ಫ್ಯಾಕ್ಟ್‌ಚೆಕ್ : ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕಲುಷಿತ ನದಿ ನೀರನ್ನು ಕುಡಿದು ಆಸ್ವಸ್ಥರಾಗಿದ್ದ ಹಳೆಯ ಸುದ್ದಿಯನ್ನು ಇತ್ತೀಚಿನದ್ದು ಎಂದು ಹಂಚಿಕೆ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತನ್ನ ಬೆಂಬಲಿಗರನ್ನು ಮೆಚ್ಚಿಸಲು ಮತ್ತು ನದಿ ನೀರು ಶುದ್ಧವಾಗಿದೆ ಎಂದು ಸಾಬೀತುಪಡಿಸಲು ‘ಕಾಳಿ ಬೀನ್ ನದಿಯ ನೀರನ್ನು ಕುಡಿಯುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

Crazy Clips ಎಂಬ ಎಕ್ಸ್‌ ಖಾತೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್  ಮಾನ್ ಹೀಗೆ ತನ್ನ ಬೆಂಬಲಿಗರನ್ನು ಮೆಚ್ಚಿಸಲು ನದಿ ನೀರು ಶುದ್ದವಾಗಿದೆ ಎಂದು ನಿರೂಪಿಸಲು ಕಲುಷಿತ ನೀರನ್ನು ಕುಡಿದಿದ್ದು ನಿಜವೇ ಮತ್ತು ಈ ಘಟನೆ ಯಾವಾಗ ನಡೆದಿದೆ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

Crazy Clips ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಂತೆ ಭಗವಂತ್ ಮಾನ್ ನದಿ ನೀರನ್ನು ಹೀಗೆ ನಿಜವಾಗಿಯೂ ಕುಡಿದಿದ್ದಾರೆಯೇ ಎಂದು ಪರಿಶೀಲಿಸಿದಾಗ, 2022ರ ಜುಲೈ 21 ರಂದು ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟಿಸಲಾದ ಸುದ್ದಿಯೊಂದು ಲಭ್ಯವಾಗಿದೆ.

ಕಾಳಿ ಬೀನ್  ನದಿಯ ಸ್ವಚ್ಚತೆಯ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ್ದ ಭಗವಂತ್ ಮಾನ್ ನದಿ ನೀರನ್ನು ಕುಡಿಯುವ ಮೂಲಕ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನದಿ ನೀರು ಶುದ್ದವಾಗಿದೆ ಎಂದು ಕಲುಷಿತ ನೀರು ಕುಡಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು ಎಂದು ಇಂಡಿಪೆಂಡೆಂಟ್ . ಕೋ ವರದಿ ಮಾಡಿದೆ.

ಭಗವಂತ್ ಮಾನ್ ಅವರು ಅಸ್ವಸ್ಥಗೊಂಡ ಹಿನ್ನೆಲೆ ದೆಹಲಿಯ ಅಪೊಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಹೊಟ್ಟೆನೋವಿನಿಂದ ಬಳಲುತ್ತಿದ್ದರು ತಪಾಸಣೆ ನಡೆಸಿದ ನಂತರ ಅವರಿಗೆ ಇನ್‍ಫೆಕ್ಷನ್ ಆಗಿದೆ ಎಂದು ವೈದ್ಯರು ತಿಳಿಸಿದ್ದರು ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2022ರಲ್ಲಿ ಭಗವಂತ್ ಮಾನ್ ಕಲುಷಿತ ನದಿ ನೀರು ಕುಡಿದು  ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಳೆಯ ಸುದ್ದಿಯನ್ನು ಇತ್ತೀಚಿನದ್ದು ಎಂದು ಹಂಚಿಕಳ್ಳಲಾಗಿದೆ. ಹಾಗಾಘಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಭಾರತ್ ಅಕ್ಕಿಯನ್ನು ಮುಸ್ಲಿಮರೇ ಹೆಚ್ಚು ಖರೀದಿಸುತ್ತಿದ್ದಾರೆ ಎಂದು ಎಡಿಟ್ ಮಾಡಿದ ಫೋಟೊ ಹಂಚಿಕೊಂಡ BJP ಬೆಂಬಲಿಗರು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights