FACT CHECK | ವಿವಿಧ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಕೇವಲ ಕಾಂಗ್ರೆಸ್ ಅವಧಿಯಲ್ಲಿ ಮಾತ್ರ ಆಗಿದೆಯೇ? ಮೋದಿ ಅವಧಿಯಲ್ಲಿ ಆಗಿಲ್ಲವೇ?

ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ವಿವಿಧ ರಾಜ್ಯಗಳಲ್ಲಿ ಇರುವ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿದೆ. ಆದರೆ ನರೇಂದ್ರ ಮೋದಿ ಸರ್ಕಾರ 2014ರಿಂದ ಅಧಿಕಾರಕ್ಕೆ ಬಂದಾಗಿನಿಂದ ಒಮ್ಮೆಯೂ ಯಾವುದೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಲ್ಲ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಪೋಸ್ಟ್‌ನಲ್ಲಿ ಏನಿದೆ ಎಂದು ನೋಡೋಣ

ನೆಹರೂ ಅವರು 7 ಬಾರಿ ರಾಜ್ಯ ಸರ್ಕಾರಗಳನ್ನು ವಜಾ ಮಾಡಿದ್ದಾರೆ.
ಇಂದಿರಾ ಗಾಂಧಿ 49 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು.
ರಾಜೀವ್ ಗಾಂಧಿ 6 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು.
ನರಸಿಂಹರಾವ್ 11 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದಾರೆ.
ಮನಮೋಹನ್ ಸಿಂಗ್ 11 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದಾರೆ.

ಆದರೆ 2014ರ ನಂತರ ಒಂದೇ ಒಂದು ರಾಜ್ಯ ಸರ್ಕಾರವನ್ನು ವಜಾ ಮಾಡಿಲ್ಲ. ಆದರೂ ಮೋದಿ ಸರ್ವಾಧಿಕಾರಿ ಎಂಬ ಬರಹದೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಕೇಂದ್ರದಲ್ಲಿ ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ರಾಷ್ಟ್ರಪತಿ ಆಳ್ವಿಕೆಯನ್ನು ಮಾಡಲಾಗಿದೆ. ಆದರೆ ನರೇಂದ್ರ ಮೋದಿ ಅಥವಾ ಬಿಜೆಪಿ ಅವದಿಯಲ್ಲಿ 2014ರ ನಂತರ ಒಂದೇ ಒಂದು ಬಾರಿಯೂ ರಾಷ್ಟ್ರಪತಿ ಆಳ್ವಿಕೆಯನ್ನು ಮಾಡಲಾಗಿಲ್ಲ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯಂತೆ 2014ರ ನಂತರ ಯಾವುದೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಆಗಿಲ್ಲೇ ಎಮದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸ್ವತಂತ್ರ ಭಾರತದಲ್ಲಿ ಯಾವ ಪ್ರಧಾನ ಮಂತ್ರಿ ಅವಧಿಯಲ್ಲಿ ಎಷ್ಟು ಬಾರಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದೆ ಎಂಬ ವಿವರ ಹೀಗಿದೆ. ಇದುವರೆಗೆ ಅತಿ ಹೆಚ್ಚಿನ ಅವಧಿಗೆ ರಾಷ್ಟ್ರಪತಿ ಆಳ್ವಿಕೆ ಹೇರಿರುವುದು ಜಮ್ಮು- ಕಾಶ್ಮೀರದಲ್ಲಿ: ಆರು ವರ್ಷಗಳ ಕಾಲ. ಆ ನಂತರ ಪಂಜಾಬ್ ನಲ್ಲಿ: ನಾಲ್ಕು ವರ್ಷ.

ನೂರಕ್ಕೂ ಹೆಚ್ಚು ಬಾರಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದ್ದು, ಇಂದಿರಾ ಗಾಂಧಿ ಅವರು ಪ್ರಧಾನಿ ಹುದ್ದೆಯಲ್ಲಿ ಇದ್ದ ಅವಧಿಯಲ್ಲಿ ಆ ಸಂಖ್ಯೆ ಐವತ್ತನ್ನು ಮುಟ್ಟುತ್ತದೆ. ಕಾಂಗ್ರೆಸ್ಸಿನಿಂದ ಪ್ರಧಾನಿ ಆದವರಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಅವಧಿಯಲ್ಲಿ ಅತ್ಯಂತ ಕಡಿಮೆ ಸಲ ಅಂದರೆ, ಒಂದು ಬಾರಿಯಷ್ಟೇ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದೆ.

ಪ್ರಧಾನಮಂತ್ರಿ ಹೆಸರು

              ಅವಧಿ

ಎಷ್ಟು ಬಾರಿ

ಜವಾಹರ್ ಲಾಲ್ ನೆಹರೂ 1947- 1964 8
ಲಾಲ್ ಬಹಾದ್ದೂರ್ ಶಾಸ್ತ್ರಿ 1964-1966 1
ಇಂದಿರಾ ಗಾಂಧಿ 1966- 1977 35
ಮೊರಾರ್ಜಿ ದೇಸಾಯಿ 1977- 1979 16
ಚರಣ್ ಸಿಂಗ್ 1979- 1980 4
ಇಂದಿರಾ ಗಾಂಧಿ 1980- 1984 15
ರಾಜೀವ್ ಗಾಂಧಿ 1984- 1989 6
ವಿ.ಪಿ.ಸಿಂಗ್ 1989- 1990 2
ಚಂದ್ರಶೇಖರ್ 1990- 1991 5
ಪಿ.ವಿ.ನರಸಿಂಹ ರಾವ್ 1991- 1996 11
ಎಚ್.ಡಿ.ದೇವೇಗೌಡ 1996-1997 1
ಅಟಲ್ ಬಿಹಾರಿ ವಾಜಪೇಯಿ 1999- 2004 5
ಮನ್ ಮೋಹನ್ ಸಿಂಗ್ 2004- 2014 12

ನರೇಂದ್ರ ಮೋದಿ

2014-2024

3

ರಾಷ್ಟ್ರಪತಿ ಆಳ್ವಿಕೆ ಎಂದರೆ ರಾಜ್ಯ ಸರ್ಕಾರವನ್ನು ಅಮಾನತುಗೊಳಿಸುವುದು ಮತ್ತು ಕೇಂದ್ರದ ನೇರ ಆಡಳಿತವನ್ನು ಹೇರುವುದು. ರಾಜ್ಯಗಳಲ್ಲಿ ಸಾಂವಿಧಾನಿಕ ಯಂತ್ರಗಳು ವಿಫಲವಾದಲ್ಲಿ ಅಥವಾ ಯಾವುದೇ ಪಕ್ಷವು ಸರ್ಕಾರ ರಚಿಸಲು ಸಾಧ್ಯವಾಗದ ಸಂದರ್ಭಗಳಲ್ಲಿ, ಮಂತ್ರಿಗಳ ಮಂಡಳಿಯ ಸಲಹೆಯ ಮೇರೆಗೆ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲು 356 ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿಗಳಿಗೆ ಅಧಿಕಾರ ನೀಡಲಾಗುತ್ತದೆ. ರಾಷ್ಟ್ರಪತಿ ಆಳ್ವಿಕೆಯನ್ನು ರಾಜ್ಯ ತುರ್ತುಪರಿಸ್ಥಿತಿ ಎಂದೂ ಕರೆಯುತ್ತಾರೆ.

1947 ರಿಂದ 2016 ರವರೆಗೆ ವಿವಿಧ ಸಂದರ್ಭಗಳಲ್ಲಿ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಘೋಷಿಸಿದ ಘಟನೆಗಳನ್ನು ವಿವರಿಸುವ ಸಂಸತ್ತಿನ ಗ್ರಂಥಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ , ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ 2014-16 ರ ನಡುವೆ ಮೂರು ಸಂದರ್ಭಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದೆ. ಮಹಾರಾಷ್ಟ್ರದಲ್ಲಿ 28-9-2014, ಅರುಣಾಚಲ ಪ್ರದೇಶದಲ್ಲಿ 26-1-2016 ಮತ್ತು ಉತ್ತರಾಖಂಡದಲ್ಲಿ 27-3-2016 ರಂದು ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.

2019 ರ ಆರ್‌ಟಿಐ ನಲ್ಲಿ  ನೀಡಿರುವ ವಿವರಣೆಯ ಪ್ರಕಾರ ರಾಜಕೀಯ ಅಸ್ಥಿರತೆಯ ಕಾರಣದಿಂದಾಗಿ 12-11-2019 ರಂದು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದೆ ಎಂದು ತಿಳಿಸುತ್ತದೆ, ಅದನ್ನು ಅಂತಿಮವಾಗಿ 23-11-2019 ರಂದು ಹಿಂತೆಗೆದುಕೊಳ್ಳಲಾಯಿತು.

19-12-2018 ರಂದು ರಾಜಕೀಯ ಅಸ್ಥಿರತೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದೆ ಎಂದು ಮತ್ತೊಂದು ಆರ್‌ಟಿಐ ನಲ್ಲಿ ಬೆಳಗಿಗೆ ಬಂದಿದೆ, ಅದನ್ನು ನಂತರ 31-10-2019 ರಂದು ಹಿಂತೆಗೆದುಕೊಳ್ಳಲಾಯಿತು. ಭಾರತದ ವಿವಿಧ ರಾಜ್ಯಗಳಲ್ಲಿ ವಿವಿಧ ಸಂದರ್ಭಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯ ಹೇರಿಕೆಯ ಟೈಮ್‌ಲೈನ್ ಕುರಿತು ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು .

ಆದರೂ, ಸ್ವಾತಂತ್ರ್ಯದ ನಂತರ, ವಿವಿಧ ರಾಜ್ಯಗಳಲ್ಲಿ ಹಲವಾರು ಸಂದರ್ಭಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು. 1951 ರಲ್ಲಿ ಜವಾಹರಲಾಲ್ ನೆಹರು ಅವರ ಅಧಿಕಾರಾವಧಿಯಲ್ಲಿ ಮೊದಲ ಬಾರಿಗೆ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು. ಒಟ್ಟಾರೆಯಾಗಿ ಅವರ ಅಧಿಕಾರಾವಧಿಯಲ್ಲಿ,  7 ಬಾರಿ ವಿಧಿಸಲಾಗಿದ್ದರೆ,  ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ, 48 ಸಂದರ್ಭಗಳಲ್ಲಿ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು, ಇದು ಯಾವುದೇ ಪ್ರಧಾನಿ ಅಡಿಯಲ್ಲಿ ಅತಿ ಹೆಚ್ಚು ಬಾರಿ ಹೇರಲಾದ ರಾಷ್ಟ್ರಪತಿ ಆಳ್ವಿಕೆಯಾಗಿದೆ. ರಾಜೀವ್ ಗಾಂಧಿ, ಪಿವಿ ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಕ್ರಮವಾಗಿ 6, 11 ಮತ್ತು 10 ಸಂದರ್ಭಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ನರೇಂದ್ರ ಮೋದಿಯವರ ಅಧಿಕಾರಾವಧಿಯಲ್ಲಿಯೂ 5 ಬಾರಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎಲ್ಲ ಪ್ರಧಾನ ಮಂತ್ರಿಗಳ ಅವಧಿಯಲ್ಲೂ ರಾಷ್ಟ್ರಪತಿ ಆಳ್ಇಕೆಯನ್ನು ಹೇರಲಾಗಿದೆ. ಅದರಲ್ಲಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಪ್ರಧಾನಿ ನರೇಂದ್ರ ಮೋದಿ ಹೊರತೇನು ಅಲ್ಲ ಎಂಬುದು ಈ ಫ್ಯಾಕ್ಟ್‌ಚೆಕ್ ಮೂಲಕ ತಿಳಿದುಬಂದಿದೆ.

ವೈರಲ್ ಪೋಸ್ಟ್‌ಗೆ ಎಕ್ಸ್‌ ಖಾತೆ ಬಳಕೆದಾರರು ಪ್ರತಿಕ್ರಿಯಿಸುತ್ತಾ, 2014 ರ ನಂತರ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ವಜಾಗೊಳಿಸಲಾಗಿಲ್ಲ ಬದಲಿಗೆ ನೇರವಾಗಿ ಶಾಸಕರನ್ನು ಖರೀದಿಸುವುದು ಮತ್ತು 24 ಗಂಟೆಗಳಲ್ಲಿ ಸರ್ಕಾರ ರಚಿಸುವುದು ಮಾತ್ರ ನಡೆಯುತ್ತಿದೆ. ಇಡಿ ಮತ್ತು ಆದಾಯ ತೆರಿಗೆ ಿಲಾಖೆಗಳ ಅಧಿಕಾರಿಗಳನ್ನು ಬಳಸಿಕೊಂಡು ರಾಜ್ಯ ಸರ್ಕಾರಗಳನ್ನು ಅಸ್ತಿರಗೊಳಿಸಿ ಬಿಜೆಪಿ ಸರ್ಕಾರ ಬರುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಕಾಂಗ್ರೆಸ್ ಅಧಿಕಾರವಾಧಿಯಲ್ಲಿ ಮಾತ್ರ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ, ಮೋದಿ ಅವಧಿಯಲ್ಲಿ ಇಲ್ಲ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ವಾಸ್ತವವಾಗಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಾವಧಿಯಲ್ಲೂ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಕಾಂಗ್ರೆಸ್ ಮುಸ್ಲಿಮರ ಪಕ್ಷ ಎಂದು ರಾಹುಲ್ ಗಾಂಧಿ ಹೇಳಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights