ್ದಾರೆ. ತಾಯಿ ಫಿಟ್ ಮತ್ತು ಫೈನ್ ಎಂದು ಹೇಳಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಮತ್ತು ಮಾಧ್ಯಮಗಳು ನಕಲಿ ಸುದ್ದಿಗಳನ್ನು ಪ್ರಸಾರ ಮಾಡದಂತೆ ಅವರು ವಿನಂತಿಸಿದ್ದಾರೆ. ವಿರಾಟ್ ಅವರ ವೃತ್ತಿಜೀವನದಲ್ಲಿ ತಾಯಿ ಸರೋಜ್ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರಿಂದ ಸಾಕಷ್ಟು ಪ್ರೇರಣೆ ಪಡೆದುಕೊಂಡಿದ್ದಾರೆ.

 

View this post on Instagram

 

A post shared by Vikas Kohli (@vk0681)

ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ನಕಲಿ ಸುದ್ದಿಗಳ ಬಗ್ಗೆ ವಿಕಾಸ್ ಇನ್​ಸ್ಟಾಗ್ರಾಮ್​ನಲ್ಲಿ ಸ್ಟೋರಿಯೊಂದನ್ನು ಅಪ್​ಲೋಡ್ ಮಾಡಿದ್ದಾರೆ.

“ಎಲ್ಲರಿಗೂ ನಮಸ್ಕಾರ. ನಮ್ಮ ಅಮ್ಮನ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿರುವುದನ್ನು ನಾನು ಗಮನಿಸಿದ್ದೇನೆ. ನಮ್ಮ ತಾಯಿ ಸಂಪೂರ್ಣವಾಗಿ ಫಿಟ್ ಮತ್ತು ಫೈನ್ ಆಗಿದ್ದಾರೆ ಎಂದು ನಾನು ಸ್ಪಷ್ಟಪಡಿಸುತ್ತೇನೆ. ಅಲ್ಲದೆ, ನಾನು ಎಲ್ಲರಿಗೂ ಮತ್ತು ಮಾಧ್ಯಮಗಳಿಗೆ ವಿನಂತಿಸುತ್ತೇನೆ, ಸರಿಯಾದ ಮಾಹಿತಿಯಿಲ್ಲದೆ ಇಂತಹ ಸುದ್ದಿಗಳನ್ನು ಹರಡಬೇಡಿ,” ಎಂದು ವಿಕಾಸ್ ಕೊಹ್ಲಿ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಸಹೋದರ ವಿಕಾಸ್ ವದಂತಿಗಳನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ ಮತ್ತು ಈ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಮ್ಮ ತಾಯಿಯ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ದ ಗರಂ ಆಗಿದ್ದಾರೆ.

“ವಿರಾಟ್ ಕೊಹ್ಲಿ ಅವರು ನಾಯಕ ರೋಹಿತ್ ಶರ್ಮಾ, ತಂಡದ ಮ್ಯಾನೇಜ್‌ಮೆಂಟ್ ಮತ್ತು ಆಯ್ಕೆಗಾರರೊಂದಿಗೆ ಮಾತನಾಡಿದ್ದಾರೆ ಮತ್ತು ದೇಶವನ್ನು ಪ್ರತಿನಿಧಿಸುವುದು ಯಾವಾಗಲೂ ತನ್ನ ಪ್ರಮುಖ ಆದ್ಯತೆಯಾಗಿದೆ, ಕೆಲವು ವೈಯಕ್ತಿಕ ಸನ್ನಿವೇಶಗಳು ಅವರ ಉಪಸ್ಥಿತಿ ಮತ್ತು ದೊಡ್ಡ ಗಮನವನ್ನು ಬಯಸುತ್ತವೆ ಎಂದು ಒತ್ತಿಹೇಳಿದ್ದಾರೆ,” ಎಂದು ಬಿಸಿಸಿಐ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ ಇಂಗ್ಲೆಂಡ್ ವಿರುದ್ದ ಟೆಸ್ಟ್‌ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡದಿರಲು ತಾಯಿಯ ಅನಾರೋಗ್ಯ ಕಾರಣವಲ್ಲ ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಹಿಂದೂ ಕುಟುಂಬದ ಮೇಲೆ ಮುಸ್ಲಿಮರಿಂದ ಹಲ್ಲೆಎಂದು ಸುಳ್ಳು ಸಂದೇಶ ಹಂಚಿಕೆ


 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights