FACT CHECK | ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ಗೆ ಸೇರಿದ ಹಣ ಮತ್ತು ಚಿನ್ನಾಭರಣವನ್ನು ಪೊಲೀಸರು ಜಪ್ತಿ ಮಾಡಿದ್ದು ನಿಜವೇ?

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಪ್ರಸಾರವಾಗುತ್ತಿದ್ದು ಪೊಲೀಸರು ವಶಪಡಿಸಿಕೊಂಡಿರುವ ಕಂತೆ ಕಂತೆ ಹಣ, ಚಿನ್ನ ಮತ್ತು ಬೆಳ್ಳಿಯ ವಸ್ತುಗಳನ್ನು ಟೇಬಲ್‌ ಮೇಲೆ ಜೋಡಿಸಿರಿವುದನ್ನು ನೋಡಬಹುದು. ಇಲ್ಲಿ ಪ್ರದರ್ಶನಕ್ಕೆ ಇಟ್ಟಿರುವ ಹಣ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ್ದು ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಮೋದಿ ಮತ್ತೊಮ್ಮೆ ಎಂಬ ಫೇಸ್‌ಬುಕ್ ಪೇಜ್‌ನಿಂದ ಹಂಚಿಕೊಳ್ಳಲಾದ ವಿಡಿಯೋ ಸಿದ್ದು ಡಿಕೆಶಿಯ ಕೋಟಿ ಕೋಟಿ ಹಣ ಸೀಜ್‌ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಈ ದೃಶ್ಯಗಳಲ್ಲಿ ಕಂಡುಬರುವ ಹಣ ಮತ್ತು ಚಿನ್ನಾಭರಣ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗೆ ಸೇರಿದ್ದು ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯಂತೆ ಪೊಲೀಸರು ವಶಪಡಿಸಿಕೊಂಡಿರುವ ನಗದು ಮತ್ತು ಚಿನ್ನಾಭರಣ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗೆ ಸೇರಿದೆಯೇ ಎಂದು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, 8 ಏಪ್ರಿಲ್ 2024 ರಂದು  ANI ಸುದ್ದಿ ಸಂಸ್ಥೆ ಮಾಡಿರುವ ವರದಿ ಲಭ್ಯವಾಗಿದೆ.

ಕರ್ನಾಟಕದ ಬಳ್ಳಾರಿಯ ಕಂಬಳಿ ಬಜಾರ್‌ನಲ್ಲಿರುವ ಹೇಮಾ ಜ್ಯುವೆಲರ್ಸ್ ಮಾಲೀಕನ ಮನೆಯಲ್ಲಿ ಭಾನುವಾರ(7 ಏಪ್ರಿಲ್) ದಾಳಿ ನಡೆಸಿ ಕನಿಷ್ಠ 7.6 ಕೋಟಿ ರೂಪಾಯಿ ಮೌಲ್ಯದ ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಒಟ್ಟು 5.60 ಕೋಟಿ ರೂ. ನಗದು, 3 ಕೆಜಿ ಬಂಗಾರ 103 ಕೆಜಿ ಬೆಳ್ಳಿ ಆಭರಣ, 21 ಕೆಜಿ ಕಚ್ಚಾ ಬೆಳ್ಳಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿದ ನಗದು ಹವಾಲಾಕ್ಕೆ ಸಂಬಂಧಿಸಿದ ಹಣ ಎನ್ನಲಾಗಿದೆ

ದಾಳಿ ಬಳಿಕ ಹೇಮಾ ಜ್ಯುವೆಲರ್ಸ್ ಮಾಲೀಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಏತನ್ಮಧ್ಯೆ, ವಶಪಡಿಸಿಕೊಂಡ ವಸ್ತುಗಳು ಹವಾಲಾ ವಹಿವಾಟಿನ ಆದಾಯ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಅವ್ಯವಹಾರ ನಡೆದಿರುವ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಎಂದು ವರದಿಯಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ‌ 5.6 ಕೋಟಿ ಹಣ ವಶ, 3 ಕೆಜಿ ಬಂಗಾರ ವಶಕ್ಕೆ ಪಡೆಯಲಾಗಿದೆ. 68 ಕೆಜಿ ಬೆಳ್ಳಿ ಗಟ್ಟಿ, 103 ಕೆಜಿ ಬೆಳ್ಳಿ ಆಭರಣಗಳನ್ನು ಹೇಮಾ ಜ್ಯುವೆಲರ್ಸ್ ಮಾಲೀಕರಾದ ನರೇಶ್ ಸೋನಿ ಮನೆಯಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಬಳ್ಳಾರಿ ಎಸ್​​ಪಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ನೀಡಿದ್ದಾರೆ.ಮಹಜರು ಮಾಡಿ ವಸ್ತುಗಳ ವಶಪಡಿಸಿಕೊಂಡಿದ್ದೇವೆ. 98 ಕೆಪಿ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಿ ಆದಾಯ ತೆರಿಗೆ ಇಲಾಖೆಗೆ ಪ್ರಕರಣ ಹಸ್ತಾಂತರ ಮಾಡುತ್ತೇವೆ. ಈಗಗಲೇ ನರೇಶ್ ಸೋನಿಗೆ ನೋಟೀಸ್ ಜಾರಿ ಮಾಡಿ ವಿಚಾರಣೆಗೆ ಒಳಪಡಿಸಲಾಗಿದೆ. ಎಂದು ನ್ಯೂಸ್ 18 ಸುದ್ದಿ ವಾಹಿನಿ ವರದಿ ಮಾಡಿದೆ.

ಏಷಿಯಾ ನೆಟ್ ಸುವರ್ಣ ನ್ಯೂಸ್ ವರದಿ
ಏಷಿಯಾ ನೆಟ್ ಸುವರ್ಣ ನ್ಯೂಸ್ ವರದಿ

ಇನ್ನು ಹಣ ಮತ್ತು ಬಂಗಾರ ಪತ್ತೆಯಾದ ವ್ಯಕ್ತಿ ನರೇಶ್‌ ಹೇಮಾ ಜುವೆಲರ್ಸ್ ಮಾಲಿಕನಾಗಿದ್ದಾನೆ. ಇನ್ನು ದಾಖಲೆಯಿಲ್ಲದ ಹಣ ಸಂಗ್ರಹಣೆ ಮಾಡಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ತಿಳಿಸಿದ್ದಾರೆ. ಆದರೆ, ಹಣ ಯಾವುದೇ ಪಕ್ಷಕ್ಕೆ ಸೇರಿದ್ದು ಅನ್ನೋ ಬಗ್ಗೆ ಸ್ಪಷ್ಟತೆ ಇಲ್ಲ. ಈ‌ ಬಗ್ಗೆ ತನಿಖೆ ನಡೆಸಲಾಗ್ತಿದೆ. ಕೆಪಿ ಅ್ಯಕ್ಟ್ ನಲ್ಲಿ ದೂರು ದಾಖಲು ಮಾಡಲಾಗಿದೆ. ಹಣ ಮತ್ತು ಬಂಗಾರ ಅದಾಯ ತೆರೆಗೆ ಇಲಾಖೆಗೆ ರವಾನೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಎಂದು ಏಷಿಯಾ ನೆಟ್ ಸುವರ್ಣ ವರದಿ ಪ್ರಕಟಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಬಳ್ಳಾರಿ ನಗರದ ಕಂಬಳಿ ಬಜಾರ್‌ನಲ್ಲಿ ಚುನಾವಣಾಧಿಕಾರಿಗಳು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5.60 ಕೋಟಿ ನಗದು ಮತ್ತು ಕೆಜಿಗಟ್ಟಲೆ ಚಿನ್ನದ ಆಭರಣ ಮತ್ತು ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿ, ಹಣ ಸಾಗಿಸುತ್ತಿದ್ದವರನ್ನು ಬ್ರೂಸ್‌ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡ ಪ್ರಕರಣದ ಚಿತ್ರಗಳನ್ನು ಹಂಚಿಕೊಂಡು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯರವರಿಗೆ ಸೇರಿದ ಹಣವನ್ನು ಸೀಜ್ ಮಾಡಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಗ್ಯಾರೆಂಟಿ ಯೋಜನೆ ಕುರಿತು ಮಾತನಾಡಿದ್ದ ವಿದ್ಯಾರ್ಥಿ ಹೇಳಿಕೆಯನ್ನು ತಿರುಚಿದ ಬಲಪಂಥೀಯ ಬೆಂಬಲಿಗರು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights