FACT CHECK | ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು BJP ನಾಯಕರು ಅವಮಾನಿಸಿದ್ದು ನಿಜವೇ?

ಬಿಜೆಪಿಯ ಹಿರಿಯ ನಾಯಕ ಲಾಲ್‌ ಕೃಷ್ಣ ಆಡ್ವಾಣಿ ಅವರಿಗೆ ಭಾನುವಾರ(31 ಮಾರ್ಚ್) ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಸ್ವತಃ ಅವರ ನಿವಾಸಕ್ಕೆ ಆಗಮಿಸಿದ ರಾಷ್ಟ್ರಪತಿಗಳು ಎಲ್‌ಕೆ ಆಡ್ವಾಣಿ ಅವರ ಕೊರಳಿಗೆ ಭಾರತರತ್ನ ಪುರಸ್ಕಾರ ತೊಡಿಸಿದರು. ಇದೇ ಸಂದರ್ಭದಲ್ಲಿ ದ್ರೌಪದಿ ಮುರ್ಮು ಅವರನ್ನು ಬಿಜೆಪಿ ನಾಯಕರು ಅವಮಾನಿಸಿದ್ದಾರೆ ಎಂದು ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

ಕಾಂಗ್ರೆಸ್ ವಕ್ತಾರ ಪ್ರಿಯಾಂಕಾ ಚತುರ್ವೇದಿ ಮತ್ತು ತೃಣಮೂಲ ಕಾಂಗ್ರೆಸ್‌ನ ಸಂಸದ ಜವಾಹರ್ ಸಿರ್ಕಾರ್ ಕೂಡ ತಮ್ಮ ಎಕ್ಸ್ ಖಾತೆಗಳಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.

ಅಡ್ವಾಣಿಗೆ ಭಾರತರತ್ನ ಪುರಸ್ಕಾರ ಮಾಡುವ ವೇಳೆ, ಸಾಂವಿಧಾನಿಕವಾಗಿ ಭಾರತದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿರುವ ರಾಷ್ಟ್ರಪತಿ ಮುರ್ಮು ಅವರನ್ನ  ಬಿಜೆಪಿ ನಾಯಕರು ಅಗೌರವಿಸಿದ್ದಾರೆ. ಮೋದಿ ಮತ್ತು ಅಡವಾಣಿಗೆ ಕುರ್ಚಿಯ ವ್ಯವಸ್ಥೆ ಮಾಡಲಾಗಿದೆ, ಆದರೆ ರಾಷ್ಟ್ರಪತಿ ಮುರ್ಮು ಅವರಿಗೆ ಆಸನದ ವ್ಯವಸ್ಥೆ ಮಾಡದೆ ನಿಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಹಾಗಿದ್ದರೆ, ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ರಾಷ್ಟ್ರಪತಿಗಳ ಎಕ್ಸ್‌ ಖಾತೆಗಳನ್ನು ಪರಿಶೀಲಿಸಿದಾಗ, ಕಾರ್ಯಕ್ರಮದ ಪ್ರಾರಂಭದಲ್ಲಿ ಕುಳಿತ್ತಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಎಲ್‌ಕೆ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲು ನಿಲ್ಲುವುದನ್ನು ಮೂಲ ವಿಡಿಯೋದಲ್ಲಿ ನೋಡಬಹುದು.

ರಾಷ್ಟ್ರಪತಿ ಮುರ್ಮು ಅವರ ಅಧಿಕೃತ X ಖಾತೆಯಲ್ಲಿ ‘@rashtrapatibhvn’ ಫೋಟೊಗಳನ್ನು ಹಂಚಿಕೊಂಡಿದ್ದು, ಅಡ್ವಾಣಿ ಅವರ ನಿವಾಸದಲ್ಲಿ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ, ಇದರಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್, ಪಿಎಂ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಇತರರು ಭಾಗವಹಿಸಿದ್ದರು. ಈ ಥ್ರೆಡ್‌ನಲ್ಲಿ ಹಂಚಿಕೊಂಡಿರುವ ನಾಲ್ಕನೇ ಫೋಟೋ ಅಧ್ಯಕ್ಷ ಮುರ್ಮು, ಎಲ್‌ಕೆ ಅಡ್ವಾಣಿ ಮತ್ತು ಪ್ರಧಾನಿ ಮೋದಿ ಕುಳಿತಿರುವುದನ್ನು ನೋಡಬಹುದು.

Image

ಸಮಾರಂಭದ ಹೆಚ್ಚಿನ ದೃಶ್ಯಗಳು ರಾಷ್ಟ್ರಪತಿಗಳ ಪರಿಶೀಲಿಸಿದ ಯೂಟ್ಯೂಬ್ ಚಾನೆಲ್‌ನಲ್ಲಿ ಲಭ್ಯವಾಗಿದೆ, ಇದು ಅಡ್ವಾಣಿ ಅವರಿಗೆ ಭಾರತ ರತ್ನವನ್ನು ನೀಡುವ ಮೊದಲು ಅಧ್ಯಕ್ಷ ಮುರ್ಮು ಅವರು ಆಸೀನರಾಗಿದ್ದರು ಎಂಬುದನ್ನು ಖಚಿತಪಡಿಸುತ್ತವೆ.

ದಿ ಹಿಂದೂ ವರದಿಯ ಪ್ರಕಾರ, ಸಾಮಾನ್ಯವಾಗಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭವನ್ನು ಅಡ್ವಾಣಿ ಅವರ ಆರೋಗ್ಯದ ದೃಷ್ಟಿಯಿಂದ ಅವರ ಮನೆಯಲ್ಲಿ ಹಮ್ಮಿಕೊಳ್ಳಲಾಗಿತ್ತು ಎಂದು ಉಲ್ಲೇಖಿಸಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಎಲ್‌ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರದಾನ ಮಾಡುವ ಸಂದರ್ಭದಲ್ಲಿ ಆಸನ ವ್ಯವಸ್ಥೆ ಮಾಡದೆ ಅವರನ್ನು ನಿಲ್ಲಿಸಿ ಬಿಜೆಪಿ ನಾಯಕರು ಅಗೌರವಿಸಿದ್ದಾರೆ ಎಂದು ವಿಡಿಯೋವನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗಿದೆ. ಆದರೆ ವಾಸ್ತವವಾಗಿ ಈ ಕಾರ್ಯಕ್ರಮದಲ್ಲಿ ಮುರ್ಮು ಕುಳಿತ್ತಿದ್ದು, ಅಡ್ವಾಣಿಯವರಿಗೆ ಪ್ರಶಸ್ತಿ ಪ್ರಧಾನ ಮಾಡಲು ನಿಂತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಗಣೇಶನ ಮೂರ್ತಿಯನ್ನು ಪ್ರಧಾನಿ ಮೋದಿ ಸ್ವೀಕರಿಸದೆ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ ಎಂಬುದು ನಿಜವೇ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights