ಫ್ಯಾಕ್ಟ್‌ಚೆಕ್ : ‘ನಾನು ಮೀಸಲಾತಿಯನ್ನು ಇಷ್ಟಪಡುವುದಿಲ್ಲ’ ಎಂದು ಸಂಸತ್ತಿನಲ್ಲಿ ಮೋದಿ ಹೇಳಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಸಂಸತ್ತಿನ ಒಳಗೆಯೇ ಪ್ರಧಾನಿ ನರೇಂದ್ರ ಮೋದಿ ಅವರು ತಮ‌ಗೆ ಮೀಸಲಾತಿ ಇಷ್ಟವಿಲ್ಲ ಎಂದು ಹೇಳಿಕೊಂಡಿದ್ದಾರೆ. ಆ ಮೂಲಕ ಮೀಸಲಾತಿ ರದ್ದು ಮಾಡುವ ಸೂಚನೆ ನೀಡಿದ್ದಾರೆ.” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಪ್ರಧಾನಿ ಮೋದಿ ಅವರನ್ನು ಮೀಸಲಾತಿ ವಿರೋಧಿ, ಮೀಸಲಾತಿಯನ್ನು ಶೀಘ್ರದಲ್ಲೇ ರದ್ದು ಮಾಡುತ್ತಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋ ( screenshot)
ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋ ( screenshot)
ಹಾಗಿದ್ದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಂತೆ ಪ್ರಧಾನಿ ಮೋದೊ ನನಗೆ ಮೀಸಲಾತಿ ಇಷ್ಟವಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದಾರೆಯೇ ಎಂದು ಪರಿಶೀಲಿಸೋಣ.

ಇದನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಕೂಡ ಪ್ರಧಾನಿ ನರೇಂದ್ರ ಮೋದಿ ಅವರು ನಾನು ಮೀಸಲಾತಿಯನ್ನು ವಿರೋಧಿಸುತ್ತೇನೆ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾದರೆ ಈ ವೈರಲ್‌ ವಿಡಿಯೋದ ಸತ್ಯಾಸತ್ಯತೆ ಏನು ಎಂಬುದನ್ನು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್‌ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಿದಾಗ, ಪ್ರಧಾನಿ ಮೋದಿ ಮಾತನಾಡಿರು ಹಲವು ವಿಡಿಯೋಗಳು ಲಭ್ಯವಾಗಿವೆ. ಮುಖ್ಯವಾಗಿ ಸಂಸದ್‌ ಟಿವಿಯ ಸಂಪೂರ್ಣ ಆವೃತ್ತಿಯೊಂದು ಯುಟ್ಯುಬ್‌ನಲ್ಲಿ ಕಂಡು ಬಂದಿದೆ. ಅದರಲ್ಲಿ ಪ್ರಧಾನಿ ಮೋದಿ ಅವರು 1:34:04 ಸಮಯದವರೆಗೆ ಮಾತನಾಡಿರುವುದನ್ನು ನೋಡಬಹುದಾಗಿದೆ.

ಹಾಗಾಗಿ ಇದು ಮೋದಿಯವರ ಸಂಪೂರ್ಣ ಭಾಷಣದ ಎಡಿಟ್ ಮಾಡಿದ ವೀಡಿಯೊ ಕ್ಲಿಪ್ ಎಂಬು ಸ್ಪಷ್ಟವಾಗಿದೆ. ಇನ್ನು ಸಂಸದ್‌ ಟಿವಿಯಲ್ಲಿ ಉಲ್ಲೇಖವಿರುವಂತೆ ಈ ವೈರಲ್‌ ವಿಡಿಯೋ ಫೆಬ್ರವರಿ 7, 2024 ರದ್ದಾಗಿದೆ. ರಾಜ್ಯಸಭೆಯಲ್ಲಿ ಭಾರತದ ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಮೋದಿ ಉತ್ತರಿಸುವ ವೇಳೆ ತಮ್ಮ ಭಾಷಣದಲ್ಲಿ, ಕಾಂಗ್ರೆಸ್ ಯಾವಾಗಲೂ ಎಸ್‌ಸಿ/ಎಸ್‌ಟಿಗಳು ಮತ್ತು ಮೀಸಲಾತಿ ವ್ಯವಸ್ಥೆಯನ್ನು ವಿರೋಧಿಸುತ್ತದೆ ಎಂದು ಪ್ರಸ್ತಾಪಿಸಿದ್ದಾರೆ. ಈ ಕುರಿತು ಹಿಂದೂಸ್ತಾನ್‌ ಟೈಮ್ಸ್‌ ಕೂಡ ವರದಿಯನ್ನು ಮಾಡಿದೆ

ಹಿಂದೂಸ್ತಾನ್‌ ಟೈಮ್ಸ್‌ ವರದಿ
ಹಿಂದೂಸ್ತಾನ್‌ ಟೈಮ್ಸ್‌ ವರದಿ

ಇದೇ ವೇಳೆ ಪ್ರಧಾನಿ ಮೋದಿ ಅವರು ನೆಹರು ಅವರ ಉಲ್ಲೇಖವನ್ನು ಓದಿದ್ದು, ಅದರಲ್ಲಿ “ನಾನು ಯಾವುದೇ ರೀತಿಯ ಮೀಸಲಾತಿಯನ್ನು ಇಷ್ಟಪಡುವುದಿಲ್ಲ, ವಿಶೇಷವಾಗಿ ಸೇವೆಗಳಲ್ಲಿ. ರಾಜ್ಯಸಭೆಯಲ್ಲಿ ಅಸಮರ್ಥತೆ ಮತ್ತು ಎರಡನೇ ದರ್ಜೆಯ ಮಾನದಂಡಗಳಿಗೆ ಕಾರಣವಾಗುವ ಯಾವುದೇ ಅಂಶವಾದರೂ ನಾನು ಬಲವಾಗಿ ವಿರೋಧಿಸುತ್ತೇನೆ” ಎಂದು ಓದಿದ್ದಾರೆ. ಇದನ್ನೇ ಎಡಿಟ್‌ ಮಾಡಿ ಸುಳ್ಳು ಸುದ್ದಿ ಹರಿಬಿಡಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಧಾನಿ ಮೋದಿ ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ ಕಾಂಗ್ರೆಸ್ ಯಾವಾಗಲೂ ಎಸ್‌ಸಿ/ಎಸ್‌ಟಿಗಳು ಮತ್ತು ಮೀಸಲಾತಿ ವ್ಯವಸ್ಥೆಯನ್ನು ವಿರೋಧಿಸುತ್ತದೆ ಎಂದು ಪ್ರಸ್ತಾಪಿಸಿದ ಹೇಳಿಕೆಯನ್ನು ಎಡಿಟ್ ಮಾಡಿ ಪ್ರಧಾನಿಯೇ ವೀಸಲಾತಿಯನ್ನು ವಿರೋಧಿಸಿ ಹೇಳಿಕೆ ನೀಡಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ನಾಯಿ ತಿನ್ನುವ ಬಿಸ್ಕೆಟ್‌ಅನ್ನು ಕಾರ್ಯಕರ್ತನಿಗೆ ತಿನ್ನಲು ನೀಡಿದ್ರಾ ರಾಹುಲ್ ಗಾಂಧಿ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights