FACT CHECK | ಬಿಜೆಪಿ ಈ ದೇಶವವನ್ನು ಒಗ್ಗೂಡಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿಲ್ಲ

ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿಯನ್ನು ಹೊಗಳಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿದೆ. ಈ ವೀಡಿಯೊದಲ್ಲಿ, ಜನರನ್ನು ಒಗ್ಗೂಡಿಸಿದ ಬಿಜೆಪಿಗೆ ರಾಹುಲ್  ಗಾಂಧಿಯವರು ಮನ್ನಣೆ ನೀಡುತ್ತಾರೆ ಎಂದು ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

 

View this post on Instagram

 

A post shared by Cric_memer (@cric_memer07)

ಕಾಂಗ್ರೆಸ್ ಪಕ್ಷವು ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಜನರನ್ನು ವಿಭಜಿಸುತ್ತದೆ ಎಂದು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ. ಇದು ಕಾಂಗ್ರೆಸ್‌ ಪಕ್ಷದ ವಾಸ್ತವ ಸ್ಥಿತಿ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ರಾಹುಲ್ ಗಾಂಧಿ ತಮ್ಮದೇ ಪಕ್ಷವನ್ನು ಬೆತ್ತಲು ಮಾಡಿದ್ದಾರೆ. ಒಂದು ಕಡೆ ಬಿಜೆಪಿಯವರು ಎಲ್ಲರನ್ನೂ ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಪಕ್ಷವು ಧರ್ಮ ಧರ್ಮಗಳ ನಡುವೆ ಜಾತಿ ಜಾತಿಗಳ ನಡುವೆ ವಿಭಜಿಸುತ್ತಿದೆ ಎಂದು ರಾಹುಲ್ ಗಾಂಧಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಎಂದು ಪೋಸ್ಟ್ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 02 ಮಾರ್ಚ್ 2024 ರಂದು “ಮಧ್ಯಪ್ರದೇಶದ ಮೊರೆನಾದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಧ್ವಜ ಹಸ್ತಾಂತರ ಸಮಾರಂಭ” ಎಂಬ ಶೀರ್ಷಿಕೆಯೊಂದಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧಿಕೃತ YouTube ಚಾನಲ್‌ನಲ್ಲಿ ಅಪ್‌ಲೋಡ್‌ ಮಾಡಲಾದ ವಿಡಿಯೋ ಲಭ್ಯವಾಗಿದೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆಯು 02 ಮಾರ್ಚ್ 2024 ರಂದು ರಾಜಸ್ಥಾನದಿಂದ ಮಧ್ಯಪ್ರದೇಶವನ್ನು ಪ್ರವೇಶಿಸುತ್ತಿದ್ದಂತೆ ಮೊರೆನಾ ನಗರದ ಭೀಮರಾವ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಧ್ವಜ ಹಸ್ತಾಂತರ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ವೇಳೆ ರಾಹುಲ್ ಗಾಂಧಿ ಸಾರ್ವಜನಿಕರನ್ನು ಉದ್ದೇಶಿಸಿ ಮಾಡಿದ ಭಾಷಣವನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗಿದೆ.

ಈ ಕ್ಲಿಪ್‌ನಲ್ಲಿ, “ದೇಶದಲ್ಲಿ ಎರಡು ಸಿದ್ಧಾಂತಗಳ ನಡುವೆ ಜಗಳ ನಡೆಯುತ್ತಿದೆ. ದ್ವೇಷ ಮತ್ತು ಪ್ರೀತಿಯ ನಡುವೆ ನಡೆಯುವ ಹೋರಾಟ. ಅಹಿಂಸೆ ಮತ್ತು ಹಿಂಸೆಯ ನಡುವೆ ನಡೆಯುತ್ತಿರುವ ಕದನ ಸ್ಪಷ್ಟವಾಗಿ ಗೋಚರಿಸುತ್ತದೆ. ಒಂದೆಡೆ ಬಿಜೆಪಿಯವರು ಒಂದೊಂದು ಧರ್ಮವನ್ನು ವಿಭಜಿಸುತ್ತಿದ್ದಾರೆ. ಒಂದು ಜಾತಿಯಿಂದ ಇನ್ನೊಂದು ಜಾತಿಯನ್ನು ವಿಭಜಿಸುವುದು. ಒಂದು ರಾಜ್ಯವನ್ನು ಇನ್ನೊಂದು ರಾಜ್ಯದಿಂದ ವಿಭಜಿಸುವುದು. ಮತ್ತೊಂದೆಡೆ, ಕಾಂಗ್ರೆಸ್ ಪಕ್ಷವು ಎಲ್ಲರನ್ನೂ ಒಟ್ಟಿಗೆ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಈ ವೀಡಿಯೊದಲ್ಲಿ, 19 ನಿಮಿಷ 45 ಸೆಕೆಂಡುಗಳ ನಡುವೆ, ಈಗ ವೈರಲ್ ಆಗಿರುವ ದೃರ್ಶಯಗಳನ್ನು ನೋಡಬಹುದು.

ರಾಹುಲ್ ಗಾಂಧಿ ಬಿಜೆಪಿ ಪಕ್ಷವನ್ನು ಹೊಗಳಿ ತಮ್ಮದೇ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿರುವಂತೆ ಮೂಲ ವಿಡಿಯೋವನ್ನು ಎಡಿಟ್ ಮಾಡಲಾಗಿದೆ. ವೈರಲ್ ಮತ್ತು ಎಡಿಟ್ ಮಾಡಿದ ವೀಡಿಯೊಗಳ ನಡುವಿನ ಹೋಲಿಕೆಯನ್ನು ನೀವು ಕೆಳಗೆ ನೋಡಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಜನರನ್ನು ವಿಭಜಿಸುತ್ತಿರುವುದು ಬಿಜೆಪಿಯೇ ಹೊರತು ಕಾಂಗ್ರೆಸ್ ಅಲ್ಲ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ಎಡಿಟ್ ಮಾಡಿ ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಮಹಿಳೆಯ ಬಟ್ಟೆ ಎಳೆದು ದೌರ್ಜನ್ಯ ಎಸಗಿ ಗೂಂಡಾ ವರ್ತನೆ ತೋರಿದ್ದರು ಎಂದು ಸಿದ್ದರಾಮಯ್ಯ ವಿರುದ್ದ ಸುಳ್ಳು ಪೋಸ್ಟ್‌ ಹಂಚಿಕೊಂಡ ಆರ್. ಅಶೋಕ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights