FACT CHECK | ರಾಹುಲ್ ಗಾಂಧಿ ಹಿಂದೂ ದೇವರ ಮೂರ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದು ನಿಜವೇ?

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಭಾಗವಾಗಿ ಕಿಸಾನ್ ಮಹಾಪಂಚಾಯತ್ ಕಾರ್ಯಕ್‌ರಮದಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿಯವರಿಗೆ ತಮ್ಮ ಪಕ್ಷದ ಕಾರ್ಯಕರ್ತರು ನೀಡಿದ ವಿಠ್ಠಲ ವಿಗ್ರಹವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ ಅವರಿಗೆ ಹಿಂದೂ ದೇವರಾದ ವಿಠ್ಠಲನ ಮೂರ್ತಿಯನ್ನು ನೀಡಲಾಗಿತ್ತು. ಆದರೆ ರಾಹುಲ್ ಗಾಂಧಿ ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಪ್ರತಿಪಾದಿಸಿ ಬಿಜೆಪಿ ಬೆಂಬಲಿಗರು ವಿಡಿಯೋವನ್ನು  ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಬಿಜೆಪಿಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ತಮ್ಮ ಎಕ್ಸ್ ಖಾತೆಯಲ್ಲಿ  ಪೋಸ್ಟ್ ಮಾಡಿದ್ದಾರೆ. ಇದನ್ನು ತಮಿಳುನಾಡಿನ ಬಿಜೆಪಿ ಶಾಸಕಿ ವನತಿ ಶ್ರೀನಿವಾಸನ್ ಅವರು ಮರು ಹಂಚಿಕೊಂಡಿದ್ದಾರೆ. ಮೀಡಿಯನ್ ಎಂಬ ಸುದ್ದಿವಾಹಿನಿಯೊಂದು ಇದನ್ನೆ ಸುದ್ದಿಯಾಗಿಯೂ ಪ್ರಕಟಿಸಿದೆ. ಹಾಗಿದ್ದರೆ ರಾಹುಲ್ ಗಾಂಧಿ ವಿಠಲನ ಮೂರ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದು ನಿಜವೇ ಎಂದು ವಿಡಿಯೋ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು  ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : 

ರಾಹುಲ್ ಗಾಂಧಿ ಹಿಂದೂ ದೇವರ ಮೂರ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋವನ್ನು ಪರಿಶೀಲಿಸಲು, ವೀಡಿಯೊದ ಕೀಫ್ರೇಮ್‌ಗಳನ್ನು ಗೂಗಲ್‌ ರಿವರ್ಸ್  ಇಮೇಜಸ್‌ನಲ್ಲಿ ಸರ್ಚ್   ಮಾಡಿದಾಗ, ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನಾನಾ ಪಟೋಲೆ ಅವರು ಮಾರ್ಚ್ 14 ರಂದು X ನಲ್ಲಿ ಪೋಸ್ಟ್ ಮಾಡಿದ ವೀಡಿಯೊ ಲಭ್ಯವಾಗಿದೆ. ಈ ವಿಡಿಯೋದಲ್ಲಿ ರಾಹುಲ್ ಗಾಂಧಿ ವಿಗ್ರಹವನ್ನು ಸ್ವೀಕರಿಸಿ ಅದರೊಂದಿಗೆ ಫೋಟೋಗೆ ಪೋಸ್ ನೀಡುತ್ತಿರುವುದನ್ನು ಕಾಣಬಹುದು.

ಪಟೋಲೆ ಅವರು ವಿಡಿಯೊವನ್ನು ಹಂಚಿಕೊಂಡಿದ್ದು, ಬಿಜೆಪಿ ಬೆಂಬಲಿಗರು ರಾಹುಲ್ ಗಾಂಧಿ ವಿರುದ್ದ ಸುಳ್ಳು ಮತ್ತು ಆಧಾರ ರಹಿತ ಪೋಸ್ಟ್‌ಅನ್ನು ಹಂಚಿಕೊಳ್ಳುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಪೂರ್ಣ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 

ನಾನಾ ಪಟೋಲೆ ಹಂಚಿಕೊಂಡ ವಿಡಿಯೋದಲ್ಲಿ, ರಾಹುಲ್ ಗಾಂಧಿ ತಮ್ಮ ಬೆಂಬಲಿಗರೊಂದಿಗೆ ಫೋಟೋ ತೆಗೆಸಿಕೊಳ್ಳುವಾಗ ಪಕ್ಷದ ಕಾರ್ಯಕರ್ತರಿಗೆ ಪಕ್ಕಕ್ಕೆ ಹೋಗುವಂತೆ ಸನ್ನೆ ಮಾಡುವುದನ್ನು ಕಾಣಬಹುದು. ನಂತರ, ಗಾಂಧಿಯವರು ವಿಗ್ರಹವನ್ನು ಸ್ವೀಕರಿಸಿದರು, ನಿರೂಪಕರೊಂದಿಗೆ ಫೋಟೋಗೆ ಪೋಸ್ ನೀಡಿ, ವಿಠಲ ಮೂರ್ತಿಯನ್ನು ಪಕ್ಕದಲ್ಲಿದ್ದ ಆಪ್ತರಿಗೆ ಹಸ್ತಾಂತರಿಸುವುದನ್ನು ನೋಡಬಹುದು.

ರಾಹುಲ್ ಗಾಂಧಿ ಪ್ರತಿಮೆಯನ್ನು ಸ್ವೀಕರಿಸುವ ವಿಡಿಯೋವನ್ನು ಎಡಿಟ್ ಮಾಡಿ ಹಿಂದೂ ದೇವರ ಮೂರ್ತಿಯನ್ನು ಸ್ವೀಕರಿಸಲು ನಿರಾಕರಿಸಿರುವ ಮೂಲಕ ರಾಹುಲ್ ಗಾಂಧಿ ಅವಮಾನಿಸಿದ್ದಾರೆ ಎಂದು ಬಿಜೆಪಿಯವರು ಸುಳ್ಳು ನಿರೂಪಣೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ರಾಹುಲ್ ಗಾಂಧಿ ವಿಠಲ ಮೂರ್ತಿಯನ್ನು ಸ್ವೀಕರಿಸದೆ ಹಿಂದೂ ದೇವರಿಗೆ ಅವಮಾನ ಮಾಡಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ವಿಡಿಯೋವನ್ನು ಬಿಜೆಪಿ ಬೆಂಬಲಿಗರು ಹಂಚಿಕೊಂಡಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | 2022ರ ಹಳೆಯ ದೃಶ್ಯಗಳನ್ನು ಭಾರತ್ ಜೋಡೋ ನ್ಯಾಯ ಯಾತ್ರೆಯದ್ದು ಎಂದು ತಪ್ಪಾಗಿ ಹಂಚಿಕೊಂಡ ಕಾಂಗ್ರೆಸ್ ಬೆಂಬಲಿಗರು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights