FACT CHECK | ಮುಸ್ಲಿಂ ದ್ವೇಷದ ಜೊತೆಗೆ ಸುಳ್ಳನ್ನು ಹೇಳಿದ ಮೋದಿ! ಏನದು ಸುಳ್ಳು?

ರಾಜಸ್ಥಾನದ ಬನ್‌ಸ್ವಾರಾದಲ್ಲಿ ಏಪ್ರಿಲ್ 22 ರಂದು ನಡೆದ ಬಿಜೆಪಿಯ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಅವರ ಹಳೆಯ ಹೇಳಿಕೆಯೊಂದನ್ನು ಉಲ್ಲೇಖಿಸಿದ್ದಾರೆ ಅಬ್ಬರದ ಭಾಷಣ ಮಾಡಿದ್ದಾರೆ.

‘ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಅಧಿಕಾರ’ ಇರುವುದಾಗಿ ಮನಮೋಹನ್ ಸಿಂಗ್‌ ಹೇಳಿದ್ದಾರೆ ಎಂದು ಮೋದಿ ಪ್ರಸ್ತಾಪಿಸಿದ್ದಾರೆ. ಮೋದಿಯವರ ಭಾಷಣದ 1 ನಿಮಿಷ 13 ಸೆಕೆಂಡ್‌ಗಳ ವಿಡಿಯೋ ವೈರಲ್ ಆಗಿದೆ.  ಮುಸ್ಲಿಮರು ಜಾಸ್ತಿ ಮಕ್ಕಳು ಮಾಡ್ತಾರೆ ಎಂದು ಪ್ರತಿಪಾದಿಸಿ ವಿಡಿಯೋವನ್ನು ಹಂಚಿಕೊಂಡಿದೆ. ಟಿವಿ ವಿಕ್ರಮ.

ರಾಜಸ್ತಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತುಗಳು:

‘ಈ ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರ ಈ ದೇಶದ ಸಂಪತ್ತಿನ ಮೇಲೆ ಮೊದಲ ಅಧಿಕಾರ ಇರುವುದು ಮುಸ್ಲಿಮರಿಗೆ ಮಾತ್ರ ಎಂದು ಹೇಳಿತ್ತು. ಇದರ ಅರ್ಥ ಹೆಚ್ಚು ಮಕ್ಕಳನ್ನು ಯಾರು ಹೊಂದಿರುತ್ತಾರೋ ಅವರಿಗೆ ಈ ದೇಶದ ಸಂಪತ್ತನ್ನು ಹಂಚುವುದು ಅವರ ಉದ್ದೇಶ. ನೀವು ಕಷ್ಟಪಟ್ಟು ದುಡಿದ ಹಣವನ್ನು ಈ ನುಸುಳುಕೋರರಿಗೆ (ಮುಸ್ಲಿಮರಿಗೆ) ಹಂಚಬೇಕೆ? ಇದಕ್ಕೆ ನಿಮ್ಮ ಸಮ್ಮತಿ ಇದೆಯೇ? ಇದನ್ನು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲೇ ಹೇಳಲಾಗಿದೆ. ದೇಶದ ವೈಯಕ್ತಿಕ ಆಸ್ತಿಗಳನ್ನು ಕಿತ್ತುಕೊಂಡು ಕಾಂಗ್ರೆಸ್ ಪಕ್ಷ ಮುಸ್ಲಿಮರಿಗೆ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಇದರಿಂದ ನಿಮ್ಮ ಹೆಣ್ಣುಮಕ್ಕಳ ಮಾಂಗಲ್ಯ ಕೂಡ ಉಳಿಯುವುದಿಲ್’ ಎಂದು ಮಾತನಾಡಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ಮತ್ತು ಪ್ರಧಾನಿ ಮೋದಿ ಭಾಷಣದಲ್ಲಿ ಉಲ್ಲೇಖಿಸಲಾದ ಮಾಜಿ ಪ್ರಾಧಾನಿ ಮನಮೋಹನ್ ಸಿಂಗ್ ಮೇಲಿನ ಹೇಳಿಕೆಯನ್ನು ನೀಡಿದ್ದರೆ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಹೇಳಿದಂತೆ, ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರಾ? ಎಂಬುವುದರ ಕುರಿತು ಪರಿಶೀಲಿಸಿದಾಗ, ಏಪ್ರಿಲ್ 22,2024ರಂದು ಇಂಡಿಯಾ ಟುಡೇ ಚಾನೆಲ್ ತನ್ನ ಯೂಟ್ಯೂಬ್‌ನಲ್ಲಿ ಸಿಂಗ್ ಅವರ ಹಳೆ ಭಾಷಣ ಮತ್ತು ಮೋದಿಯವರ ವಿವಾದಾತ್ಮಕ ಹೇಳಿಕೆಯ ಕುರಿತು ಅಪ್ಲೋಡ್ ಮಾಡಿರುವ ವಿಡಿಯೋ ಲಭ್ಯವಾಗಿದೆ.

 

ಇಂಡಿಯಾ ಟುಡೇಯಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿರುವ ಮಾತುಗಳು ಹೀಗಿವೆ. “ನಮ್ಮ ಸಾಮೂಹಿಕ ಆದ್ಯತೆಗಳು ಸ್ಪಷ್ಟವಾಗಿವೆ. ಕೃಷಿ, ನೀರಾವರಿ ಮತ್ತು ಜಲಸಂಪನ್ಮೂಲ, ಆರೋಗ್ಯ, ಶಿಕ್ಷಣ, ಗ್ರಾಮೀಣ ಮೂಲಸೌಕರ್ಯದಲ್ಲಿ ನಿರ್ಣಾಯಕ ಹೂಡಿಕೆ, ಮತ್ತು ಸಾಮಾನ್ಯ ಮೂಲಸೌಕರ್ಯಗಳಿಗೆ ಸಂಬಂಧಿಸಿದ ಸಾರ್ವಜನಿಕ ಹೂಡಿಕೆ, ಜೊತೆಗೆ SC/ST ಗಳು, ಇತರ ಹಿಂದುಳಿದ ವರ್ಗಗಳ ಉನ್ನತಿಗಾಗಿ ಕಾರ್ಯಕ್ರಮಗಳು ನಮ್ಮ ಆದ್ಯತೆಗಳಾಗಿವೆ. ಅಲ್ಪಸಂಖ್ಯಾತರು ಮತ್ತು ಪರಿಶಿಷ್ಟ ಪಂಗಡಗಳ ಘಟಕ ಯೋಜನೆಗಳನ್ನು ಪುನಶ್ಚೇತನಗೊಳಿಸಬೇಕಾಗಿದೆ, ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರು ಅಭಿವೃದ್ಧಿಯ ಫಲವನ್ನು ಸಮಾನವಾಗಿ ಹಂಚಿಕೊಳ್ಳಲು ನಾವು ನವೀನ ಯೋಜನೆಗಳನ್ನು ರೂಪಿಸಬೇಕಾಗಿದೆ. ಅವರು ಸಂಪನ್ಮೂಲಗಳ ಮೇಲಿನ ಮೊದಲ ಹಕ್ಕನ್ನು ಹೊಂದಿರಬೇಕು.ʼʼ

ಈ ಭಾಷಣದಲ್ಲಿ ಅವರು ಸಂಪನ್ಮೂಲಗಳ ಮೇಲಿನ ಮೊದಲ ಹಕ್ಕನ್ನು ಹೊಂದಿರಬೇಕು ಎಂದು ಹೇಳಿರುವುದು ಕೇವಲ ಅಲ್ಪಸಂಖ್ಯಾತರಿಗೆ ಮಾತ್ರವಲ್ಲ. ಅಲ್ಪಸಂಖ್ಯಾತರ ಪ್ರಸ್ತಾಪ ಮಾಡುವ ಮುನ್ನ ಅವರು ಹೇಳಿದ ಎಸ್‌ಸಿ/ಎಸ್‌ಟಿ/ಒಬಿಸಿಗಳನ್ನು ಸೇರಿಸಿ ಅವರು ಈ ಪ್ರಸ್ತಾಪ ಮಾಡಿದ್ದಾರೆ. ಹೀಗಾಗಿ ʻಅವರುʼ ಎಂಬ ಶಬ್ದ ಕೇವಲ ಮುಸ್ಲಿಮರನ್ನು ಉದ್ದೇಶಿಸಿ ಹೇಳಿದ ಪದವಲ್ಲ, ದೇಶದ ಎಲ್ಲ ದುರ್ಬಲ ವರ್ಗಗಳನ್ನು ಉದ್ದೇಶಿಸಿ ಹೇಳಲಾಗಿರುವುದು.

ಪ್ರಧಾನಿ ಕಚೇರಿಯ ವೆಬ್‌ಸೈಟ್‌ನ ಆರ್ಕೈವ್‌ನಲ್ಲಿ ಮನಮೋಹನ್ ಸಿಂಗ್ ಅವರ ಭಾಷಣದ ಅಧಿಕೃತ ಲಿಖಿತ ರೂಪ ನಮಗೆ ದೊರೆತಿದೆ. ಆರ್ಕೈವ್‌ ಪ್ರಕಾರ, ಪ್ರಧಾನಿ ಮೋದಿ ಉಲ್ಲೇಖಿಸಿದ್ದು, 2006ರ ಡಿಸೆಂಬರ್ 9ರಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯ 52ನೇ ಸಭೆಯನ್ನು ಉದ್ದೇಶಿಸಿ ಮನಮೋಹನ್ ಸಿಂಗ್ ಅವರು ಮಾಡಿದ್ದ ಭಾಷಣವಾಗಿದೆ.

ತನ್ನ ಭಾಷಣದಲ್ಲಿ 11ನೇ ಪಂಚವಾರ್ಷಿಕ ಯೋಜನೆಯ ಪ್ರಸ್ತಾವನೆಯನ್ನು ಉಲ್ಲೇಖಿಸುತ್ತಾ “ವೇಗದ ಮತ್ತು ಸರ್ವರನ್ನು ಒಳಗೊಂಡ ಅಭಿವೃದ್ಧಿಯೆಡೆಗೆ” ಎಂಬ ವಿಷಯದ ಬಗ್ಗೆ ಸವಿಸ್ತಾರವಾಗಿ ಮನಮೋಹನ್ ಸಿಂಗ್ ಮಾತನಾಡಿದ್ದರು. ಅದರ ಲಿಂಕ್ ಇಲ್ಲಿ ನೋಡಬಹುದು

ಒಟ್ಟಾರೆಯಾಗಿ ಹೇಳುವುದಾದರೆ,  ಡಾ. ಮನಮೋಹನ್‌ ಸಿಂಗ್‌ ಅವರ ಭಾಷಣದ ಮಾತುಗಳನ್ನು ತಮಗೆ ಬೇಕಾದ ಹಾಗೆ ತಿರುಚಿ ಪ್ರಧಾನಿ ಮೋದಿ ಮುಸ್ಲಿಮ್‌ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿರುವುದು ನಿಜಕ್ಕೂ ಅಘಾತಕಾರಿ ಬೆಳವಣಿಗೆ. ಭಾರತ ಈಗ ಅನುಭವಿಸುತ್ತಿರುವ ನೈಜ ಸಮಸ್ಯೆಗಳ ಬಗ್ಗೆ ಮಾತನಾಡದೆ ಈ ರೀತಿ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಸುಳ್ಳು ಹೇಳುವುದು ಎಷ್ಟು ಸರಿ ಎಂದು ಜನರು ಪ್ರಶ್ನಿಸುತ್ತಿದ್ದಾರೆ.ಪ್ರಧಾನಿ ಮೋದಿ ಇದಕ್ಕೆ ಉತ್ತರಿಸುತ್ತಾರಾ? ಕಾದು ನೋಡಬೇಕಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಸಚಿವ ರಾಜಣ್ಣನವರು ದೇವೇಗೌಡರ ಕುರಿತಾಗಿ ನೀಡಿದ ಹೇಳಿಕೆಯ ಹಳೆಯ ವಿಡಿಯೋವನ್ನು ಇತ್ತೀಚಿನದ್ದು ಎಂಬಂತೆ ಹಂಚಿಕೊಂಡ ಬಿಜೆಪಿ ಬೆಂಬಲಿಗರು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights