FACT CHECK | ಸಚಿವ ರಾಜಣ್ಣನವರು ದೇವೇಗೌಡರ ಕುರಿತಾಗಿ ನೀಡಿದ ಹೇಳಿಕೆಯ ಹಳೆಯ ವಿಡಿಯೋವನ್ನು ಇತ್ತೀಚಿನದ್ದು ಎಂಬಂತೆ ಹಂಚಿಕೊಂಡ ಬಿಜೆಪಿ ಬೆಂಬಲಿಗರು

ಸಹಕಾರ ಸಚಿವ ರಾಜಣ್ಣ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ.

“ದೇಶವೇ ಹೆಮ್ಮೆ ಪಡುವ ಹಿರಿಯ ರಾಜಕೀಯ ಮುತ್ಸದ್ಧಿಗೆ ಇಂತ ಕೀಳು ಮಟ್ಟದ ಹೇಳಿಕೆ ನೀಡಿರುವ ಸಚಿವ ರಾಜಣ್ಣ” ಎಂಬ ಹೇಳಿಕೆಯೊಂದಿಗೆ ಎಕ್ಸ್‌ನಲ್ಲಿ ಪೋಸ್ಟ್‌ಅನ್ನು ಬಿಜೆಪಿ ಬೆಂಬಲಿತೆ, ಬಲಪಂಥೀಯ ಪ್ರತಿಪಾದಕಿ ಶಕುಂತಲಾ ನಟರಾಜ್ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. “ದೇವೇಗೌಡರು ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಾರೆ, ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ, ಎಂದು ರಾಜಣ್ಣ ಅವರು ಹೇಳಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಹಾಗಿದ್ದರೆ ಸಹಕಾರಿ ಸಚಿವ ರಾಜಣ್ಣ ದೇವೇಗೌಡರ ಕುರಿಯಾಗಿ ಇಂತಹ ಹೇಳಿಕೆಯನ್ನು ಇತ್ತೀಚೆಗೆ ನೀಡಿದ್ದಾರೆಯೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಸಹಕಾರಿ ಸಚಿವ ರಾಜಣ್ಣ ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಆಕ್ಷೇಪಾರ್ಹ ಹೇಳಿಕೆಯನ್ನು ಪರಿಶೀಲಿಸಿದಾಗ, ವೈರಲ್ ವಿಡಿಯೋ ಇತ್ತೀಚಿನದಲ್ಲ ಬದಲಿಗೆ 2022ರದ್ದು ಎಂದು ತಿಳಿದು ಬಂದಿದೆ.

Fact Check: ಸಚಿವ ರಾಜಣ್ಣ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆಯೇ?

ಜುಲೈ 1, 2022ರಂದು,  ಪ್ರಜಾವಾಣಿ ವರದಿಯಲ್ಲಿ ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ರಾಜಣ್ಣ ಹೇಳಿಕೆ ವಿವಾದಕ್ಕೆ ಸಿಲುಕಿಸಿದೆ. ಮಧುಗಿರಿ ತಾಲ್ಲೂಕಿನ ಕಾವಣದಾಲ ಕಾರ್ಯಕ್ರಮದಲ್ಲಿ ಗುರುವಾರ ಸಾರ್ವಜನಿಕರೊಂದಿಗೆ ಮಾತನಾಡುವಾಗ ಮೇಲಿನಂತೆ ಹೇಳಿದ್ದಾರೆ ಎಂದಿದೆ.

ಒನ್ ಇಂಡಿಯಾ ಸೇರಿದಂತೆ ಕನ್ನಡದ ಹಲವು ಮಾಧ್ಯಮಗಳು ರಾಜಣ್ಣನವರ ವಿವಾದಾತ್ಮಕ ಹೇಳಿಕೆ ಬಗ್ಗೆ ವರದಿ ಮಾಡಿದ್ದವು ಅವುಗಳನ್ನು ಇಲ್ಲಿ ನೋಡಬಹುದು.

ಸಚಿವ ರಾಜಣ್ಣ ದೇವೇಗೌಡರ ಕುರಿತಾಗಿ ನೀಡಿದ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾದಾಗ, ತಮ್ಮ ಹೇಳಿಕೆ ಬಗ್ಗೆ ರಾಜಣ್ಣ ವಿಷಾದ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದರು. ಅದನ್ನು ಟಿವಿ 9 ವರದಿ ಮಾಡಿದೆ. ಅದನ್ನು ಇಲ್ಲಿಇಲ್ಲಿ ಮತ್ತು ಇಲ್ಲಿ ನೋಡಬಹುದು

 

ಒಟ್ಟಾರೆಯಗಿ ಹೇಳುವುದಾದರೆ, 2022ರಲ್ಲಿ ಸಚಿವ ರಾಜಣ್ಣ ತುಮಕೂರಿನ ಮಧುಗಿರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ವಿರುದ್ಧ ನೀಡಿದ ಹೇಳಿಕೆಯನ್ನು ಪ್ರಸ್ತುತ ಸಂದರ್ಭದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಸಿಎಂ ಸಿದ್ದರಾಮಯ್ಯನವರ ಹಳೆಯ ವಿಡಿಯೋವನ್ನು ತಿರುಚಿ ಹಂಚಿಕೊಂಡ BJP ಶಾಸಕ ಬಸನಗೌಡ ಪಾಟೀಲ್ ಯತ್ನಾಳ್


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights