FACT CHECK | 230 ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್‌ ಸ್ಪರ್ಧಿಸಿದೆಯೇ?

2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೇವಲ 230 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

”ಯಾವುದೇ ಒಂದು ಪಕ್ಷ ಅಧಿಕಾರಕ್ಕೆ ಬರಲು 272 ಸ್ಥಾನ ಬೇಕು, ಆದರೆ ಕಾಂಗ್ರೆಸ್‌ ಪಕ್ಷದ ಚಿಹ್ನೆಯಡಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಕೇವಲ 230, ಹೀಗಾಗಿ ಕಾಂಗ್ರೆಸ್‌ ತನ್ನ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲು ಸಧ್ಯಾವಿಲ್ಲ. ಮತ್ತು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಜಾರಿಯಾಗಲು ಸಾಧ್ಯವಿಲ್ಲ. ಹೀಗಾಗಿ ಇವರ ಸುಳ್ಳು ಭರವಸೆಗಳನ್ನು ನಂಬಿ ಮತ ಚಲಾಯಿಸಿ ನೀವು ಮೋಸ ಹೋಗಬೇಡಿ” ಎಂಬ ಸಂದೇಶದ ಜೊತೆಗೆ ಪೋಸ್ಟರ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಹಾಗಿದ್ದರೆ 2024ರ ಲೋಕಸಭಾ ಚುನಾವಣೇಯಲ್ಲಿ ಕಾಂಗ್ರೆಸ್‌ ಎಷ್ಟು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀವರ್ಡ್ ಬಳಸಿ ಗೂಗಲ್ ಸರ್ಚ್ ನಡೆಸಿದಾಗ, ಹಲವು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳು ಲಭ್ಯವಾಗಿದೆ. ಕಾಂಗ್ರೆಸ್‌ ಕಡಿಮೆ ಸಂಖ್ಯೆಯಲ್ಲಿ ಲೋಕಸಭಾ ಚುನಾವಣಾ ಕಣದಲ್ಲಿ ಇಳಿದಿದೆ ಇಲ್ಲಿದೆ ಮಾಹಿತಿ ಎಂಬ ಶೀರ್ಷಿಕೆಯೊಂದಿ ಆಂಗ್ಲ ಭಾಷೆಯ ನ್ಯೂಸ್‌ ವೆಬ್‌ಸೈಟ್‌ ಮಿಂಟ್‌ ವರದಿಯೊಂದನ್ನ ಪ್ರಕಟಿಸಿದೆ. ಈ ವರದಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಸಂಖ್ಯೆ ಎಷ್ಟು ಎಂಬ ಮಾಹಿತಿಯನ್ನು ನೀಡಲಾಗಿದೆ.

ಇನ್ನು, ಮಿಂಟ್‌ ಪ್ರಕಟಿಸಿದ ವರದಿಯು ಹಿಂದೂಸ್ತಾನ್‌ ಟೈಮ್ಸ್‌ ವರದಿಯ ಮೂಲದಿಂದ ಆಯ್ದುಕೊಳ್ಳಲಾಗಿದೆ. ಈ ವರದಿಯಲ್ಲಿ ಕಾಂಗ್ರೆಸ್ 278 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಇನ್ನೂ 20 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಎಂಬ ಮಾಹಿತಿಯನ್ನು ಪ್ರಕಟಿಸಿದೆ.

2024ರ ಲೊಕಸಭಾ ಚುನಾವಣೆ ಒಟ್ಟು ಏಳು ಹಂತಗಳಲ್ಲಿ ನಡೆಯಲಿದೆ.  ಹಾಗಾಗಿ ಇನ್ನೂ  ಕೆಲವೊಂದು ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಬಾಕಿ ಇದ್ದು ಅಲ್ಲಿಯೂ ಕೂಡ ಕಾಂಗ್ರೆಸ್‌ ನಾಮಪತ್ರ ಸಲ್ಲಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ಪೋಸ್ಟ್‌ ಸುಳ್ಳಿನಿಂದ ಕೂಡಿದೆ.

ಒಟ್ಟಾರೆಯಾಗಿ ವೈರಲ್ ಪೋಸ್ಟ್‌ರ್ ನೋಡಿದ ಬಹುತೇಕರು ಇದನ್ನು ನಿಜ ಎಂದು ನಂಬಿ ಶೇರ್‌ ಮಾಡುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಕಾಂಗ್ರೆಸ್‌ ಅಧಿಕೃತ ಅಭ್ಯರ್ಥಿಗಳ ಕುರಿತು ಮಾಹಿತಿಯ ಕೊರತೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಸಾಕಷ್ಟು ಮಾಧ್ಯಮಗಳು ಕೂಡ ಬಿಜೆಪಿ ಅಭ್ಯರ್ಥಿಗಳ ಸಂಖ್ಯೆಯನ್ನು ನಿಖರವಾಗಿ ಕೊಟ್ಟಷ್ಟು ಕಾಂಗ್ರೆಸ್‌ನ ಅಭ್ಯರ್ಥಿಗಳ ಸಂಖ್ಯೆಯನ್ನು ಹೇಳಿಲ್ಲ. ಹಾಗಾಗಿ ಸಾರ್ವಜನಿಕರಲ್ಲಿ ಈ ರೀತಿಯ ಗೊಂದಲ ಮೂಡಲು ಆರಂಭವಾಗಿದೆ. ಆದರೆ ಕಾಂಗ್ರೆಸ್ 230 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಿದೆ ಎಂಬುದು ಸುಳ್ಳು.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | RSS ಮುಖ್ಯಸ್ಥ ಮೋಹನ್ ಭಾಗವತ್ ಸಂವಿಧಾನದ ಬದಲಾವಣೆಯನ್ನು ಮೌನವಾಗೇ ಮಾಡೋಣ ಎಂದು ಹೇಳಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights