FACT CHECK | ಇಟಲಿ ಪ್ರಧಾನಿ ಎಕ್ಸ್‌ ಖಾತೆಯಲ್ಲಿ ‘ಮೋದಿ ಕಾ ಪರಿವಾರ್’ ಎಂದು ಬರೆಯಲಾಗಿದೆಯೇ?

ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದು ಇಟಲಿ ಪ್ರಧಾನಿಯ ಸೋಶಿಯಲ್ ಮೀಡಿಯದಲ್ಲಿ ‘ಮೋದಿ ಕಾ ಪರಿವಾರ್’ ಎಂದು ಬರೆದುಕೊಂಡಿದ್ದಾರೆ ಎಂದು ಪ್ರತಿಪಾದಿಸಿ ಸ್ಕ್ರೀನ್‌ಶಾಟ್‌ಅನ್ನು ಹಂಚಿಕೊಳಲಾಗುತ್ತಿದೆ.

Image

ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ X  ಹ್ಯಾಂಡಲ್‌ನ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಳ್ಳುತ್ತಾ  ಅವರು ತಮ್ಮ ಹೆಸರಿನ ಮುಂದೆ “ಮೋದಿ ಕಾ ಪರಿವಾರ” (ಮೋದಿ ಅವರ ಕುಟುಂಬ) ಎಂದು ಸೇರಿಸಿದ್ದಾರೆ ಎಂದು ಬಿಜೆಪಿ ಬೆಂಬಲಿತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಸೀಲಿಸಲು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಯವರ ಅಧಿಕೃತ ಎಕ್ಸ್‌ ಖಾತೆಯನ್ನು ಪರಿಶೀಲಿಸಿದಾಗ ತಮ್ಮ ಹೆಸರಿನ ಮುಂದೆ ‘ಮೋದಿ ಕಾ ಪರಿವಾರ್’ ಎಂದು ಸೇರಿಸಿಲ್ಲ ಎಂಬುದು ಸ್ಪಷ್ಟವಾಗಿದೆ.

All the screenshots are fake as none of them have put anything related to PM Modi next to their X usernames.

ಪ್ರಧಾನಿ ಮೆಲೋನಿ ನಿಜವಾಗಿಯೂ ತಮ್ಮ ಹೆಸರಿನ ಮುಂದೆ ‘ಮೋದಿ ಕಾ ಪರಿವಾರ್’ ಎಂದು ಸೇರಿಸಿದ್ದರೆ, ಮಾಧ್ಯಮಗಳು ಅದನ್ನು ಹೆಚ್ಚು ಪ್ರಚಾರ ಮಾಡುತ್ತಿದ್ದವು, ಅಂತಹ ಯಾವುದೇ ವರದಿಗಳು ಲಭ್ಯವಾಗಿಲ್ಲ. ಅಲ್ಲದೆ ಕಂಗನಾ ರಣಾವತ್ ಖಾತೆಯಲ್ಲಿ (ಅಧಿಕೃತ ಎಕ್ಸ್ ಹ್ಯಾಂಡಲ್ ಅನ್ನು) ಪರಿಶೀಲಿಸಿದಾಗ, ಅವರು ತಮ್ಮ ಹೆಸರಿನ ಮುಂದೆ ಪ್ರಧಾನಿ ಮೋದಿಗೆ ಸಂಬಂಧಿಸಿದ ಯಾವುದನ್ನೂ ಸೇರಿಸಿಲ್ಲ ಎಂಬುದು ಸ್ಪಷ್ಟವಾಗಿದೆ.

All the screenshots are fake as none of them have put anything related to PM Modi next to their X usernames.

 

ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ‘ಪ್ರಧಾನಿ ಮೋದಿಗೆ ಕುಟುಂಬವಿಲ್ಲ’ ಎಂದು ಹೇಳಿಕೆ ನೀಡಿದ್ದಕ್ಕೆ ಪ್ರತಿಕ್ರಿಯೆಯಾಗಿ ಅಮಿತ್ ಶಾ, ಪಕ್ಷದ ಅಧ್ಯಕ್ಷ ಜೆಪಿ ನಡ್ದಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೆಸರಿನ ಪಕ್ಕ ಮೋದಿ ಕಾ ಪರಿವಾರ್ (ಮೋದಿ ಕುಟುಂಬದವರು) ಎಂದು ಬರೆದುಕೊಂಡಿದ್ದರು.

ಒಟ್ಟಾರೆಯಾಗಿ ಹೇಳುವುದಾದರೆ, ‘ಮೋದಿ ಕಾ ಪರಿವಾರ್’ ಎಂಬ ಬಿಜೆಪಿಯ ಸಾಮಾಜಿಕ ಮಾಧ್ಯಮಗಳ ಅಭಿಯಾನದಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಬೆಂಬಲ ಸೂಚಿಸಿದ್ದಾರೆ ಎಂದು ಸುಳ್ಳು ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಮುಸ್ಲಿಮರು ಹಿಂದೂ ಹುಡುಗಿಯರ ಬ್ರೈನ್‌ವಾಶ್ ಮಾಡಿ ಬುರ್ಖಾ ಧರಿಸುವಂತೆ ಮಾಡಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights