FACT CHECK | ರಾಮೇಶ್ವರಂ ಕೆಫೆ ಬಾಂಬರ್‌ನನ್ನು ಬಂಧಿಸಲಾಗಿದೆ ಎಂದು ಸುಳ್ಳು ಫೋಸ್ಟ್‌ ಹಂಚಿಕೆ

ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಹೈದರಬಾದ್‌ನಲ್ಲಿ ಬಂಧಿಸಲಾಗಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

https://twitter.com/GamesofCutPiece/status/1764888910591853046

ಕರ್ನಾಟಕದ ರಾಮೇಶ್ವರಂ ಕೆಫೆಯಲ್ಲಿ ನಡೆದ ಐಇಡಿ ಸ್ಫೋಟ ಪ್ರಕರಣದಲ್ಲಿ ಇಸ್ಲಾಮಿಕ್ ಭಯೋತ್ಪಾದಕ ಮತ್ತು ಪಿಎಫ್‌ಐ ಸದಸ್ಯ ಅಬ್ದುಲ್ ಸಲೀಂ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆಂಧ್ರಪ್ರದೇಶದಲ್ಲಿ ಬಂಧಿಸಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಇದೇ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ಕೀವರ್ಡ್‌ಗಳನ್ನು ಬಳಸಿ ಗೂಗಲ್ ಸರ್ಚ್ ಮಾಡಿದಾಗ, ಹಲವು ಮಾಧ್ಯಮಗಳ ವರದಿಗಳು ಲಭ್ಯವಾಗಿದ್ದು, ಮಾರ್ಚ್ 3, 2024ರಂದು ತೆಲಂಗಾಣ ಉತ್ತರದ PFI ಸಂಘಟನೆಯ ಕಾರ್ಯದರ್ಶಿ ಅಬ್ದುಲ್‌ ಸಲೀಂ ಎಂಬುವವರನ್ನು ದೇಶದ ವಿರೋಧಿ ಪ್ರಕಣದಲ್ಲಿ ಬಂಧಿಸಿದೆ ಎಂದು ತಿ ಹಿಂದೂ ರದಿ ಮಾಡಿದೆ.

“ನಿಜಾಮಾಬಾದ್‌ ಪಿಎಫ್‌ಐ ಪ್ರಕರಣಕ್ಕೆ ಸಂಬಂಧಿಸದಿಂತೆ ಎನ್‌ಐಎ ಮೈದುಕುರ್ ನಿಂದ ವ್ಯಕ್ತಿಯನ್ನು ಬಂಧಿಸಿದ್ದು. ಬಂಧಿತದನನ್ನು ಅಬ್ದುಲ್‌ ಸಲೀಂ ಎಂದು ಗುರುತಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿಲಾಗಿದೆ.

ಭಾರತವನ್ನು 2047ರೊಳಗೆ ಇಸ್ಲಾಮಿಕ್‌ ರಾಷ್ಟ್ರವನ್ನಾಗಿಸಬೇಕೆಂಬ ಗುರಿಯೊಂದಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹೂಡಿದ ಸಂಚಿನ ಭಾಗವಾಗಿ ಅಬ್ದುಲ್‌ ಸಲೀಂ ಮುಸ್ಲಿಂ ಯುವಕರನ್ನು ಭಯೋತ್ಪಾದನೆ ಕೃತ್ಯಕ್ಕೆ ನೇಮಕ ಮಾಡಿಕೊಳ್ಳುತ್ತಿದ್ದ, ಬಳಿಕ ಅವರನ್ನು ಉಗ್ರ ತರಬೇತಿಗೆ ಕಳಿಸುತ್ತಿದ್ದ ಎಂಬ ಆರೋಪವಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಜುಲೈ 2022ರಲ್ಲಿ ನಿಜಾಮಾಬಾದ್‌ ನಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಸುಳಿವು ನೀಡಿದವರಿಗೆ ₹2 ಲಕ್ಷ ಬಹುಮಾನದ ಘೋಷಣೆಯೂ ಆಗಿತ್ತು. ಪ್ರಕರಣದಲ್ಲಿ ಅಬ್ದುಲ್‌ ಸಲೀಂ 15ನೇ ಆರೋಪಿಯಾಗಿದ್ದಾನೆ.

ಬಾಂಬರ್‌ನ ಸುಳಿವು ನೀಡಿದವರಿಗೆ ರೂ 10ಲಕ್ಷ ಬಹುಮಾನ :

ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಚುರುಕಿನ ತನಿಖೆ ಆರಂಭಿಸಿದೆ. ಬುಧವಾರ ಬಾಂಬರ್‌ನ ಫೋಟೋವನ್ನು ಹಂಚಿಕೊಂಡಿರುವ ಎನ್‌ಐಎ, ಬಾಂಬರ್‌ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ.

ಈ ಕುರಿತು ಎಕ್ಸ್ ನಲ್ಲಿ (ಟ್ವೀಟ್) ಬಾಂಬರ್​ ಫೋಟೋ ಹಂಚಿಕೊಂಡಿರುವ ಎನ್​ಐಎ, ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಹೇಳಿದೆ. ಒಂದು ವೇಳೆ ಸುಳಿವು ಸಿಕ್ಕರೆ 080289510999 ಮತ್ತು 8904241100 ಈ ನಂಬರ್ ಗಳಿಗೆ ಮಾಹಿತಿ ನೀಡಬಹುದು.ಇನ್ನು ಭಾತ್ಮೀದಾರರ(ಸುಳಿವು ಕೊಟ್ಟವರು) ಮಾಹಿತಿಯನ್ನ ಗೌಪ್ಯವಾಗಿ ಇಡಲಾಗುವುದೆಂದು ಸ್ಪಷ್ಟಪಡಿಸಿದೆ.

ಸಿಸಿಬಿ ತನಿಖೆ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಫೋಟೋ ಪತ್ತೆಯಾಗಿದ್ದು, ಇದೀಗ ಆ ಫೋಟೋವನ್ನು ಎನ್​ಐಎ ಬಿಡುಗಡೆ ಮಾಡಿದೆ. ಅಲ್ಲದೇ ಆರೋಪಿ ಬಗ್ಗೆ ಗೊತ್ತಿದ್ದರೆ ಕೂಡಲೇ 080-29510900, 8904241100 ಸಂಖ್ಯೆಗೆ ಫೋನ್‌ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಎನ್‌ಐಎ ಮನವಿ ಮಾಡಿದೆ. ಆರಂಭದಲ್ಲಿ ಪೊಲೀಸರು, ಎಲ್ಲಾ ಸಿಸಿಟಿಗಳ ಪರಿಶೀಲನೆ ಮಾಡಿದಾಗ ಆರೋಪಿ, ಕ್ಯಾಪ್, ಮಾಸ್ಕ್ ಚೆಸ್ಮಾ ಹಾಕಿರುವ ದೃಶ್ಯಗಳೇ ಸಿಕ್ಕಿದ್ದವು. ಆದ್ರೆ,  ಸಿಸಿಬಿ ತನಿಖೆಯ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಒಂದು ಫೋಟೋವನ್ನು ಪತ್ತೆ ಮಾಡಿದೆ. ಇದೀಗ ಅದೇ ಫೋಟೋವನ್ನು ಎನ್​ಐಎ ಬಿಡುಗಡೆ ಮಾಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ ಯಾರೊಬ್ಬರನ್ನು ಬಂಧಿಸಿಲ್ಲ ಎಂದು ಎಎನ್‌ಐ ಸ್ಪಷ್ಟಪಡಿಸಿದೆ. ಈ ಮಧ್ಯೆ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ನಿನ್ನೆಯಷ್ಟೇ (6 ಮಾರ್ಚ್ ಬುಧವಾರ) ಬಾಂಬರ್​ ಫೋಟೋ ಬಿಡುಗಡೆ ಮಾಡಿತ್ತು. ಇಂದು ಬಾಂಬರ್‌ ನ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಹಾಗಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ ನಕಲಿ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಇಟಲಿ ಪ್ರಧಾನಿ ಎಕ್ಸ್‌ ಖಾತೆಯಲ್ಲಿ ‘ಮೋದಿ ಕಾ ಪರಿವಾರ್’ ಎಂದು ಬರೆಯಲಾಗಿದೆಯೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights