FACT CHECK | ಕಾಂಗ್ರೆಸ್ ಪ್ರಣಾಳಿಕೆ ದೇಶಕ್ಕೆ ಅಪಾಯಕಾರಿ ಎಂದು ಸುಳ್ಳು ಸುದ್ದಿ ಹಂಚಿಕೊಂಡ BJP ಬೆಂಬಲಿಗರು
” ಕಾಂಗ್ರೆಸ್ ಪ್ರಣಾಳಿಕೆ ಭಯಾನಕವಾಗಿದೆ. ನನ್ನ ಜೀವನದಲ್ಲಿ ಇಂತಹ ಅಪಾಯಕಾರಿ ಪ್ರಣಾಳಿಕೆಯನ್ನು ನೋಡಿಲ್ಲ. ಇದು ಪಿಎಫ್ಐನ ವಿಷನ್ 2047 ಡಾಕ್ಯುಮೆಂಟ್ ಇದ್ದಂತೆ. ತ್ರಿವಳಿ ತಲಾಖ್ ಅನ್ನು ಮರಳಿ ತರುತ್ತೇವೆ. ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ. ಲವ್ ಜಿಹಾದ್ ಬೆಂಬಲಿಸಿ ಶಾಲೆಯಲ್ಲಿ ಬುರ್ಖಾವನ್ನು ಬೆಂಬಲಿಸುತ್ತೇವೆ. ಬಹುಸಂಖ್ಯಾತವಾದವನ್ನು (ಹಿಂದೂ ಧರ್ಮ) ಕೊನೆಗೊಳಿಸುತ್ತೇವೆ.” ಎಂದು ಘೋಷಿಸಿಕೊಂಡಿದ್ದಾರೆ. ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಹಲವು ಬಲಪಂಥೀಯ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಈ ಸುದ್ದಿಯನ್ನು ಸ್ಟಾರ್ ಬೋಯ್ ತರುಣ್ ಎಂಬ ಬಲಪಂಥೀಯ ಕಾರ್ಯಕರ್ತರೊಬ್ಬರು ಹಂಚಿಕೊಂಡಿದ್ದಾರೆ.
https://twitter.com/MonaPatelT/status/1776379382472622318
ಹಲವು ಬಿಜೆಪಿ ಬೆಂಬಲಿಗರು ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್:
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 5 ಏಪ್ರಿಲ್ 2024 ರಂದು ಲೋಕಸಭಾ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದ ವರದಿ ಲಭ್ಯವಾಗಿದೆ.
ಇದರಲ್ಲಿ ೧. ಸಂವಿಧಾನದ 15, 16, 25, 26, 28, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಒಬ್ಬರ ನಂಬಿಕೆಯನ್ನು ಆಚರಿಸುವ ಮೂಲಭೂತ ಹಕ್ಕು ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ಖಾತರಿಪಡಿಸಿದ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿಹಿಡಿಯುತ್ತೇವೆ.
೨. ಸಂವಿಧಾನದ 15, 16, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಿದ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿಹಿಡಿಯುತ್ತೇವೆ.
೩. ಶಿಕ್ಷಣ, ಉದ್ಯೋಗ, ವ್ಯವಹಾರ, ಸೇವೆಗಳು, ಕ್ರೀಡೆ, ಕಲೆ ಮತ್ತು ಇತರ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಅವಕಾಶಗಳ ಸಂಪೂರ್ಣ ಲಾಭವನ್ನು ಪಡೆಯಲು ಅಲ್ಪಸಂಖ್ಯಾತರಿಗೆ ಸೇರಿದ ವಿದ್ಯಾರ್ಥಿಗಳು ಮತ್ತು ಯುವಕರನ್ನು ನಾವು ಪ್ರೋತ್ಸಾಹಿಸುತ್ತೇವೆ ಮತ್ತು ಸಹಾಯ ಮಾಡುತ್ತೇವೆ

೪. ನಾವು ವಿದೇಶದಲ್ಲಿ ಅಧ್ಯಯನಕ್ಕಾಗಿ ಮೌಲಾನಾ ಆಜಾದ್ ವಿದ್ಯಾರ್ಥಿವೇತನವನ್ನು ಪುನಃಸ್ಥಾಪಿಸುತ್ತೇವೆ ಮತ್ತು ವಿದ್ಯಾರ್ಥಿವೇತನದ ಸಂಖ್ಯೆಯನ್ನು ಹೆಚ್ಚಿಸುತ್ತೇವೆ.
೫. ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ. ಬ್ಯಾಂಕುಗಳು ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಸಾಂಸ್ಥಿಕ ಸಾಲವನ್ನು ಒದಗಿಸುತ್ತವೆ ಎಂದು ನಾವು ಖಚಿತಪಡಿಸುತ್ತೇವೆ.
೬. ಅಲ್ಪಸಂಖ್ಯಾತರು ಶಿಕ್ಷಣ, ಆರೋಗ್ಯ, ಸಾರ್ವಜನಿಕ ಉದ್ಯೋಗ, ಲೋಕೋಪಯೋಗಿ ಒಪ್ಪಂದಗಳು, ಕೌಶಲ್ಯ ಅಭಿವೃದ್ಧಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಾರತಮ್ಯವಿಲ್ಲದೆ ತಮ್ಮ ನ್ಯಾಯಯುತ ಪಾಲನ್ನು ಪಡೆಯುವುದನ್ನು ನಾವು ಖಚಿತಪಡಿಸುತ್ತೇವೆ.
೭. ಪ್ರತಿಯೊಬ್ಬ ನಾಗರಿಕನಂತೆ, ಅಲ್ಪಸಂಖ್ಯಾತರಿಗೂ ಉಡುಗೆ, ಆಹಾರ, ಭಾಷೆ ಮತ್ತು ವೈಯಕ್ತಿಕ ಕಾನೂನುಗಳ ಆಯ್ಕೆಯ ಸ್ವಾತಂತ್ರ್ಯವಿದೆ ಎಂದು ಕಾಂಗ್ರೆಸ್ ಖಚಿತಪಡಿಸುತ್ತದೆ.
೮. ನಾವು ವೈಯಕ್ತಿಕ ಕಾನೂನುಗಳ ಸುಧಾರಣೆಯನ್ನು ಪ್ರೋತ್ಸಾಹಿಸುತ್ತೇವೆ. ಅಂತಹ ಸುಧಾರಣೆಯನ್ನು ಸಂಬಂಧಪಟ್ಟ ಸಮುದಾಯಗಳ ಭಾಗವಹಿಸುವಿಕೆ ಮತ್ತು ಒಪ್ಪಿಗೆಯೊಂದಿಗೆ ಕೈಗೊಳ್ಳಬೇಕು.
೯. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಹೆಚ್ಚಿನ ಭಾಷೆಗಳನ್ನು ಸೇರಿಸುವ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.

ಇದಿಷ್ಟು ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿರುವ 9 ಅಂಶಗಳ ಗ್ಯಾರಂಟಿಗಳಾಗಿವೆ. ಆದ್ದರಿಂದ ಇಲ್ಲಿ ಎಲ್ಲಿಯೂ ತ್ರಿವಳಿ ತಲಾಖ್ ಮತ್ತೆ ತರುತ್ತೇವೆ ಎಂದಿಲ್ಲ, ಲವ್ ಜಿಹಾದ್ ಬೆಂಬಲಿಸುತ್ತೇವೆ ಎಂದಿಲ್ಲ ಮತ್ತು ಬಹುಸಂಖ್ಯಾತವಾದವನ್ನು ಕೊನೆಗೊಳಿಸುತ್ತೇವೆ ಎಂದಿಲ್ಲ. ಬದಲಾಗಿ ಬಹುಸಂಖ್ಯಾತ ವಾದವನ್ನು ಖತರಿಪಡಿಸುವ ಭಾರತೀಯ ಸಂವಿಧಾನದ ಕಾನೂನುಗಳನ್ನು ಖಾತರಿ ಪಡಿಸುತ್ತೇವೆ ಎಂದಿದ್ದಾರೆ.
2024ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಹಿಂದೂ ವಿರೋಧಿ, ಅಲ್ಪಸಂಖ್ಯಾ ಮುಸ್ಲಿಂರನ್ನು ಓಲೈಕೆ ಮಾಡಲು ಇಂತಹ ಪ್ರಣಾಳಿಕೆಯನ್ನು ಜಾರಿಗೆ ತಂದಿದೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಬಜೆಪಿ ಮತ್ತು ಸಂಘ ಪರಿವಾರ ಮಾಡುತ್ತಿರುವ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಯಾವ ಬಟನ್ ಒತ್ತಿದ್ರು BJP ಗೆ ಓಟು ! ವೈರಲ್ ವಿಡಿಯೋದ ಗುಟ್ಟೇನು?

