FACT CHECK | ಪ್ರಧಾನಿ ಮೋದಿಯಿಂದ ಯೋಗಿಗೆ ಅವಮಾನವಾಗಿದ್ದು ನಿಜವೇ?

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು ಪ್ರಧಾನಿ ಮೋದಿ ಕಾರ್ಯಕ್ರಮವೊಂದರಲ್ಲಿ ಯೋಗಿ ಆದಿತ್ಯನಾಥ್‌ರನ್ನು ಅವಮಾನಿಸಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಯೋಗಿ ಆದಿತ್ಯನಾಥ್ ಕುಳಿತುಕೊಳ್ಳಲು ಕುರ್ಚಿಯನ್ನು ಎಳೆಯಲು ಪ್ರಯತ್ನಿಸಿದಾಗ ಅವರನ್ನು ದೂರ ತಳ್ಳುವ ಮೂಲಕ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಸಮಾಜವಾದಿ ಪಕ್ಷದ ಬೆಂಬಲಿಗರು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋದ ಕೀ ಪ್ರೇಮ್‌ಗಳನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 9 ಏಪ್ರಿಲ್ 2024 ರಂದು ನ್ಯೂಸ್ 24 ಸುದ್ದಿ ವಾಹಿನಿಯೂ ತನ್ನ ಯೂಟ್ಯೂಬ್‌ ಚಾನೆಲ್‌ನ್ಲಿ ಅಪ್‌ಲೋಡ್‌ ಮಾಡಿದ ವಿಡಿಯೋ ಲಭ್ಯವಾಗಿದೆ.

ವಿಡಿಯೋ ವರದಿಯ ಪ್ರಕಾರ, ಇದು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ನಡೆದ ಸಾರ್ವಜನಿಕ ಸಭೆಯ ದೃಶ್ಯಗಳಾಗಿವೆ. ಸಿಎಂ ಯೋಗಿ ಆದಿತ್ಯನಾಥ್ ಹಿಂದಿನಿಂದ ಮೈಕ್‌ ಇದ್ದ ಪೋಡಿಯಂನತ್ತ ತೆರಳಲು ಸಿದ್ಧತೆ ನಡೆಸುತ್ತಿದ್ದಾಗ, ಪ್ರಧಾನಿ ಮೋದಿ ಅವರ ಕೈ ಹಿಡಿದು ಮುಂದಿನಿಂದ ಬರುವಂತೆ ಸೂಚಿಸಿದ್ದರು ಎಂಬುದನ್ನು ನೋಡಬಹುದು..

ಬಿಜೆಪಿಯ ಅಧಿಕೃತ ಯೂಟ್ಯೂಬ್ ನಲ್ಲಿ ಅಪ್‌ಲೋಡ್‌ ಮಾಡಿದ ವಿಡಿಯೋ ಲಭ್ಯವಾಗಿದೆ.   ಪಿಲಿಭಿತ್‌ನಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಮಾತನಾಡಲು ಆಹ್ವಾನಿಸಿದಾಗ ಅವರು ಆರಂಭದಲ್ಲಿ ತಮ್ಮ ಕುರ್ಚಿಯನ್ನು ಪಕ್ಕಕ್ಕೆ ತಳ್ಳುವ ಮೂಲಕ ಹಿಂದಿನಿಂದ ಮೈಕ್‌ ಇದ್ದ ಪೋಡಿಯಂನತ್ತ ತೆರಳಲು ಪ್ರಯತ್ನಿಸಿದ್ದರು. ಆದರೆ, ಪ್ರಧಾನಿ ಮೋದಿ ಅವರ ಕೈಯನ್ನು ಹಿಡಿದು ಮುಂಭಾಗದಿಂದಲೇ ಹೋಗುವಂತೆ ಸೂಚಿಸಿರುವುದು ಸ್ಪಷ್ಟವಾಗಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಿಜೆಪಿ ಪಕ್ಷದ ಮುಂದಿನ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ಬಿಜೆಪಿಯ ಒಂದು ಗುಂಪು ಹೇಳುತ್ತಿರುತ್ತದೆ. ಅದೇ ಕಾರಣಕ್ಕೆ ಪ್ರಧಾನಿ ಮೋದಿಗೆ ಯೋಗಿ ಆದಿತ್ಯನಾಥ್ ಎಂದರೆ ಆಗಿಬರುವುದಿಲ್ಲ ಎಂಬ ಕಥೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿಬರುತ್ತಿರುತ್ತವೆ. ಇದೇ ಹಿನ್ನಲೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿರಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಉತ್ತರ ಪ್ರದೇಶದಲ್ಲಿ 2024ರ ಲೋಕಸಭಾ ಚುನಾವಣೆಯ ಭಾಗವಾಗಿ ಬಿಜೆಪಿ ಪಕ್ಷದ ಶಕ್ತಿಪ್ರದರ್ಶನ ನಡೆದಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಯೋಗಿ ಆದಿತ್ಯನಾಥ್ ಗೆ ಮುಂದಿನಿಂದ ಹೋಗಲು ಸೂಚಿಸುವ ಸಾಮಾನ್ಯ ಸಂದರ್ಭವನ್ನು ಮೋದಿಯವರು ಯೋಗಿ ಆದಿತ್ಯನಾಥ್ ಅವರನ್ನು ಅವಮಾನಿಸಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ಗೆ ಸೇರಿದ ಹಣ ಮತ್ತು ಚಿನ್ನಾಭರಣವನ್ನು ಪೊಲೀಸರು ಜಪ್ತಿ ಮಾಡಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights