FACT CHECK | ಭಯೋತ್ಪಾದಕರನ್ನು ಜೈಲಿನಿಂದ ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿದೆಯೇ?

ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜೈಲಲ್ಲಿ ಇರುವ ಉಗ್ರರನ್ನ ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್‌ ಹೇಳಿದೆ ಎಂದು ಪ್ರತಿಪಾದಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯ ಪೇಪರ್ ಕಟ್ಟಿಂಗ್‌ ಒಳಗೊಂಡ ಪೋಸ್ಟ್‌ಅನ್ನು “ಕಾಂಗ್ರೆಸ್ಸಿಗರನ್ನ ನಾವೇಕೆ ಅಷ್ಟೊಂದು ದ್ವೇಷಿಸುವುದು ಗೊತ್ತಾ..?” ಎಂಬ ಹೇಳಿಕೆಯೊಂದಿಗೆ ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಈ ಸುದ್ದಿಯು ನಿಜವೇ ಕಾಂಗ್ರೆಸ್‌ನ ಯಾವ ನಾಯಕ? ಯಾವಾಗ ಈ ಹೇಳಿಕೆಯನ್ನು ನೀಡಿದ್ದಾರೆ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ವಾಟ್ಸಾಪ್‌ಗಳಲ್ಲಿ ಪ್ರಸಾರವಾಗುತ್ತಿರುವ ಈ ಸಂದೇಶದ ಕೆಲವು ಕೀವರ್ಡ್‌ ಬಳಸಿಕೊಂಡು ಗೂಗಲ್ ಸರ್ಚ್ ಮಾಡಿದಾಗ, ಡಿಸೆಂಬರ್ 27, 2018ರ ಇಂಡಿಯಾ ಟುಡೇ ವರದಿ ಲಭ್ಯವಾಗಿದೆಎ. ವರದಿಯ ಪ್ರಕಾರ, ಕಾಂಗ್ರೆಸ್‌ ನಾಯಕ ಸಗೀರ್ ಸಯೀದ್‌ ಖಾನ್‌ ತನ್ನ ವಿವಾದಿತ ಹೇಳಿಕೆಗಳ ಮೂಲಕ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದರು ಎಂದಿದೆ. ಜಮ್ಮುವಿನ ಸ್ಥಳೀಯ ಪತ್ರಕರ್ತರೊಂದಿಗೆ ಮಾತನಾಡುತ್ತ ಸಯೀದ್‌, ಬಿಜೆಪಿ ಸ್ಥಳೀಯ ಜನರ ವಿರುದ್ಧ ದೌರ್ಜನ್ಯ ಎಸಗುತ್ತಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಕಾಶ್ಮೀರ ಕಣಿವೆಯಲ್ಲಿ ಮೃತರಾದವರ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ಮತ್ತು ಸರ್ಕಾರಿ ಕೆಲಸ, ಶಂಕಿತ ಭಯೋತ್ಪಾದಕರನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದು ಎಂಬ ಹೇಳಿಕೆ ನೀಡಿರುವುದನ್ನು ಉಲ್ಲೇಖಿಸಲಾಗಿದೆ.

Fact Check: ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಹೇಳಿದೆಯೇ?

”ಬಿಜೆಪಿ ನಾಯಕರನ್ನು ನೇಣಿಗೆ ಹಾಕುತ್ತೇವೆಂದು ಹೇಳಿದ ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್‌ ನಾಯಕ ಸಯೀದ್‌ ಖಾನ್‌” ಎಂಬ ಶೀರ್ಷಿಕೆಯ ವರದಿಯಲ್ಲಿ ಸಯೀದ್‌ ಖಾನ್‌, ಕಣಿವೆಯಲ್ಲಿ ಮೃತರಾದವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ, ಸರ್ಕಾರಿ ಕೆಲಸ ಕೊಡುವುದಾಗಿ ಹೇಳಿದ್ದಾರೆ ಎಂದು ಎಬಿಪಿ ಲೈವ್ ಡಿಸೆಂಬರ್ 27, 2018ರಂದು ವರದಿ ಮಾಡಿದೆ.

2018ರಲ್ಲಿ ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್‌ ನಾಯಕ ಸಗೀರ್ ಸಯೀದ್‌ ಖಾನ್‌ “ಕಾಂಗ್ರೆಸ್‌ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಎಂದು ಹೇಳಿರುವ ಹಳೆಯ ಸುದ್ದಿಯ ತುಣುಕನ್ನು ಬಿಜೆಪಿ ನಾಯಕರು ಇತ್ತೀಚಿನದ್ದು ಎಂದು 2024ರ ಚುನಾವಣೆಯ ಸಂದರ್ಭದಲ್ಲಿ ತಪ್ಪಾಗಿ ಹಂಚಿಕೊಳ್ಳುತ್ತಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2018ರಲ್ಲಿ ಕಾಂಗ್ರೆಸ್‌ ನಾಯಕ ಸಗೀರ್ ಸಯೀದ್‌ ಖಾನ್‌ ನೀಡಿದ್ದ ಹೇಳಿಕೆಯನ್ನು 2024ರ ಸಾರ್ವತ್ರಿಕ ಚುನಾವಣೆಯನ್ನು ಗುರಿಯಾಗಿಸಿಕೊಂಡು ಇತ್ತೀಚಿನ ಹೇಳಿಕೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ವಾಸ್ತವವಾಗಿ ಇದು ಕಾಂಗ್ರೆಸ್ ಪಕ್ಷದ ಹೇಳಿಕೆಯಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾಗುತ್ತಿರುವ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ರಾಮೇಶ್ವರ ಕೆಫೆ ಬಾಂಬ್ ಸ್ಪೋಟದ ರೂವಾರಿ ರಾಮಚಂದ್ರ ಕಲ್ಸಂಗ್ರ ಎಂಬ ವ್ಯಕ್ತಿಯೇ? ಈತ ಚಕ್ರವರ್ತಿ ಸೂಲಿಬೆಲೆ ಅಪ್ತನೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights