FACT CHECK | ಕಾಂಗ್ರೆಸ್‌ ಸರ್ಕಾರ ದಲಿತರ ಮೀಸಲಾತಿ ಕಿತ್ತು, ಮುಸ್ಲಿಮರಿಗೆ ನೀಡಿತ್ತು ಎಂದು ಸುಳ್ಳು ಹೇಳಿದ ಪ್ರಧಾನಿ ಮೋದಿ

ರಾಜಸ್ಥಾನದ ಬನ್ಸ್ವಾರದಲ್ಲಿ ಬಿಜೆಪಿ ಪಕ್ಷ ಹಮ್ಮಿಕೊಂಡಿದ್ದ 2024ರ ಲೋಕಸಭಾ ಚುನಾವಣೆ ಪ್ರಚಾರ ಸಭೆಯನ್ನು ಉದ್ದೇಶಿಸಿ  ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಾ ಕರ್ನಾಟಕದ ವಿಷಯವನ್ನು ಪ್ರಸ್ತಾಪಿಸುತ್ತಾ ಕಾಂಗ್ರೆಸ್‌ ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ಕೊಟ್ಟಿದೆ ಎಂದು ಹೇಳಿದ್ದಾರೆ.

“ಕರ್ನಾಟಕದಲ್ಲಿ ಬಿಜೆಪಿಗೆ ಅಧಿಕಾರದ ಅವಕಾಶ ಸಿಕ್ಕಾಗ ಈ ಹಿಂದೆ ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟರಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ನಾವು ರದ್ದುಗೊಳಿಸಿ ವಾಪಾಸ್ ಪರಿಶಿಷ್ಟರಿಗೆ ನೀಡಿದ್ದೇವೆ.” ಎಂದು ಪ್ರಧಾನಿ ನರೇಂದ್ರ ಮೋದಿ  ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಇದೇ ವಿಡಿಯೋವನ್ನು ಕರ್ನಾಟಕ ಬಿಜೆಪಿ ತನ್ನ ಎಕ್ಸ್‌ ಖಾತೆಯಲ್ಲಿ ಕೂಡ ಹಂಚಿಕೊಂಡಿದೆ.

https://twitter.com/catale7a/status/1782664210914402383

ಇದರ ಜೊತೆಗೆ ಇನ್ನೂ ಮುಂದುವರೆದು ” 2004 ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗ ಮಾಡಿದ ಮೊದಲ ಕೆಲಸವೆಂದರೆ ಆಂಧ್ರ ಪ್ರದೇಶದಲ್ಲಿ ಪರಿಶಿಷ್ಟರ ಮೀಸಲಾತಿಯನ್ನು ಕಡಿತಗೊಳಿಸಿ ಮುಸಲ್ಮಾನರಿಗೆ ಅಂದಿನ ಕಾಂಗ್ರೆಸ್‌ ಸರ್ಕಾರ ಮೀಸಲಾತಿಯನ್ನು ನೀಡಿತ್ತು” ಎಂದು ಹೇಳಿಕೆಯನ್ನು ನೀಡಿದ್ದಾರೆ. ಹಾಗಿದ್ದರೆ ಪ್ರಧಾನಿ ಮೋದಿ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌ :

ಚುನಾವಣಾ ಭಾಷಣದಲ್ಲಿ ಪ್ರಧಾನಿ ಮೋದಿ ಕರ್ನಾಟಕ ಕುರಿತಾಗಿ ಹೇಳಿರುವ ಮಾತುಗಳನ್ನು ಪರಿಶೀಲಿಸಲು, ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಕಡಿತ ಗೊಳಿಸಿ ಮುಸಲ್ಮಾನರಿಗೆ ಮೀಸಲಾತಿ ನೀಡಿರುವ ಯಾವುದಾದರು ವರದಿಗಳು ಇದೆಯೇ ಎಂದು ಸರ್ಚ್ ಮಾಡಿದಾಗ, ಆದರೆ ಇದಕ್ಕೆ ಸಂಬಂಧಿಸಿದಂತೆ ಯಾವುದೇ ವರದಿಗಳು ಲಭ್ಯವಾಗಿಲ್ಲ.

ರಾಜ್ಯದಲ್ಲಿ ಯಾವುದೇ ಮೀಸಲಾತಿ ಕಡಿತಗೊಳಿಸಿದ ಕುರಿತು ಒಂದೇ ಒಂದು ವರದಿಗಳು ಇದುವರೆಗೂ ಕೂಡ ಕಂಡು ಬಂದಿಲ್ಲ. ಕರ್ನಾಟಕದಲ್ಲಿ ಯಾವುದೇ ಸರ್ಕಾರವು ಇದುವರೆಗೂ ಪರಿಶಿಷ್ಟರ ಮೀಸಲಾತಿ ಕಿತ್ತುಕೊಂಡ, ಕಡಿಮೆ ಮಾಡಿದ ವರದಿಗಳಿಲ್ಲ. ಹಿಂದುಳಿದ ವರ್ಗಗಳ ಅಡಿಯಲ್ಲಿ ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಲಾಗಿದೆ ಹೊರತು ಪರಿಶಿಷ್ಟ ಜಾತಿಯಿಂದ ಕಿತ್ತುಕೊಂಡು ಕೊಟ್ಟಿಲ್ಲ ಎಂಬುದು ತಿಳಿದು ಬಂದಿದೆ.

ಇನ್ನೂ ಆಂಧ್ರ ಪ್ರದೇಶದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯ ಆಧಾರದ ಮೇಲೆ ಕೆಲವೊಂದು ಕೀ ವರ್ಡ್ಸ್‌ಗಳನ್ನು ಬಳಸಿ ಸರ್ಚ್ ಮಾಡಿದಾಗ, ಎಕನಾಮಿಕ್ಸ್‌ ಟೈಮ್ಸ್‌ ವರದಿಯೊಂದು ಲಭ್ಯವಾಗಿದೆ. ವರದಿಯ ಪ್ರಕಾರ ಕರ್ನಾಟಕದಂತೆ ಆಂಧ್ರ ಪ್ರದೇಶದಲ್ಲಿಯೂ ದಲಿತರ ಮೀಸಲಾತಿ ಕಡಿಮೆ ಮಾಡಿಲ್ಲ. ಬದಲಿಗೆ 4.5% ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲಾಗಿದೆ ಎಂಬುದು ತಿಳಿದು ಬಂದಿದೆ.

ಪ್ರಜಾಪ್ರಭುತ್ವ ದೇಶವಾದ ಭಾರತದ ಪ್ರಧಾನ ಮಂತ್ರಿಯಾಗಿರುವ ನರೇಂದ್ರ ಮೋದಿ, ಸಂವಿಧಾನದ ಕಾವಲುಗಾರನಾಗಿ ಕೆಲಸ ಮಾಡಬೇಕು. ಆದರೆ ಅದನ್ನೆಲ್ಲ ಮರೆತು, ಚುನಾವಣೆ ಗೆಲ್ಲುವ ಏಕೈಕ ಉದ್ದೇಶದಿಂದ ದೇಶ ಒಡೆಯುವ ವಿಚ್ಛಿಧ್ರಕಾರಿ ಹೇಳಿಕೆ ನೀಡುತ್ತಿದ್ದಾರೆ. ತಮ್ಮ ಭಾಷಣದಲ್ಲಿ ಜನರ ದಾರಿ ತಪ್ಪಿಸಲು ಸುಳ್ಳು ಹೇಳಿಕೆಯನ್ನು ನೀಡುತ್ತಿದ್ದಾರೆ.

FACT CHECK | ಮುಸ್ಲಿಂ ದ್ವೇಷದ ಜೊತೆಗೆ ಸುಳ್ಳನ್ನು ಹೇಳಿದ ಮೋದಿ! ಏನದು ಸುಳ್ಳು?

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜಸ್ತಾನದ ಬನ್ಸ್ವಾರಾದಲ್ಲಿ ಮಾತನಾಡುತ್ತಾ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಪರಿಷಿಷ್ಟರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಿಲಾಗಿದೆ ಎಂಬ ಹೇಳಿಕೆ ಸುಳ್ಳು. ಅಂತಹ ಯಾವುದೇ ಮೀಸಲಾತಿಯನ್ನು ಕಾಂಗ್ರೆಸ್‌ ನೀಡಿಲ್ಲ. ಹಾಗಾಗಿ ಬಿಜೆಪಿ ಪೋಸ್ಟ್‌ನಲ್ಲಿ ಹಂಚಿಕೊಂಡ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಡಿಎಂಕೆ ಪಕ್ಷಕ್ಕೆ ವೋಟ್ ಹಾಕಲಿಲ್ಲ ಎಂದು ಡಿಎಂಕೆ ಸದಸ್ಯರು ಮಹಿಳೆಯನ್ನು ಥಳಿಸಿ ಹತ್ಯೆ ಮಾಡಿದ್ದಾರೆಂದು ಸುಳ್ಳು ಹಂಚಿಕೊಂಡ ಅಣ್ಣಾಮಲೈ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights