FACT CHECK | ನರಹಂತಕ ವೀರಪ್ಪನ್ ಪುತ್ರಿ ವಿದ್ಯಾರಾಣಿ ಚುನಾವಣೆಯಲ್ಲಿ ಸ್ಪರ್ಧಿಸಿರುವುದು ನಿಜ ! ಆದರೆ BJP ಪಕ್ಷದಿಂದಲ್ಲ

2024ರ ಲೋಕಸಭಾ ಚುನಾವಣೆ ರಂಗೇರಿದ್ದು ಎಲ್ಲ ಕಡೆ ಅಭ್ಯರ್ಥಿಗಳು ಪ್ರಚಾರದ ಭರಾಟೆಯಲ್ಲಿ ಮುಳುಗಿದ್ದಾರೆ. ಇದರ ನಡುವೆ ಈ ಬಾರಿ ಲೋಕ ಸಮರದಲ್ಲಿ ನರಹಂತಕ, ಕಾಡುಗಳ್ಳ ಎಂದೇ ಹೆಸರಾಗಿದ್ದ ವೀರಪ್ಪನ್ ಪುತ್ರಿ ವಿದ್ಯಾರಾಣಿ ಲೋಕಸಭಾ ಚುನಾವಣೆಗೆ BJP ಯಿಂದ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ವೀರಪ್ಪನ್ ಮಗಳು ವಿದ್ಯಾರಾಣಿ ಚುನಾವಣಾ ಪ್ರಚಾರದ ವೇಳೆ ತನ್ನ ತಂದೆ ವೀರಪ್ಪನ್ ಚಿತ್ರವನ್ನು ಪ್ರಚಾರದ ವಾಹನಕ್ಕೆ ಅಳವಡಿಸಿ ಮತಯಾಚನೆ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅದರ ಜೊತೆಗೆ ಬಿಜೆಪಿಯಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಿದ್ದರೆ ಫೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ಮಾರ್ಚ್ 26, 2024ರಂದು ಎನ್‌ಡಿಟಿವಿಮಾಡಿದ ವರದಿಯೊಂದು ಲಭ್ಯವಾಗಿದೆ.

Fact Check: ಕಾಡುಗಳ್ಳ ವೀರಪ್ಪನ್‌ ಮಗಳು ವಿದ್ಯಾರಾಣಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ?

ವರದಿಯ ಪ್ರಕಾರ, ವೀರಪ್ಪನ್ ಪುತ್ರಿ ವಿದ್ಯಾರಾಣಿಯವರು ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರದಿಂದ ಅಖಾಡಕ್ಕೆ ಇಳಿದಿದ್ದಾರೆ. ನಮ್ ತಮಿಳರ್ ಕಚ್ಚಿ (NTK) ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಈಗಾಗಲೇ ಪ್ರಚಾರ ಆರಂಭಿಸಿರುವ ವಿದ್ಯಾರಾಣಿ ತನ್ನ ತಂದೆಯ ಹೆಸರಲ್ಲಿ ಕಾಂಪೇನ್ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ವಾಹನಕ್ಕೆ ಕಾಡುಗಳ್ಳ ವೀರಪ್ಪನ್ ಫೋಟೋ ಇರುವ ಬ್ಯಾನರ್ ಹಾಕಿಕೊಂಡು ಕ್ಯಾಂಪೇನ್ ಮಾಡುತ್ತಿದ್ದು ನನ್ನ ತಂದೆಯೇ ನನಗೆ ಸ್ಫೂರ್ತಿ ಎಂದು ಪ್ರಚಾರದಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಒಟ್ಟಾರೆಯಗಿ ಹೇಳುವುದಾದರೆ, ವೃತ್ತಿಯಲ್ಲಿ ವಕೀಲೆಯಾಗಿರುವ ವಿದ್ಯಾರಾಣಿಯವರು 2020 ಜುಲೈನಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು. ಆ ನಂತರ ರಾಜ್ಯದ ಯೂತ್ ವಿಂಗ್​ಗೆ ಉಪಾಧ್ಯಕ್ಷೆಯಾಗಿ ನೇಮಕವಾಗಿದ್ದರು. ಆದರೆ ಕಾರಣಾಂತರದಿಂದ ಬಿಜೆಪಿಯನ್ನು ತೊರೆದಿದ್ದ ವಿದ್ಯಾ ಸದ್ಯ ಎನ್​​ಟಿಕೆ ಪಕ್ಷದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಚಾರ ಮಾಡುತ್ತಿದ್ದಾರೆ. ಹಾಗಾಗಿ ಅವರು ಬಜೆಪಿ ಪಕ್ಷದಿಂದ ಸ್ಪಧಿಸುತ್ತಿದ್ದಾರೆ ಎಂಬುದು ಸುಳ್ಳು.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಚುನಾವಣಾ ಬಾಂಡ್ ಮಾಹಿತಿಯನ್ನು ಜನ ಸಾಮಾನ್ಯನಿಗೂ ಸಿಗುವಂತೆ ಕಾನೂನು ಮಾಡಿತ್ತೇ ಮೋದಿ ಸರ್ಕಾರ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights