FACT CHECK | ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯನ್ನು ಉರುಳಿಸಿದ್ದು ನಿಜವೇ?

ಇತ್ತೀಚೆಗೆ ವಿಡಿಯೋ ಒಂದು ವೈರಲ್ ಆಗಿದ್ದು ಅದರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಗುಂಪೊಂದು ಟ್ಯಾಕ್ಟ್‌ರ್ ಬಳಸಿ ಉರುಳಿಸುತ್ತಿರುವುದನ್ನು ಕಾಣಬಹುದಾಗಿದೆ. ಸಾಮಾಜಿಕ ಮಧ್ಯಮಗಳಲ್ಲಿ ಇದು ಕರ್ನಾಟಕದಲ್ಲಿ ನಡೆದ ಘಟನೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗುತ್ತಿದೆ.

https://twitter.com/theHindu_Sena/status/1774485918571012383

ಕರ್ನಾಟಕದಲ್ಲಿ 80% ಹಿಂದೂಗಳಿದ್ದರೂ ಬಿಜೆಪಿ ಸರ್ಕಾರವನ್ನು ಸೋಲಿಸಿ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ಅಧಿಕಾರಕ್ಕೆ ತಂದರು, ಆದರೆ ಈಗ ಕಾಂಗ್ರೆಸ್ ಸರ್ಕಾರದ ಮುಸ್ಲಿಮರ ಓಲೈಕೆಯ ಯಾವ ಹಂತಕ್ಕೆ ತಂದು ನಿಲ್ಲಿಸಿದೆ ನೋಡಿ, ಈಗ ಪಶ್ಚಾತಾಪ ಪಡುತ್ತಿದ್ದಾರೆ ಎಂಬ ಹೇಳಿಕೆಯೊಂದಿಎ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

“ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಲಾಗಿದೆ.” ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದಂತೆ ಬಿಜೆಪಿಯೇತರ ರಾಜ್ಯಗಳ ಮೇಲೆ ಅದರಲ್ಲೂ ದಕ್ಷಿಣ ರಾಜ್ಯಗಳ ಮೇಲೆ ಇಂತಹ ಆರೋಪಗಳನ್ನು ಹೊರಿಸಲಾಗುತ್ತಿದೆ.  ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಈ ಘಟನೆ 26 ಜನವರಿ 2024ರಲ್ಲಿ ಮಧ್ಯ ಪ್ರದೇಶದ ಉಜ್ಜಯಿನಿ ಜಿಲ್ಲೆಯ ಮಕಾಡೋನ್ ಪಟ್ಟಣದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

ರಾಷ್ಟ್ರ ನಾಯಕರ ಪ್ರತಿಮೆ ನಿಲ್ಲಿಸುವ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ವಾಗ್ವಾದ ನಡೆದಿದೆ. ಮಾಳ್ವಿಯ ಸಮುದಾಯದವರು ಪಟ್ಟಣದ ಪ್ರಮುಖ ವೃತ್ತದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಲು ಸಿದ್ದತೆ ನಡೆಸಿದ್ದರು ಆದರೆ ಪಾಟಿದಾರ್ ಸಮುದಾಯದವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಪ್ರತಿಷ್ಟಾಪಿಸಬೇಕು ಎಂದು ಒತ್ತಾಯಿಸಿ ರಾತ್ರೋ ರಾತ್ರಿ ಮೂರ್ತಿಯನ್ನು ಸ್ಥಾಪಿಸಿದ್ದರು. ಇದರಿಂದ ಸಿಟ್ಟಿಗೆದ್ದ ಭೀಮ್ ಆರ್ಮಿ ಕಾರ್ಯಕರ್ತರು ಮೂರ್ತಿಯನ್ನು ತೆರವುಗೊಳಿಸಿದ್ದಾರೆ.

ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ತೆರೆವುಗೊಳಿಸಿದ್ದರಿಂದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು, ಇದರಲ್ಲಿ ಪೊಲೀಸ್ ಅಧಿಕಾರಿ ಮತ್ತು ಕಾನ್‌ಸ್ಟೆಬಲ್ ಸೇರಿದಂತೆ ಹಲವಾರು ಜನರು ಗಾಯಗೊಂಡದ್ದರು. ವಾಹನಗಳಿಗೂ ಬೆಂಕಿ ಹಚ್ಚಲಾಗಿತ್ತು . ಈ ಕುರಿತು ಮಧ್ಯ ಪ್ರದೇಶದ  ಲಲ್ಲನ್‌ಟಾಪ್ ಎಂಬ ಸುದ್ದಿ ಮಾಧ್ಯಮ ವರದಿ ಮಾಡಿದ್ದು ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದೆ.

ಮಕಾಡನ್ ಪೊಲೀಸ್ ಠಾಣೆಯ ಭೀಮ್ ಸಿಂಗ್ ದೇವ್ಡಾ ಎಂಬ ಪೊಲೀಸ್ ಅಧಿಕಾರಿಯನ್ನು ಕರ್ತವ್ಯ ಲೋಪ ಮತ್ತು ನಿರ್ಲಕ್ಯದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಹಾಗಾಗಿ ಈ ಘಟನೆಗೂ ಕರ್ನಾಟಕಕ್ಕೂ ಸಂಬಂಧವಿಲ್ಲ. ಅಲ್ಲದೆ ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯನ್ನು ಹೊಡೆದು ಹಾಕಲಾಗಿದೆ ಎಂಬುದು ಸುಳ್ಳು.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ದೇವಸ್ಥಾನವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂದು ಸುಳ್ಳು ಸುದ್ದಿ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights