FACT CHECK | ಮತದಾನ ಮಾಡುವ ವೇಳೆ ಮಲ್ಲಿಕಾರ್ಜುನ ಖರ್ಗೆ, ಪತ್ನಿ ಜೊತೆಗೆ ಇದ್ದು ನಿಯಮ ಉಲ್ಲಂಘಿಸಿದ್ದಾರೆ ಎಂಬುದು ಸುಳ್ಳು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ನಿ ಮತದಾನ ಮಾಡುವ ವೇಳೆ ಜೊತೆಗೆ ಇದ್ದು ನಿಯಮ ಉಲ್ಲಂಘಿಸಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

NAMO Bjp Kalaburagi ಎಂಬ ಪೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು“ದೇಶದಲ್ಲಿ ಮೋದಿ ಅಲೆ ಯಾವ ಲೆವೆಲ್ಲಿಗಿದೆ ಅಂದ್ರೆ  ವಿರೋಧ ಪಕ್ಷದ ನಾಯಕ ಕೂಡಾ ತನ್ನ ಪತ್ನಿಯೇ ಎಲ್ಲಿ ಮೋದಿ ಪಕ್ಷಕ್ಕೆ ಓಟು ಹಾಕಿಬಿಡುತ್ತಾಳೋ ಎಂದು ಸಂಶಯಪಟ್ಟು ಕದ್ದು ನೋಡುವಷ್ಟು!” ಎಂಬ ಬರಹದೊಂದಿಗೆ“ಒಬ್ಬರು ಮತದಾನ ಮಾಡುವಾಗ ಇನ್ನೊಬ್ಬರಿಗೆ ಅಲ್ಲಿ ಇರಲು ಅವಕಾಶ ಇಲ್ಲ. ಇಂತಹ ಕನಿಷ್ಠ ಜ್ಞಾನ ಇಲ್ಲದವನನ್ನು ಪ್ರಧಾನಿ ಅಭ್ಯರ್ಥಿ ಎನ್ನುತ್ತಾರೆ ಕಾಂಗಿಗಳು. ಈ ವಯ್ಯ ನೇ ಮತದಾನದ ಗೌಪ್ಯತೆ ಕಾಪಾಡದಿದ್ದರೆ ಇನ್ನೂ ಯಾರು ಕಾಪಾಡಬೇಕು ?” ಎಂಬ ವಾಟ್ಸಾಪ್ ಸಂದೇಶಗಳನ್ನು ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಏನ್‌ಸುದ್ದಿ.ಕಾಂ ಮುಂದಾದಾಗ, ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ ನಡೆಯಲಿದ್ದು 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ.

ಇನ್ನು ರಾಜ್ಯದಲ್ಲಿ ಎರಡನೆ ಹಂತದ ಲೋಕಸಭೆ ಚುನಾವಣೆಗೆ  ಮೇ 7 ರಂದು  14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.  ಇದರಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳು ಸೇರಿವೆ.

ಅಂದರೆ ಕಲಬುರಗಿಯಲ್ಲಿ 2024ರ ಲೋಕಸಭಾ ಚುನಾವಣೆಗೆ ಇನ್ನು ಮತದಾನ ನಡೆದಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಮಲ್ಲಿಕಾರ್ಜನ ಖರ್ಗೆ ಮತಗಟ್ಟೆಯಲ್ಲಿ ತಮ್ಮ ಪತ್ನಿಯೊಂದಿಗೆ ನಿಂತಿರುವ ಚಿತ್ರ 2024ರ ಲೊಕಸಭಾ ಚುನಾವಣೆಗೆ ಸಂಬಂಧಿಸಿದಲ್ಲ ಎಂಬುದು ಖಚಿತವಾಗಿದೆ. ಹಾಗಿದ್ದರೆ ಈಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕಳ್ಳಲಾದ ಚಿತ್ರ ಯಾವಾಗಿನದ್ದು?

ವೈರಲ್ ಚಿತ್ರ 2019ರ ಚುನಾವಣೆಯದ್ದು :

ವೈರಲ್ ಚಿತ್ರವನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 24 ಏಪ್ರಿಲ್‌, 2019 ರ ಡೆಕ್ಕನ್‌ ಹೆರಾಲ್ಡ್ ವರದಿ ಲಭ್ಯವಾಗಿದೆ. ವರದಿಯ ಪ್ರಕಾರ, ಕಾಂಗ್ರೆಸ್ ಮುಖಂಡ ಹಾಗೂ ಕಲಬುರಗಿ ಕಾಂಗ್ರೆಸ್ ಅಭ್ಯರ್ಥಿ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಪತ್ನಿ ರಾಧಾಬಾಯಿ ಅವರೊಂದಿಗೆ ಮತಗಟ್ಟೆಗೆ ಆಗಮಿಸಿ ಒಟ್ಟಿಗೆ ಮತ ಚಲಾಯಿಸಿದ್ದಕ್ಕಾಗಿ ರಾಜ್ಯ ಬಿಜೆಪಿ ಘಟಕ ಮಂಗಳವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ ಎಂದಿದೆ.

Fact Check: ಪತ್ನಿ ಮತದಾನ ಮಾಡುವ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜೊತೆಗೇ ಇದ್ದು ನಿಯಮ ಉಲ್ಲಂಘಿಸಿದ್ದಾರೆಯೇ?

23 ಏಪ್ರಿಲ್‌ , 2019 ರ ವಾರ್ತಾ ಭಾರತಿ ಪ್ರಕಟಿಸಿದ ವರದಿಯ ಪ್ರಕಾರ, ಕಲಬುರಗಿ ಮೈತ್ರಿ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ತಮ್ಮ ಪತ್ನಿಯೊಂದಿಗೆ ಮತದಾನ ಮಾಡುವ ಮೂಲಕ ‘ಪ್ರಜಾ ಪ್ರತಿನಿಧಿ ಕಾಯ್ದೆ’ ಉಲ್ಲಂಘಿಸಿದ್ದು, ಅವರ ವಿರುದ್ಧ ಚುನಾವಣಾ ಆಯೋಗ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮನವಿ ಮಾಡಿದೆ. ಮಂಗಳವಾರ ಮಲ್ಲಿಕಾರ್ಜುನ ಖರ್ಗೆ ಕಲಬುರಗಿಯ ಬೂತ್ ಸಂಖ್ಯೆ 119ರಲ್ಲಿ ಪತ್ನಿಯೊಂದಿಗೆ ಮತಗಟ್ಟೆಗೆ ತೆಳಿದ್ದು ದಂಪತಿ ಒಟ್ಟಿಗೆ ಮತದಾನ ಮಾಡಿದ್ದು, ಇದು ಗುಪ್ತ ಮತದಾನ ಮಾಡಬೇಕೆಂಬ ಪ್ರಜಾ ಪ್ರತಿನಿಧಿ ಕಾಯ್ದೆ ಉಲ್ಲಂಘನೆಯಾಗಿದೆ. ಅಲ್ಲದೆ ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದ್ದ ಚುನಾವಣಾಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ ಎಂದಿದೆ.

ಈ ವರದಿಗಳ ಪ್ರಕಾರ, ಪತ್ನಿಯೊಂದಿಗೆ ಖರ್ಗೆ ಮತದಾನ ಮಾಡಿ, ಗೌಪ್ಯತಾ ನಿಯಮ ಉಲ್ಲಂಘಿಸಿದ್ದಾರೆ ಎಂದ ಆರೋಪ 2019ರದ್ದಾಗಿದೆ. ಇದರೊಂದಿಗೆ ಪ್ರಕರಣ ಆ ಬಳಿಕ ಏನಾಯಿತು ಎಂಬ ಬಗ್ಗೆಯೂ ನ್ಯೂಸ್‌ ಚೆಕ್ಕರ್ ವರದಿ ಪ್ರಕಟಿಸಿದೆ.

ಏಪ್ರಿಲ್‌ 26, 2019ರ ಕನ್ನಡ ಪ್ರಭ ವರದಿಯಲ್ಲಿ, ಹಿರಿಯ ಕಾಂಗ್ರೆಸ್ ನಾಯಕ, ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಮಲ್ಲಿಕಾರ್ಜುನ ಖರ್ಗೆ ಅವರು ಏಪ್ರಿಲ್ 23ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಿಂದ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ. ಏಪ್ರಿಲ್ -23ರಂದು ಮತದಾನದ ವೇಳೆ ಕಾಂಗ್ರೆಸ್ ನಾಯಕ ಖರ್ಗೆ ಅವರು, ಯಾವುದೇ ನೀತಿ ಸಂಹಿತೆಯನ್ನು ಉಲ್ಲಂಘಿಸಿಲ್ಲ. ಮತಗಟ್ಟಗೆ ಅವರೊಬ್ಬರೇ ಪ್ರವೇಶಿಸಿ ಮತಚಲಾಯಿಸಿದ್ದಾರೆ ಎಂದು ಮತಗಟ್ಟೆ ಅಧಿಕಾರಿಗಳು ಹೇಳಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದಿದೆ.

Fact Check: ಪತ್ನಿ ಮತದಾನ ಮಾಡುವ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜೊತೆಗೇ ಇದ್ದು ನಿಯಮ ಉಲ್ಲಂಘಿಸಿದ್ದಾರೆಯೇ?

ಒಟ್ಟಾರೆಯಾಗಿ ಹೇಳುವುದಾದರೆ, 2019ರಲ್ಲಿ ನಡೆದ ಲೋಕಸಭಾ ಚುನಾವಣೆಯ ವೇಳೆ ತಮ್ಮ ಪತ್ನಿ ಮತದಾನ ಮಾಡುವಾಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜೊತೆಗೇ ಇದ್ದು ನಿಯಮ ಉಲ್ಲಂಘಿಸಿದ್ದಾರೆ ಎನ್ನುವ ಆರೋಪ 5 ವರ್ಷದ ಹಿಂದಿನದು. ಆದರೂ ಈ ಆರೋಪ ಸುಳ್ಳು ಎಂದು ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿತ್ತು. ಈ ಘಟನೆಯನ್ನು ಪ್ರಸ್ತುತ 2024ರ ಲೋಕಸಭಾ ಚುನಾವಣೆಯದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಸುಳ್ಳು : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ನಿ ಮತದಾನ ಮಾಡುವ ವೇಳೆ ಜೊತೆಗೆ ಇದ್ದು ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ.

ಸತ್ಯ : 2019ರಲ್ಲಿ ನಡೆದ ಲೋಕಸಭಾ ಚುನಾವಣೆಯ ವೇಳೆ ತಮ್ಮ ಪತ್ನಿ ಮತದಾನ ಮಾಡುವಾಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜೊತೆಗೇ ಇದ್ದು ನಿಯಮ ಉಲ್ಲಂಘಿಸಿದ್ದಾರೆ ಎನ್ನುವ ಆರೋಪ 5 ವರ್ಷದ ಹಿಂದಿನದು. ಆದರೂ ಈ ಆರೋಪ ಸುಳ್ಳು ಎಂದು ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿತ್ತು.

ಫೋಸ್ಟ್‌: ನಮೋ ಬಿಜೆಪಿ ಕಲಬುರಗಿ ( ಫೇಸ್‌ಬುಕ್ ಪೋಸ್ಟ್‌ ಮತ್ತು ವಾಟ್ಸಾಪ್ ಸಂದೇಶ)
ಆಧಾರ : ಕನ್ನಡ ಪ್ರಭ

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಆರೋಗ್ಯ ಇಲಾಖೆಗೂ ಶ್ರೀ ಸಿದ್ದರಾಮಯ್ಯ ಕಾನೂನು ಕಾಲೇಜು ಹೊರಡಿಸಿರುವ ಸುತ್ತೋಲೆಗೂ ಸಂಬಂಧವಿಲ್ಲ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights