FACT CHECK | ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಖರ್ಗೆ ವಿರುದ್ದ ಜಾತಿ ತಾರತಮ್ಯ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ ಬಿಜೆಪಿ

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಖರ್ಗೆ ನೀಡಿದ ನೀರನ್ನು ಕುಡಿಯದೆ ನಿರಾಕರಿಸಿದ್ದಾರೆ ಎಂದು ಬಜೆಪಿ ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ಅನ್ನು ಹಂಚಿಕೊಂಡಿದೆ.

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆಯನ್ನು ಅವಮಾನಿಸಿದ್ದಾರೆ. ಖರ್ಗೆ ಇಬ್ಬರಿಗೂ ನೀರು ಕೊಡಲು ಬಂದಾಗ ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಖರ್ಗೆಯವರು ದಲಿತರು ಎಂಬ ಕಾರಣದಿಂದ ಹೀಗೆ ವರ್ತಿಸಿದ್ದಾರೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದೆ.

ಇತ್ತೀಚೆಗೆ ಇಂತಹದ್ದೆ ವಿಡಿಯೋವನ್ನು ಬಿಜೆಪಿ ಬೆಂಬಲಿತ ರಿಷಿ ಬಾಗ್ರಿ ಪೋಸ್ಟ್‌ಅನ್ನು ಹಂಚಿಕೊಂಡು ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರು ತಾವು ನೀರು ಕುಡಿಯಬೇಕೆಂದರೂ ಗಾಂಧಿ ಕುಟುಂಬದ ಅನುಮತಿ ಪಡೆಯಬೇಕು ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದರು.

https://twitter.com/SocialSameerIND/status/1770748935507792222

ಹಾಗಿದ್ದರೆ ಬಿಜೆಪಿ ಮತ್ತು ಬಿಜೆಪಿ ಬೆಂಬಲಿಗರು ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡ ಪೋಸ್ಟ್‌ನ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿದಾಗ, ವಿಡಿಯೋವನ್ನು ಎಡಿಟ್ ಮಾಡಿ ಹಂಚಿಕೊಳ್ಳುವ ಮೂಲಕ ಜನರನ್ನು ದಾರಿ ತಪ್ಪುವಂತೆ ಬಿಜೆಪಿ ಮಾಡಿರುವುದು ಪರಿಶೀಲನೆ ವೇಳೆ ಕಂಡುಬಂದಿದೆ.

FACT CHECK | ಮಲ್ಲಿಕಾರ್ಜುನ ಖರ್ಗೆ ನೀರು ಕುಡಿಯಲು ರಾಹುಲ್ ಮತ್ತು ಸೋನಿಯಾ ಗಾಂಧಿ ಅನುಮತಿ ಪಡೆಯಬೇಕೆ?

ಇತ್ತೀಚೆಗೆ ಏನ್‌ಸುದ್ದಿ.ಕಾಂ ತಂಡ ವೈರಲ್ ವಿಡಿಯೋವನ್ನು ಫ್ಯಾಕ್ಟ್‌ಚೆಕ್ ಮಾಡುವ ಮೂಲಕ ವಾಸ್ತವವೇನೆಂದು ಜನರಿಗೆ ತಿಳಿಸುವ ಪ್ರಯತ್ನವನ್ನು ಮಾಡಿತ್ತು. ನೀವು ಅದರ ಲಿಂಕ್ ಅನ್ನು ಇಲ್ಲಿ ನೋಡಬಹುದು.

ಈ ವಿಡಿಯೋದ ಹಿನ್ನಲೆಯನ್ನು ತಿಳಿದುಕೊಳ್ಳೋಣ

ಲೋಕಸಭೆ ಚುನಾವಣೆ ಘೋಷಣೆಯಾಗಿರುವ ಸಂದರ್ಭದಲ್ಲಿ ಗುರುವಾರ (21 ಮಾರ್ಚ್) ಜಂಟಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು.

ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ ಅನ್ನು ಆರ್ಥಿಕವಾಗಿ ದುರ್ಬಲಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ವ್ಯವಸ್ಥಿತ ಪ್ರಯತ್ನ ನಡೆಸಿದ್ದಾರೆ. ಜನರಿಂದ ಸಂಗ್ರಹಿಸಿದ ದೇಣಿಗೆಗಳನ್ನು ತಡೆ ಹಿಡಿಯಲಾಗುತ್ತಿದೆ ಮತ್ತು ನಮ್ಮ ಖಾತೆಗಳಿಂದ ಬಲವಂತವಾಗಿ ಹಣ ಕಿತ್ತುಕೊಳ್ಳಲಾಗುತ್ತಿದೆ” ಎಂದು ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದರು.

21 ಮಾರ್ಚ್ 2024ರಂದು (ಗುರುವಾರ) ನಡೆದ ಪತ್ರಿಕಾಗೋಷ್ಠಿಯ ವಿಡಿಯೋ ವಿಡಿಯೋವನ್ನು  ದಿ ಪ್ರಿಂಟ್ ತನ್ನ ಯೂಟ್ಯೂಬ್‌ನಲ್ಲಿ ಹಂಚಿಕೊಂಡಿದೆ.

ಅಪ್‌ಲೋಡ್‌ ಮಾಡಲಾದ ವಿಡಿಯೋದಲ್ಲಿ 6 ನಿಮಿಷ 58 ಸೆಕೆಂಡ್‌ಗಳ ಅವದಿಯಲ್ಲಿ ಸೋನಿಯಾ ಗಾಂಧಿ ಪತ್ರಿಕಾಗೋಷ್ಠಿಯಲ್ಲಿ ಮಾತು ಮುಗಿಸುವಾಗ ಮೈಕ್‌ಅನ್ನು ಪಾಸ್‌ ಮಾಡಲು ನೀರು ತುಂಬಿದ ಲೋಟವನ್ನು ಮಲ್ಲಿಕಾರ್ಜುನ ಖರ್ಗೆ ತೆಗೆದಿಡುತ್ತಾರೆ. ಆಗ ಮಾತನಾಡಿ ಮುಗಿಸಿದ್ದ ಸೋನಿಯಾ ಗಾಂಧಿಯನ್ನು ಸೌಜನ್ಯದಿಂದ ನೀರು ಬೇಕೆ ಎಂದು ಕೇಳುತ್ತಾರೆ, ಹಾಗೆಯೇ ರಾಹುಲ್ ಗಾಂಧಿಯನ್ನು ಕೇಳುತ್ತಾರೆ ಇಬ್ಬರು ಬೇಡ ಎನ್ನುತ್ತಾರೆ. ಅಂತಿಮವಾಗಿ ಮಲ್ಲಿಕಾರ್ಜುನ ಖರ್ಗೆ ನೀರು ಕುಡಿಯುವುದನ್ನು ಮೂಲ ವಿಡಿಯೋದಲ್ಲಿ ನೋಡಬಹುದು. ದಲಿತ ಸಮುದಾಯದವರು ಎಂಬ ಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆ ನೀಡಿದ ನೀರನ್ನು ರಾಹುಲ್ ಮತ್ತು ಸೋನಿಯಾ ಗಾಂಧಿ ನಿರಾಕರಿಸಿದ್ದಾರೆ ಎಂಬುದು ಸುಳ್ಳು

ಬಿಜೆಪಿ ಮಾಡಿರುವ ಆರೋಪ ಸುಳ್ಳು

ಇದಕ್ಕೆ ಪ್ರತಿಕ್ರಿಯೆಯಾಗಿ ಹಲವು ಕಾಂಗ್ರೆಸ್‌ ಬೆಂಬಲಿಗರು ವಿಡಿಯೋವನ್ನು ಹಂಚಿಕೊಂಡಿದ್ದು, ಕಾಂಗ್ರೆಸ್‌ನಲ್ಲಿ ಎಲ್ಲರು ಸಮಾನರು ಜಾತಿ ತಾರತಮ್ಯ ಮತ್ತು ಹೇರಿಕೆಗಳು RSS ಮತ್ತು BJP ಯ ಆತ್ಮಗಳು ಎಂದು ವ್ಯಂಗ್ಯ ಮಾಡಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಬಿಜೆಪಿಯ ಅವಿವೇಕಿಗಳೆ, ರಾಹುಲ್ ಗಾಂಧಿ ಮತ್ತು ಸೋನಿಯಾ ಜಿ ಏನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ. ಖರ್ಗೆಯವರಿಗೆ ಅವರು ಕೊಡುವ ಗೌರವ ಎಲ್ಲರಿಗೂ ಗೊತ್ತಿದೆ. ಅಡ್ವಾಣಿ ಅವರನ್ನು ಮೋದಿ ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದರ ಬಗ್ಗೆ ಯೋಚಿಸಿ ಎಂದು ಕಾಂಗ್ರೆಸ್‌ನ ಕಾರ್ಯಕರ್ತರು ತಿರುಗೇಟು ನೀಡಿದ್ದಾರೆ.

Image

ಒಟ್ಟಾರೆಯಾಗಿ ಹೇಳುವುದಾದರೆ, ಕಾಂಗ್ರೆಸ್‌ ಪಕ್ಷದ ಪತ್ರಿಕಾಗೋಷ್ಠಿ ವೇಳೆ ಮಾತನಾಡಿ ಆಯಾಸವಾಗಿದೆ ಎಂಬ ಕಾರಣಕ್ಕೆ ಸೋನಿಯಾ ಗಾಂಧಿಯವರಿಗೆ ಸೌಜನ್ಯಕ್ಕೆ ನೀರು ಬೇಕಾ ಎಂದು ಕೇಳುವ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೃಶ್ಯಗಳನ್ನು ತಿರುಚಿ ಸುಳ್ಳು ಪ್ರತಿಪಾದನೆಯೊಂದಿಗೆ ಜನರನ್ನು ದಾರಿ ತಪ್ಪಿಸುವಂತೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ಸುಳ್ಳು.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಮುಸ್ಲಿಂ ವ್ಯಕ್ತಿ ಶಾಲಾ ವಿದ್ಯಾರ್ಥಿಗೆ ಕಿರುಕುಳ ನೀಡುವ ವಿಡಿಯೋ ಭಾರತದ್ದಲ್ಲ, ಬಾಂಗ್ಲಾದೇಶದ್ದು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights