FACT CHECK | ಇಂಡಿಯಾ ಮೈತ್ರಿಕೂಟಕ್ಕೆ RSS ಬೆಂಬಲ ಘೋಷಿಸಿದ್ದು ನಿಜವೇ?

ಲೋಕಸಭೆ ಚುನಾವಣೆ 2024ಕ್ಕೆ ಇನ್ನೂ ಒಂದು ತಿಂಗಳು ಬಾಕಿ ಇರುವಾಗ, ‘ರಾಷ್ಟ್ರೀಯ ಸ್ವಯಂಸೇವಕ ಸಂಘ’  (RSS) ವಿರೋಧ ಪಕ್ಷವಾದ INDIA ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತನ್ನ ಬೆಂಬಲವನ್ನು ಘೋಷಿಸಿದೆ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಮುಂಬರುವ ಸಾರ್ವತ್ರಿಕ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಮಾತೃ ಸಂಸ್ಥೆ ಆರ್‌ಎಸ್‌ಎಸ್ ತನ್ನ ಬೆಂಬಲವನ್ನು ಇಂಡಿಯನ್ ನ್ಯಾಶನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್ (ಇಂಡಿಯಾ) ಗೆ ನೀಡಿದೆ ಎಂಬ ಹೇಳಿಕೆಯೊಂದಿಗೆ ವಿಡಿಯೋವನ್ನು ಪ್ರಸಾರ  ಮಾಡಲಾಗುತ್ತಿದೆ. ಹಾಗಿದ್ದರೆ RSS ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ ನೀಡಿದೆಯೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಪರಿಶೀಲಿಸಿದಾಗ, ಇದೇ ರೀತಿಯ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದಿದ್ದವು.  ಕೀ ವರ್ಡ್ಸ್  ಗೂಗಲ್ ಸರ್ಚ್ ಮಾಡಿದಾಗ, ಅದೇ ಪ್ರತಿಪಾದನೆಯೊಂದಿಗೆ ವಿಡಿಯೋಗಳು ಲಭ್ಯವಾಗಿವೆ.

ಆದರೆ ವೈರಲ್ ಆಗುತ್ತಿರುವ ವಿಡಿಯೋದಲ್ಲಿರುವ ಆರೆಸ್ಸೆಸ್ ಹೆಸರಿನ ಸಂಘಟನೆಯು ನಡೆಸಿದ ಪತ್ರಿಕಾಗೋಷ್ಠಿ ಎಂಬುದು ನಿಜ. ಆದರೆ ಇದು 1925 ರಲ್ಲಿ ಕೇಶವ್ ಬಲಿರಾಮ್ ಹೆಡ್ಗೆವಾರ್ ಸ್ಥಾಪಿಸಿದ ಮತ್ತು ಪ್ರಸ್ತುತ ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಅಲ್ಲ. ಜನಾರ್ದನ್ ಮೂನ್ ನೇತೃತ್ವದ ಆರ್‌ಎಸ್‌ಎಸ್ ಹೆಸರಿನ ವಿಭಿನ್ನ ಸಂಘಟನೆಯಾಗಿದೆ.

2017 ರಲ್ಲಿ ಜನಾರ್ದನ್ ಮೂನ್ ನೇತೃತ್ವದಲ್ಲಿ ಸ್ಥಾಪನೆಯಾದ ಈ ಸಂಘಟನೆಯು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ನೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಇನ್ನು ಹೆಚ್ಚಿನ ಮಾಹಿತಿಗಾಗಿ ಸುದ್ದಿಗೋಷ್ಠಿ ನಡೆಸಿದ ಸಂಘಟನೆಯ ಲೋಗೋ ಮತ್ತು ಮೋಹನ್‌ ಭಾಗಾವತ್‌ ಅವರ ನೇತೃತ್ವದ ಆರ್‌ಎಸ್‌ಎಸ್‌ ಸಂಘಟನೆಯ ಲೋಗೋ ಸಂಪೂರ್ಣವಾಗಿ ಭಿನ್ನವಾಗಿರುವುದು ಪತ್ತೆಯಾಗಿದೆ. ಹಾಗಾಗಿ ವೈರಲ್ ವಿಡಿಯೋದಲ್ಲಿ ಕಂಡುವ RSS ಗೂ ಬಿಜೆಪಿಯನ್ನು ಬೆಂಬಲಿಸುವ ಮೋಹನ್ ಭಾಗವತ್ ಮುಂದಾಳತ್ವದ RSS ಗೂ ಸಂಬಂಧವಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಜನಾರ್ದನ್ ಮೂನ್ ನೇತೃತ್ವದಲ್ಲಿ ಸ್ಥಾಪನೆಯಾದ RSS ಸಂಘಟನೆ ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲವನ್ನು ಘೋಷಿಸಿದೆ. ಆದರೆ ಈ ಆರ್‌ಎಸ್‌ಎಸ್‌ ಗೂ ಸರಸಂಘ ಸಂಚಾಲಕರಾಗಿರುವ ಮೋಹನ್ ಭಾಗವತ್ ನೇತೃತ್ವದ RSSಗೂ ಸಂಬಂಧವಿಲ್ಲ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಡಿ.ಕೆ.ಸುರೇಶ್ ಪೊಲೀಸರನ್ನು ಗದರಿಸುವ ಹಳೆಯ ವಿಡಿಯೋವನ್ನು ಲೋಕಸಭಾ ಚುನಾವಣೆಗೆ ಲಿಂಕ್ ಮಾಡಿ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights