FACT CHECK | ಮೋದಿ ಮತ್ತು ಅಮಿತ್ ಶಾ ಕುರಿತು ಪತ್ರಕರ್ತೆ ಕೇಳಿದ ಪ್ರಶ್ನೆಗೆ ಚುನಾವಣಾ ಆಯೋಗ ಉತ್ತರಿಸದೆ ನುಣುಚಿಕೊಂಡಿದ್ದು ನಿಜವೇ?

ಲೋಕಸಭೆ ಚುನಾವಣೆ 2024 ರ ವೇಳಾಪಟ್ಟಿ ಇದೀಗ ಹೊರಬಿದ್ದಿದೆ, ಅದರ ಪ್ರಕಾರ ವಿಶ್ವದ ಅತಿದೊಡ್ಡ ಚುನಾವಣಾ ಕಸರತ್ತು ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರು ಮಾರ್ಚ್ 16 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು 26 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕಗಳೊಂದಿಗೆ ವೇಳಾಪಟ್ಟಿಯನ್ನು ಪ್ರಕಟಿಸಿದರು.

ಈ ಪತ್ರಿಕಾಗೋಷ್ಠಿಯ ವಿಡಿಯೋ ತುಣುಕು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆ ಮಾಡಿದಾಗ ಚುನಾವಣಾ ಆಯೋಗವು ಆಡಳಿತ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳುತ್ತದೆಯೇ ? ಅಥವಾ ನೀತಿ ಸಂಹಿತೆ ಕೇವಲ ವಿರೋಧ ಪಕ್ಷಗಳಿಗೆ ಮಾತ್ರ ಸೀಮಿತವೇ ? ಎಂದು ಮುಖ್ಯ ಚುನಾವಣಾ ಆಯುಕ್ತರನ್ನು ಪ್ರಶ್ನಿಸಿದ್ದಾರೆ.

“ಆಕೆಯ ಧೈರ್ಯಕ್ಕೆ ಹ್ಯಾಟ್ಸ್ ಆಫ್. ಧೀರ ಪತ್ರಕರ್ತರೊಬ್ಬರು, ‘ಮೋದಿ ಮತ್ತು ಶಾ ಅವರ ದ್ವೇಷ ಭಾಷಣ ಮಾಡಿದಾಗ ಚುನಾವಣಾ ಆಯೋಗ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ?’ ಎಂದು ಕೇಳಿದ್ದಾರೆ. ಪತ್ರಕರ್ತೆ ಕೇಳಿದ ಪ್ರಶ್ನೆಗೆ ಮುಖ್ಯ ಚುನಾವಣಾ ಆಯೋಗ ಉತ್ತರಿಸಿದೆ ನುಗುಚಿಕೊಂಡಿದೆ, ಬೆನ್ನೆಲುಬಿಲ್ಲದ ಚುನಾವಣಾ ಆಯೋಗ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಚುನಾವಣಾ ಆಯೋಗವು ಪತ್ರಕರ್ತೆ ಕೇಳಿದ ಪ್ರಶ್ನೆಗೆ ಉತ್ತರ ನೀಡಲಿಲ್ಲವೇ ? ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ವಿರೋಧ ಪಕ್ಷದ ನಾಯಕರಿಗೆ ಹೋಲಿಸಿದರೆ,  ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪತ್ರಕರ್ತೆ ಆಶ್ಲಿನ್ ಮ್ಯಾಥ್ಯೂ ಪತ್ರಿಕಾಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗೆ ಮುಖ್ಯ ಚುನಾವಣಾ ಆಯುಕ್ತರು ಉತ್ತರಿಸಿರುವುದನ್ನು ವಿಡಿಯೋದಲ್ಲಿ ನೋಡಬಹುದು.

 1 ಗಂಟೆ 54 ಸೆಕೆಂಡುಗಳ ವಿಡಿಯೋ ಕ್ಲಿಪಿನಲ್ಲಿ  ನ್ಯಾಷನಲ್ ಹೆರಾಲ್ಡ್‌ನ ಪತ್ರಕರ್ತೆ ಆಶ್ಲಿನ್ ಮ್ಯಾಥ್ಯೂ ಪ್ರಶ್ನೆಗಳನ್ನು ಕೇಳುವುದನ್ನು ನೋಡಬಹುದು. ನಂತರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪ್ರಶ್ನೆಗಳಿಗೆ ಉತ್ತರ ನೀಡುವ ಭಾಗವು ವಿಡಿಯೋದ 1 ಗಂಟೆ 10 ನಿಮಿಷ ಮತ್ತು 22 ಸೆಕೆಂಡುಗಳಲ್ಲಿ ದಾಖಲಾಗಿರುವುದು ಲಭ್ಯವಾಗಿವೆ.

ಚುನಾವಣಾ ನೀತಿ ಸಂಹಿತೆ ಉಲ್ಲಗನೆಯನ್ನು ಆರೇ ಮಾಡಿದರೂ ನಿರ್ಧಾಕ್ಷಿಣ್ಯ ಕ್ರಮವನ್ನು ಆಯೋಗವು ತೆಗೆದುಕೊಳ್ಳುತ್ತದೆ. ವ್ಯಕ್ತಿ ಎಷ್ಟೇ ಪ್ರಭಾವಿ ರಾಜಕಾರಣಿಯಾಗಿದ್ದರೂ, ನಾವು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಹೇಳಿರುವುದನ್ನು ಕೇಳಬಹುದು.

ಒಟ್ಟಾರೆಯಗಿ ಹೇಳುವುದಾದರೆ, ನ್ಯಾಷನಲ್ ಹೆರಾಲ್ಡ್‌ನ ಪತ್ರಕರ್ತೆ ಆಶ್ಲಿನ್ ಮ್ಯಾಥ್ಯೂ ಕೇಳಿದ ಪ್ರಶ್ನೆಗೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಿರ್ಲಕ್ಷಿಸಿದ್ದಾರೆ ಅಥವಾ ಉತ್ತರ ನೀಡದೆ ನುಣುಚಿಕೊಂಡಿದ್ದಾರೆ ಎಂಬುದು ಸುಳ್ಳು.

ಚುನಾವಣಾ ಆಯೋಗವು ಸ್ವತಂತ್ರ ಸಂಸ್ಥೆಯಾಗಿದ್ದರೂ ಯಾವಾಗಲು ಆಡಳಿತ ಪಕ್ಷದ ಅಣತಿಯಂತೆ ನಡೆಯುತ್ತದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಆಗಾಗ ಕೇಳಿಬರುತ್ತಿರುತ್ತದೆ. ಆದರೂ ಸಾಮಾಜಿಕ ಮಾಧ್ಯಮಗಳಲ್ಲಿ ಆರೋಪಿಸಿರುವಂತೆ ಪತ್ರಕರ್ತೆ ಪ್ರಶ್ನೆಗೆ ಉತ್ತರಿಸದೆ ಚುನಾವಣಾ ಆಯೋಗ ಪಲಾಯನ ಮಾಡಿಲ್ಲ ಎಂಬುದು ಸತ್ಯ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಉತ್ತರ ಪ್ರದೇಶದ ಯೋಗಿ ಸರ್ಕಾರದಲ್ಲಿ IAS ಪರೀಕ್ಷೆ ವೇಳೆ ಸಾಮೂಹಿಕ ನಕಲು ನಡೆಸಲಾಗಿದೆಯೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights