FACT CHECK | ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ಗಳಲ್ಲಿ ಮುಸ್ಲಿಂ ನ್ಯಾಯಾಧೀಶರಿಗೆ ಆಧ್ಯತೆ ನೀಡುವ ಭರವಸೆಯನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರಿಸಿದೆ ಎಂಬುದು ಸುಳ್ಳು

2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ ಜೋರು ಸದ್ದು ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು 1936ರಲ್ಲಿ ಮುಸ್ಲಿಂ ಲೀಗ್ ಸಿದ್ಧಪಡಿಸಿದ್ದ ಚುನಾವಣಾ ಪ್ರಣಾಳಿಕೆಗೆ ಹೋಲಿಕೆ ಇದೆ ಎಂಬ ಆರೋಪವನ್ನು BJP ಮಾಡುತ್ತಲೇ ಬಂದಿದೆ. ಈಗ ಅದೇ ರೀತಿ ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ಗಳಲ್ಲಿ ನ್ಯಾಯಾಧೀಶರನ್ನು ನೇಮಕ ಮಾಡುವ ವಿಚಾರದಲ್ಲೂ ಕಾಂಗ್ರೆಸ್‌ ಮುಸ್ಲಿಮರನ್ನು ಓಲೈಕೆ ಮಾಡುತ್ತಿದೆ ಎಂದು ಪ್ರತಿಪಾದಿಸಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.

ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ನ್ಯಾಯಾಧೀಶರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡುವುದಾಗಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿದೆ ಎಂಬ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : 

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕಾಂಗ್ರೆಸ್‌ ಪ್ರಣಾಳಿಕೆ ನ್ಯಾಯ ಪಥ ವನ್ನು ಪರಿಶೀಲಿಸಿದಾಗ, ಈ ಪ್ರಣಾಳಿಕೆಯ ನ್ಯಾಯಾಂಗ ವಿಭಾಗದಲ್ಲಿ ಕಾಂಗ್ರೆಸ್ ಪಕ್ಷವು ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಪ್ರಸ್ತಾಪಿಸಿರುವುದು ಕಂಡುಬಂದಿದೆ.

ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಯಾವುದೇ ಒಂದು ಅಲ್ಪಸಂಖ್ಯಾತ (ಮುಸ್ಲಿಂ) ಸಮುದಾಯದ ಹೆಸರನ್ನು ಪ್ರಸ್ತಾಪ ಮಾಡಿಲ್ಲ. ಬದಲಿಗೆ ‘ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರನ್ನು ಹೆಚ್ಚಿನ ಸಂಖ್ಯೆಯಲ್ಲಿ ನ್ಯಾಯಾಧೀಶರಾಗಿ ನೇಮಕ ಮಾಡಲಾಗುವುದು’ ಎಂದು ಹೇಳಿದೆಯಷ್ಟೆ.

ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಮಹಿಳೆಯರು, ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯದವರು ಹಾಗೂ ಅಲ್ಪಸಂಖ್ಯಾತರನ್ನು ನ್ಯಾಯಾಧೀರನ್ನಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ಗಳಲ್ಲಿ ನೇಮಕ ಮಾಡಲಾಗುವುದು ಎಂದು ಹೇಳಿದ್ದರು ಎಂದು  ಏಪ್ರಿಲ್ 6 ರಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯನ್ನು ಪ್ರಕಟಿಸಿದೆ.

1992ರ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಕಾಯ್ದೆಯ ಸೆಕ್ಷನ್ 2(ಸಿ) ಅಡಿ ಹೆಸರಿಸಲಾದ ಸಮುದಾಯಗಳಲ್ಲಿ ಮುಸ್ಲಿಂ, ಸಿಖ್, ಕ್ರೈಸ್ತ, ಬೌದ್ಧ, ಜೈನ ಹಾಗೂ ಪಾರ್ಸಿ ಸಮುದಾಯಗಳು ಸೇರಿವೆ. ಈ ಎಲ್ಲಾ ಸಮುದಾಯಗಳ್ನು ಸೇರಿಸಿ ಅಲ್ಪಸಂಖ್ಯಾತ ಸಮುದಾಯ ಎಂದು ಕರೆಯಲಾಗುತ್ತದೆ. ಇದನ್ನೆ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2024ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ಗಳಲ್ಲಿ ಮುಸ್ಲಿಂ ಸಮುದಾಯದ ನ್ಯಾಯಾಧೀಶರನ್ನು ಮಾಡಿಕೊಳ್ಳಲಗುವುದು ಎಂದು ಹೇಳಿಲ್ಲ. ಬದಲಿಗೆ ಅಲ್ಪಸಂಖ್ಯಾತ ಸಮುದಾಯದವರು ಎಂದು ಹೇಳಿದೆ. ಅಲ್ಪಸಂಖ್ಯಾತರು ಎಂದರೆ ಮುಸ್ಲಿಮರು ಮಾತ್ರವಲ್ಲ. ಮುಸ್ಲಿಂ, ಸಿಖ್, ಕ್ರೈಸ್ತ, ಬೌದ್ಧ, ಜೈನ ಹಾಗೂ ಪಾರ್ಸಿ ಸಮುದಾಯಗಳು ಒಟ್ಟು ಅಲ್ಪಸಂಖ್ಯಾತ ಸಮುದಾಯವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಮುಸ್ಲಿಂ ದ್ವೇಷದ ಜೊತೆಗೆ ಸುಳ್ಳನ್ನು ಹೇಳಿದ ಮೋದಿ! ಏನದು ಸುಳ್ಳು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights