FACT CHECK | ಗಣೇಶನ ಮೂರ್ತಿಯನ್ನು ಪ್ರಧಾನಿ ಮೋದಿ ಸ್ವೀಕರಿಸದೆ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ ಎಂಬುದು ನಿಜವೇ

ಕಾರ್ಯಕ್ರವೊಂದರಲ್ಲಿ ಪ್ರಧಾನಿ ಮೋದಿಯವರನ್ನು ಸನ್ಮಾನಿಸುವಾಗ ಸಂಘಟಕರು ನೆನಪಿನ ಕಾಣಿಕೆಯಾಗಿ ಗಣೇಶನ ಮೂರ್ತಿಯನ್ನು ನೀಡಲು ಮುಂದಾಗುತ್ತಾರೆ ಆದರೆ ಅದನ್ನು ಸ್ವೀಕರಿಸಲು ಪ್ರಧಾನಿ ಮೋದಿ ನಿರಾಕರಿಸುವ ಮೂಲಕ ಹಿಂದೂಗಳ  ಭಾವನೆಗೆ ನೋವು ತಂದಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

“ನರೇಂದ್ರ ಮೋದಿಯವರು ಕಾರ್ಯಕ್ರಮವೊಂದರಲ್ಲಿ ಗಣೇಶನ ಮೂರ್ತಿಯನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಇದೇ ಕೆಲಸವನ್ನು ರಾಹುಲ್ ಗಾಂಧಿಯವರು ಮಾಡಿದ್ದರೆ ಬಿಜೆಪಿ ಮತ್ತು ಅವರ ಬೆಂಬಲಿತ ಮಾಧ್ಯಮಗಳು ಹೇಗೆ ವರ್ತಿಸುತ್ತಿದ್ದವು ಎಂದು ಊಹಿಸಿ.” ಎಂಬ ಸಂದೇಶದ ರೀಲ್ಸ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವುಗಳನ್ನು ನೀವು ಇಲ್ಲಿ,ಮತ್ತು ಇಲ್ಲಿ ನೋಡಬಹುದು. ಹಾಗಿದ್ದರೆ ಮೋದಿ ಗಣೇಶನ ವಿಗ್ರಹವನ್ನು ಸ್ವೀಕರಿಸಲು ನಿರಾಕರಿಸಿದ್ದು ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಪ್ರಧಾನಿ ಮೋದಿ ಗಣೇಶನ ಮೂರ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ಅನ್ನು ಪರಿಶೀಲಿಸಲು ವೇದಿಕೆಯ ಬ್ಯಾನರ್‌ನಲ್ಲಿ ಕಂಡುಬರುವ ದಿನಾಂಕ ಮತ್ತು ಸ್ಥಳದ ಮಾಹಿತಿಯನ್ನು ಕೀವರ್ಡ್ ಬಳಸಿ ಗೂಗಲ್  ಸರ್ಚ್ ಮಾಡಿದಾಗ, ಈ ವೀಡಿಯೊವು 03 ಮೇ 2023 ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಧಾನಿ ಮೋದಿಯವರ ಪ್ರಚಾರದ ಸಮಯದಲ್ಲಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದ ಸಾರ್ವಜನಿಕ ಸಭೆಯ ಸಂದರ್ಭದ್ದು ಎಂದು ತಿಳಿದುಬಂದಿದೆ.

03 ಮೇ 2023 ರಂದು X (ಟ್ವಿಟರ್) ನಲ್ಲಿ ‘ANI’ ಸುದ್ದಿಯ ಪೋಸ್ಟ್‌ ಲಭ್ಯವಾಗಿದ್ದು ಅದರ ಪ್ರಕಾರ  03 ಮೇ 2023 ರಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು ಎಂದು ವರದಿಯಾಗಿದೆ.

 

ಈ ಕಾರ್ಯಕ್ರಮದ ಮೂಲ ವೀಡಿಯೊವನ್ನು ಬಿಜೆಪಿ ತನ್ನ ಅಧಿಕೃತ ಯೂಟೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದು, ಮೂಲ ಆವೃತ್ತಿಯಲ್ಲಿ, ಪ್ರಧಾನಿ ಮೋದಿ ತನಗೆ ನೀಡಿದ ಗಣೇಶನ ವಿಗ್ರಹವನ್ನು ಸ್ವೀಕರಿಸಿದ್ದಾರೆ. ಮೂಲ ವೀಡಿಯೊವನ್ನು ಟೈಮ್‌ಸ್ಟ್ಯಾಂಪ್‌ಗಳ ನಡುವೆ 02:05 ಮತ್ತು ಎಡಿಟ್ ಮಾಡಲಾಗಿದೆ 02:16 ಮತ್ತು ತಪ್ಪು ನಿರೂಪಣೆಯೊಂದಿಗೆ ಹಂಚಿಕೊಂಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 03 ಮೇ 2023 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು   ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಲು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಕ್ಕೆ ಆಗಮಿಸಿದಾಗ ನಡೆದ ಕಾರ್ಯಕ್ರದಲ್ಲಿ ಮೋದಿ ಗಣೇಶನ ಮೂರ್ತಿಯನ್ನು ಸ್ವೀಕರಿಸಿರುವ ವಿಡಿಯೋವನ್ನು ಎಡಿಟ್ ಮಾಡಿ ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನುಓದಿರಿ : FACT CHECK | ‘ಮೋದಿ ಪ್ರಧಾನಿಯಾದರೆ ನಾನು ದೇಶ ಬಿಟ್ಟು ಹೋಗುತ್ತೇನೆ’ ಎಂದರೆ ಸಿಎಂ ಸಿದ್ದರಾಮಯ್ಯ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights