ಫ್ಯಾಕ್ಟ್‌ಚೆಕ್ : 2024ರ ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ನಕಲಿ ಪೋಸ್ಟ್‌ ಹಂಚಿಕೆ

2024 ರ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾದ ಸಂದೇಶದ ಸ್ಕ್ರೀನ್‌ಶಾಟ್‌ಅನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಲಾಗುತ್ತಿದೆ. 2024ರ ಲೋಕಸಭೆ ಚುನಾವಣೆ ಸಂಬಂಧ ಚುನಾವಣಾ ಆಯೋಗ ಮತದಾನದ ದಿನಾಂಕವನ್ನು ಘೋಷಣೆ ಮಾಡಿದ್ದು,  ಏಪ್ರಿಲ್ 19 ರಂದು ಮತದಾನ ನಡೆಯಲಿದ್ದು, ಮೇ 22 ರಂದು ಮತ ಎಣಿಕೆ ನಡೆಯಲಿದೆ ಎಂದು ಸಂದೇಶದಲ್ಲಿ ಹೇಳಲಾಗಿದೆ.

FACT CHECK: Lok Sabha Election To Be Held On April 19, Counting On May 22? Election Commission Clarifies

ಹಾಗಿದ್ದರೆ ಮಾರ್ಚ್ 28, 2024ರಂದು ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿಯಾಗಿದ್ದು, ಏಪ್ರಿಲ್ 19ಕ್ಕೆ ಮತದಾನ, ಮೇ 22 ಕ್ಕೆ ಚುನಾವಣಾ ಫಲಿತಾಂಶ ಹೊರಬೀಳಲಿದೆ ಎಂಬ ಸುದ್ದಿ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಚುನಾವಣಾ ಆಯೋಗದ ವೆಬ್‌ಸೈಟ್‌ಅನ್ನು ಸರ್ಚ್ ಮಾಡಿದಾಗ, ಭಾರತೀಯ ಚುನಾವಣಾ ಆಯೋಗವು( ECI) 2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನಕಲಿ ಸುದ್ದಿ ಹರಿದಾಡುತ್ತಿದೆ ಎಂದು ಮಾಹಿತಿ ಹಂಚಿಕೊಂಡಿದೆ ಮತ್ತು 2024ರ ಚುನಾವಣಾ ಸಂಬಂಧ ಯಾವುದೇ ದಿನಾಂಕಗಳನ್ನು ಘೋಷಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

2024ರ ಲೋಕಸಭಾ ಚುನಾವಣೆಯ ವೇಳಾಪಟ್ಟಿಯ ಕುರಿತು ವಾಟ್ಸಾಪ್‌ ನಲ್ಲಿ ಹಂಚಿಕೊಳ್ಳಲಾಗುತ್ತಿರುವ ಸಂದೇಶವು  ನಕಲಿಯಾಗಿದ್ದು ಭಾರತೀಯ ಚುನಾವಣಾ ಆಯೋಗವು ಇಲ್ಲಿಯವರೆಗೆ ಯಾವುದೇ ದಿನಾಂಕಗಳನ್ನು ಪ್ರಕಟಿಸಿಲ್ಲ. ಚುನಾವಣಾ ವೇಳಾಪಟ್ಟಿಯನ್ನು ಆಯೋಗವು ಪತ್ರಿಕಾಗೋಷ್ಠಿಯ ಮೂಲಕ ಪ್ರಕಟಿಸಲಿದೆ”ಎಂದು ತನ್ನ ಪೋಸ್ಟ್‌ನಲ್ಲಿ  ತಿಳಿಸಿದೆ.

ಮಾರ್ಚ್ 13 ರ ನಂತರ 2024 ರ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ECI ಪ್ರಕಟಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ. ಚುನಾವಣೆ ಘೋಷಣೆಯಾದ ನಂತರ ಮಾದರಿ ನೀತಿ ಸಂಹಿತೆ (MCC) ಜಾರಿಗೆ ಬರಲಿದೆ. ECI ತಂಡಗಳು ಇಲ್ಲಿಯವರೆಗೆ ಹಲವಾರು ರಾಜ್ಯಗಳಿಗೆ ಭೇಟಿ ನೀಡಿವೆ ಮತ್ತು ಅಲ್ಲಿನ ಚುನಾವಣಾ ಸಿದ್ಧತೆಯ ಬಗ್ಗೆ ಅವಲೋಕನ ಮಾಡಲು ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ (CEO) ಸಭೆಗಳನ್ನು ನಡೆಸಿವೆ.

ಒಟ್ಟಾರೆಯಾಗಿ ಹೇಳುವುದಾದರೆ, ಮಾರ್ಚ್ 28, 2024ರಂದು ನಾಮಪತ್ರ ಸಲ್ಲಿಕೆಗೆ ದಿನಾಂಕವನ್ನು ಘೋಷಣೆ ಮಾಡಿದ್ದು, ಏಪ್ರಿಲ್ 19ಕ್ಕೆ ಮತದಾನ, ಮೇ 22 ಕ್ಕೆ ಚುನಾವಣಾ ಫಲಿತಾಂಶ ಎಂದು ಪ್ರಸಾರವಾಗುತ್ತಿರುವ ಸುದ್ದಿ ನಕಲಿ ಎಂದು ಭಾರತೀಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. 2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಅಧಿಕೃತ ದಿನಾಂಕವನ್ನು ನಿಗದಿಪಡಿಸಲಾಗಿಲ್ಲ ಎಂದು ಭಾರತೀಯ ಚುನಾಣಾ ಆಯೋಗವು ತಿಳಿಸಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಮಹಿಳೆಗೆ ಕಿರುಕುಳ ನೀಡಿದ ಯುವಕರು ಮುಸ್ಲಿಮರಲ್ಲ! ಮತ್ತ್ಯಾರು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights