FACT CHECK | ಬಿಜೆಪಿ ಅಧಿಕಾರಕ್ಕೆ ಬಂದರೆ ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸುತ್ತೇವೆ ಎಂದು ಹೇಳಿದ್ರಾ ಅಮಿತ್ ಶಾ?

ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡಗಳಿಗೆ (ಎಸ್‌ಸಿ) ಮತ್ತು ಇತರೆ ಹಿಂದುಳಿದ ವರ್ಗಗಳ (OBC) ‘ಅಸಂವಿಧಾನಿಕ ಮೀಸಲಾತಿ’ ರದ್ದುಗೊಳಿಸುವುದಾಗಿ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ, ಸಂತೋಷ್ ದಿವಾಟೆ ಎಂಬ ಬಳಕೆದಾರರು ಏಪ್ರಿಲ್ 28 ರಂದು  ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ, ಭಾರತೀಯ ಜನತಾ ಪಕ್ಷ (ಬಿಜೆಪಿ) ಅಧಿಕಾರಕ್ಕೆ ಬಂದರೆ  “ಅಸಂವಿಧಾನಿಕ ಮೀಸಲಾತಿಯನ್ನು ರದ್ದುಪಡಿಸುತ್ತದೆ” ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. “ನಾವು SC-ST ಮತ್ತು OBC ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ: ಗೃಹ ಸಚಿವ ಅಮಿತ್ ಶಾ” ಎಂದು ಬರೆದಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದಂತೆ ಚರ್ಚೆಗೆ ಗ್ರಾಸವಾಗಿದೆ.

India Tv - Fact check, Amit Shah

ಹಾಗಿದ್ದರೆ ಕೇಂದ್ರ ಗೃಹ ಸಚಿವ ಅಮಿತ್ ಷಾ SC-ST ಮತ್ತು OBC ಮೀಸಲಾತಿಯನ್ನು ರದ್ದುಗೊಳಿಸುತ್ತೇವೆ ಎಂದು ಹೇಳಿದ್ದಾರೆಯೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಅದರಲ್ಲಿ ಮೀಸಲಾತಿ ರದ್ದುಗೊಳಿಸುತ್ತೇವೆ ಎಂಬ ಹೇಳಿಕೆ ನಿಜವೇ ಎಂದು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, 23 ಏಪ್ರಿಲ್  2023 ರಂದು V6 ನ್ಯೂಸ್‌ನ YouTube ಚಾನಲ್‌ನಲ್ಲಿ ಅಪ್‌ಲೋಡ್ ಮಾಡಿದ  ಮೂಲ ವಿಡಿಯೋ ಲಭ್ಯವಾಗಿದೆ. “ಕೇಂದ್ರ ಸಚಿವ ಅಮಿತ್ ಶಾ ಅವರು ಮುಸ್ಲಿಂ ಮೀಸಲಾತಿ ಕುರಿತು ಪ್ರತಿಕ್ರಿಯಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ ಪ್ರಕಟಿಸಲಾಗಿದೆ.

ವಿಡಿಯೋದ ವಿವರಣೆಯ, 23 ಏಪ್ರಿಲ್ , 2023 ರಂದು ಹೈದರಾಬಾದ್ ಬಳಿಯ ಚೆವೆಲ್ಲಾದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ ಅವರು ಧರ್ಮ ಆಧಾರಿತ ಮೀಸಲಾತಿಯನ್ನು ಟೀಕಿಸಿ, ಅದನ್ನು “ಅಸಂವಿಧಾನಿಕ” ಎಂದು ಕರೆದ ಅವರು, ತೆಲಂಗಾಣದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ಮುಸ್ಲಿಮರಿಗೆ ಮೀಸಲಾತಿಯನ್ನು ರದ್ದುಗೊಳಿಸುವುದಾಗಿ ಪ್ರತಿಜ್ಞೆ ಮಾಡಿದರು ಎಂದು ಹೇಳಿದೆ.

 

NDTV ಕೂಡ 2023ರ ಏಪ್ರಿಲ್ 24ರಂದು ‘ ವಿಡಿಯೋವನ್ನು ಅಪ್‌ಲೋಡ್‌ ಮಾಡಿದ್ದು, ತೆಲಂಗಾಣದಲ್ಲಿ ಮುಸ್ಲಿಂ ಕೋಟಾವನ್ನು ಅಂತ್ಯಗೊಳಿಸಲು ಅಮಿತ್ ಶಾ ಪ್ರತಿಜ್ಞೆ’ ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಪ್ರಕಟಿಸಿದೆ. ಚಾನೆಲ್ ಪ್ರಕಾರ, ಹೈದರಾಬಾದ್ ಬಳಿಯ ಚೆವೆಲ್ಲಾದಲ್ಲಿ ನಡೆದ ರ್ಯಾಲಿಯಲ್ಲಿ ಅಮಿತ್ ಶಾ ಅವರು ಧರ್ಮಾಧಾರಿತ ಮೀಸಲಾತಿಯನ್ನು ಟೀಕಿಸಿ, ಅದನ್ನು ‘ಅಸಂವಿಧಾನಿಕ’ ಎಂದು ಕರೆದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ತೆಲಂಗಾಣದಲ್ಲಿ ಮುಸ್ಲಿಮರಿಗೆ ಮೀಸಲಾತಿಯನ್ನು ರದ್ದುಪಡಿಸುವುದಾಗಿ ಅವರು ವಾಗ್ದಾಳಿ ನಡೆಸಿದರು ಎಂದು ತಿಳಿಸಿದೆ.

ವೈರಲ್ ಆಗಿರುವ ವಿಡಿಯೋವನ್ನು ಎಡಿಟ್ ಮಾಡಿರುವುದು ಸ್ಪಷ್ಟವಾಗಿದೆ. ಮೂಲ ಕ್ಲಿಪ್‌ನಲ್ಲಿ, ಅಮಿತ್ ಶಾ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸುವ ಬಗ್ಗೆ ಮಾತನಾಡಿದ್ದಾರೆ, ಆದರೆ ಅದನ್ನು ಎಡಿಟ್ ಮಾಡಿ, ಅವರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸುವ ಬಗ್ಗೆ ಮಾತನಾಡಿರುವಂತೆ ಪದಗಳನ್ನು ಎಡಿಟ್ ಮಾಡಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ  ಮುಸ್ಲಿಮರ ಮೀಸಲಾತಿಯನ್ನು ರದ್ದುಪಡಿಸಲಾಗುವುದು ಎಂದು 2023 ಏಪ್ರಿಲ್‌ನಲ್ಲಿ ಹೇಳಿರುವ ಅಮಿತ್ ಶಾ ಹೇಳಿಕೆಯನ್ನು, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಮೀಸಲಾತಿ ಕೋಟಾವನ್ನು ರದ್ದುಗೊಳಿಸುತ್ತೇವೆ ಎಂದು ಹೇಳಿರುವಂತೆ ಎಡಿಟ್ ಮಾಡಿದ ವಿಡಿಯೋನ್ನು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ನಾನು ಬಿಜೆಪಿ ಸೇರಿ, ಮೋದಿಯನ್ನು ಬೆಂಬಲಿಸಿ ತಪ್ಪು ಮಾಡ್ಬಿಟ್ಟೆ ಅಂದ್ರಾ ಲಡಾಖ್‌ನ ಸಂಸದ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights