FACT CHECK | ‘ಪ್ರೊ ನಿತಾಶಾ ಕೌಲ್‌’ ಪಾಕಿಸ್ತಾನದವರಲ್ಲ ಭಾರತದ ಮೂಲದವರು

ಫೆಬ್ರವರಿ 24 ಮತ್ತು 25 ರಂದು ಕರ್ನಾಟಕ ಸರ್ಕಾರ ಆಯೋಜಿಸಿದ್ದ ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ -2024’ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಕರ್ನಾಟಕ ಸರ್ಕಾರವು ನಿತಾಷಾ ಕೌಲ್ ಅವರನ್ನು ಆಹ್ವಾನಿಸಿತ್ತು. ಆದರೆ ಅವರನ್ನು ಬೆಂಗಳೂರಿನ ದೇವನಹಳ್ಳಿ ವಿಮಾನ ನಿಲ್ದಾಣದಿಂದ ವಾಪಸ್ ಕಳುಹಿಸಲಾಗಿತ್ತು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಈಗ ಇದೇ ವಿಚಾರವನ್ನು ಇಟ್ಟುಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಬಲಪಂಥೀಯ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದ್ದು. ನಿತಾಷಾ ಕೌಲ್ ಮತ್ತು ಕರ್ನಾಟಕ ಸರ್ಕಾರವನ್ನು ಗುರಿಯಾಗಿಸಿಕೊಂಡು @AdvocateShubha ಎಂಬುವವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

ಭಾರತೀಯ ಸೈನಿಕರನ್ನು ರೇಪಿಸ್ಟ್ ಗಳು ಎಂದು ಕರೆದು ಅವಮಾನ ಮಾಡಿದ್ದ ಪಾಕಿಸ್ತಾನ ಪರ ಜಿಹಾದಿ ಪಿಂಡಕ್ಕೆ ಕರ್ನಾಟಕ ಕಾಂಗ್ರೆಸ್ ರತ್ನಗಂಬಳಿ ಹಾಸಿ ಸ್ವಾಗತಿಸಿತ್ತು. ವಿಷಯ ತಿಳಿದ ಕೇಂದ್ರ ಸರ್ಕಾರ ಆ ದ್ರೋಹಿಯನ್ನು ಗಡಿಪಾರು ಮಾಡಿದೆ. ಎಂದು ಮುರಳಿ ಪುರುಶೋತ್ತಮ ಎಂಬ ಎಕ್ಸ್‌ ಬಳಕೆದಾರ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

“ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಆಮಂತ್ರಣದಂತೆ ಭಾರತದ ಸಂವಿಧಾನದ ಬಗ್ಗೆ ಭಾಷಣ ಮಾಡಲು ಪಾಕಿಸ್ತಾನದಿಂದ ಬಂದಿದ್ದ ನಿತಾಷ ಕೌಲ್‌ ಅನ್ನೋ ಜಿಹಾದಿಯನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆದೇಶದಂತೆ ಕೇಂದ್ರೀಯ ಭದ್ರತಾ ಪಡೆ ಬೆಂಗಳೂರು ವಿಮಾನ ನಿಲ್ದಾಣದಿಂದ ಸಿದ್ದರಾಮಯ್ಯ ತವರು ಮನೆ ಪಾಕಿಸ್ತಾನಕ್ಕೆ ಕಳಿಸಿದೆ. ಮಾನ ಮರ್ಯಾದೆ ಇಲ್ಲದ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಸರಕಾರಿ ಪೋಷಿತ ಜಿಹಾದಿ ಕೂಲಿಗಳನ್ನು ರಾಜ್ಯಕ್ಕೆ ಕರೆಸಿಕೊಳ್ಳುತ್ತಿರುವುದು ದುರಂತ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ”.

ಹಾಗಿದ್ದರೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಪಾದಿಸಿದಂತೆ ನಿತಾಷಾ ಕೌಲ್ ಅವರು ಪಾಕಿಸ್ತಾನದಿಂದ ಬಂದಿದ್ದರೆ. ಪಾಕಿಸ್ತಾನದವರನ್ನು ಬೇಕಂತಲೇ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಇವರನ್ನು ಆಹ್ವಾನಿಸಿತ್ತೆ? ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೊಣ.

ಫ್ಯಾಕ್ಟ್‌ಚೆಕ್‌ 

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಆರೋಪಿಸಿರುವಂತೆ ನಿತಾಶಾ ಕೌಲ್ ಪಾಕಿಸ್ತಾನ ಮೂಲದವರೇ ಎಂದು ಪರಿಶೀಲಿಸಿದಾಗ, ನಿತಾಶಾ ಕೌಲ್ ಭಾರತದ ಮೂಲದವರು ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಜನಿಸಿದ್ದ ನಿತಾಶಾ ಕೌಲ್‌, ಪ್ರಸ್ತುತ ಲಂಡನ್‌ನಲ್ಲಿ ವಾಸವಿದ್ದಾರೆ. ಶ್ರೀನಗರದ ಪಂಡಿತ ಕುಟುಂಬವಾಗಿದ್ದ ಈಕೆ, ಬಳಿಕ ಉತ್ತರ ಪ್ರದೇಶಕ್ಕೆ ವಲಸೆ ಬಂದಿದ್ದರು. ಈಗ ಲಂಡನ್​ ವೆಸ್ಟ್​ ಮಿನಿಸ್ಟರ್​ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ. ರಾಜಕೀಯ, ಅಂತಾರಾಷ್ಟ್ರೀಯ ಸಂಬಂಧ ಬಗ್ಗೆ ಉಪನ್ಯಾಸವನ್ನೂ ನೀಡುತ್ತಾರೆ.

ಬೆಂಗಳೂರಿನಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಿದ್ದ ಲಂಡನ್‌ ಮೂಲದ ಲೇಖಕಿ ನಿತಾಶಾ ಕೌಲ್ (Nitasha Kaul) ಅವರನ್ನು ವಲಸೆ ಅಧಿಕಾರಿಗಳು (Immigration Officers) ಬೆಂಗಳೂರು ವಿಮಾನ ನಿಲ್ದಾಣದಿಂದ ವಾಪಸ್‌ ಕಳುಹಿಸಿದ್ದರು ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ

ಕಾಶ್ಮೀರಿ ಪಂಡಿತೆಯಾಗಿರುವ ನಿತಾಶಾ ಕೌಲ್, ಆರೆಸ್ಸೆಸ್‌ನ ಕಟು ಟೀಕಾಕಾರರಾಗಿದ್ದಾರೆ. ಕೌಲ್ ಭಾರತೀಯ ಪ್ರಜೆಯೂ ಆಗಿದ್ದಾರೆ. ಆದರೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದ ಕೌಲ್ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಿಂದಲೇ ವಾಪಸ್ ಕಳಿಸಲಾಗಿದೆ. ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಕೌಲ್, “ನಾವು ಏನೂ ಮಾಡಲು ಸಾಧ್ಯವಿಲ್ಲ. ದಿಲ್ಲಿಯಿಂದ ಆದೇಶ ಬಂದಿದೆ ಎಂಬ ಮಾತು ಹೊರತುಪಡಿಸಿ ಬೇರಾವ ಕಾರಣವನ್ನೂ ಅಧಿಕಾರಿಗಳು ನನಗೆ ನೀಡಲಿಲ್ಲ. ನಾನು ಭಾರತ ಪ್ರವೇಶಿಸಲು ಸಾಧ್ಯವಿಲ್ಲ ಎಂಬ ಯಾವುದೇ ಪೂರ್ವಭಾವಿ ಮಾಹಿತಿ ಅಥವಾ ನೋಟಿಸ್ ಅನ್ನು ನನಗೆ ನೀಡಲಾಗಿರಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ನಾನು ಬೆಂಗಳೂರಿಗೆ ಬಂದಿಳಿದ 24 ಗಂಟೆಯ ನಂತರ ಬ್ರಿಟಿಷ್ ಏರ್‌ವೇಸ್ ವಿಮಾನದ ಮೂಲಕ ನನ್ನನ್ನು ಲಂಡನ್‌ಗೆ ವಾಪಸ್‌ ಕಳುಹಿಸಿದರು. ನಾನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ 12 ಗಂಟೆಗಳನ್ನು ಕಳೆದಿದ್ದೇನೆ. ಹಲವಾರು ಗಂಟೆಗಳ ಕಾಲ ನನ್ನನ್ನು ವಿಚಾರಣೆ ನಡೆಸಿದರು ಮತ್ತು 24 ಗಂಟೆಗಳ ನಂತರ ವಾಪಸ್ ಕಳುಹಿಸಿದರು ಎಂದು ಕೌಲ್ ಆರೋಪಿಸಿದ್ದರು.

ಒಟ್ಟಾರೆಯಾಗಿ ಹೇಳುವುದಾದರೆ, ಜಮ್ಮು ಮತ್ತು ಕಾಶ್ಮೀರದ ವಿಚಾರದಲ್ಲಿ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದ್ದ ರೀತಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಭಾರತ ಮೂಲದ ಲಂಡನ್‌ನಲ್ಲಿ ವಾಸಿಸುತ್ತಿರು ನಿತಾಶಾ ಕೌಲ್‌ಅವರನ್ನು ಪಾಕಿಸ್ತಾನದವರು ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ



ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights