FACT CHECK | ಆರೋಗ್ಯ ಇಲಾಖೆಗೂ ಶ್ರೀ ಸಿದ್ದರಾಮಯ್ಯ ಕಾನೂನು ಕಾಲೇಜು ಹೊರಡಿಸಿರುವ ಸುತ್ತೋಲೆಗೂ ಸಂಬಂಧವಿಲ್ಲ

ಆರೋಗ್ಯ ಇಲಾಖೆಯ ಹೇಳಿದೆ ಎನ್ನಲಾದ, ಶ್ರೀ ಸಿದ್ದರಾಮಯ್ಯ ಕಾನೂನು ಕಾಲೇಜು ಹೊರಡಿಸಿರುವ ಸುತ್ತೋಲೆಯೊಂದು ಹಲವು ವಾಟ್ಸಾಪ್‌ ಗುಂಪುಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಪತ್ರದಲ್ಲಿ ಉಲ್ಲಖಿಸಿರುವಂತೆ ತಾಪಮಾನ ಹೆಚ್ಚಾಗಿರುವ ಕಾರಣ ಕೆಲವು ಅಭ್ಯಾಸಗಳನ್ನು ರೂಢಿಸಿಕೊಳ್ಳಲು ಸಲಹೆಗಳ್ನು ನೀಡಿದೆ ಎನ್ನಲಾದ ಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಹಾಗಿದ್ದರೆ ಆ ಪ್ರತದಲ್ಲಿ ಏನಿದೆ ಎಂದು ನೋಡೋಣ.

“ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ ಎಲ್ಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್ ನೀರು ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು” ಎಂದು ಶ್ರೀ ಸಿದ್ದರಾಮಯ್ಯ ಕಾನೂನು ಕಾಲೇಜು ಸುತ್ತೋಲೆಯನ್ನು ಹೊರಡಿಸಿದೆ ಈ ಸುತ್ತೂಲೆಯಲ್ಲಿ ದೀರ್ಘವಾಗಿ ಹಲವು ಅಂಶಗಳನ್ನು ಉಲ್ಲೇಖಿಸಲಾಗಿದೆ. ಹೀಗಾಗಿ ಇದನ್ನು ಬಹುತೇಕರು ಇದನ್ನು ನಿಜವೆಂದು ಶೇರ್ ಮಾಡುತ್ತಿದ್ದಾರೆ.

ವೈರಲ್‌ ಆಗುತ್ತಿರುವ ಸುತ್ತೋಲೆ
          ವೈರಲ್‌ ಆಗುತ್ತಿರುವ ಸುತ್ತೋಲೆ

ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದು ವರದಿ ಆಗುತ್ತಿದೆ. ಆದ ಕಾರಣ ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿ ಪ್ರಕಾರ ವಿದ್ಯಾರ್ಥಿಗಳು, ಪೋಷಕರು ಪ್ರಿಡ್ಜ್‌ನಲ್ಲಿ ಇಟ್ಟಿರುವ ನೀರು, ತಂಪು ಪಾನೀಯಗಳು ಕುಡಿಯಬಾರದು. ಐಸ್ ಕ್ರೀಮ್ ಸೇವಿಸಬಾರದು” ಎಂದು ಚಿಕ್ಕಬಳ್ಳಾಪುರ ನಗರದ ಸಿದ್ದರಾಮಯ್ಯ ಕಾನೂನು ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆ ಹೊರಡಿಸಿದ್ದರು. ಇದು ಚರ್ಚೆಗೆ ಕಾರಣವಾಗಿತ್ತು.

ಆದರೆ ಈ ಸುತ್ತೋಲೆಯಲ್ಲಿ ಆರೋಗ್ಯ ಇಲಾಖೆ ತಿಳಿಸಿರುವ ಮಾಹಿತಿ ಎಂದು ಉಲ್ಲೇಖವಾಗಿದೆ. “ಮೇಲೆ ತಿಳಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ತಮ್ಮ ಪೋಷಕರಿಗೆ ಮತ್ತು ಇತರರಿಗೂ ತಿಳಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಲಾಗಿತ್ತು. ಇನ್ನೂ ಎರಡು ತಿಂಗಳು ಬೇಸಿಗೆ ಹೆಚ್ಚಾಗುತ್ತದೆ. ಆ ಕಾರಣದಿಂದ ಎಲ್ಲರೂ ತಲೆಗೆ ಟೋಪಿ ಅಥವಾ ಬಟ್ಟೆ ಧರಿಸಬೇಕು. ಛತ್ರಿ ಹಿಡಿದು ಓಡಾಡಬೇಕು. ಈ ವಿಷಯವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಪಾಲಿಸುತ್ತ ತಮ್ಮ ಪೋಷಕರು ಮತ್ತು ಇತರರಿಗೆ ತಿಳಿಸಬೇಕು” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶ್ರೀ ಸಿದ್ದರಾಮಯ್ಯ ಕಾನೂನು ಕಾಲೇಜು ಸುತ್ತೋಲೆಯ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಏನ್‌ಸುದ್ದಿ.ಕಾಂಗೆ ಸಂದೇಶ ಕಳುಹಿಸುವ ಮೂಲಕ ವಿನಂತಿಸಿದ್ದರಾರೆ. ಹಾಗಿದ್ದರೆ ಆರೋಗ್ಯ ಇಲಾಖೆ ನಿಜಕ್ಕೂ ಈ ಮಾಹಿತಿಯನ್ನು ನೀಡಿದೆಯೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌ :

ಶ್ರೀ ಸಿದ್ದರಾಮಯ್ಯ ಕಾನೂನು ಕಾಲೇಜು ಸುತ್ತೋಲೆಯ ಕುರಿತು ಸೂಕ್ಷ್ಮವಾಗಿ ಗಮನಿಸಿ ಸುತ್ತೋಲೆಯಲ್ಲಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದಾಗ ಈ ನಂಬರ್ ಕಾಲೇಜಿನದ್ದಲ್ಲ ಎಂಬ ಮಾಹಿತಿ ಲಭ್ಯವಾಯಿತು

ನಂತರ ಕಾಲೇಜಿನ ಅಧಿಕೃತ ಸಂಖ್ಯೆಯನ್ನು ಪಡೆದುಕೊಂಡ ನಮ್ಮ ತಂಡ ಈ ಸುತ್ತೋಲೆ ಕುರಿತು ಸ್ಪಷ್ಟನೆಯನ್ನು ಕೇಳಿತು. ಆಗ ಕಾಲೇಜಿನ ಆಡಳಿತ ಮಂಡಳಿಯ ಅಧಿಕಾರಿಯಾದ ಶಿವಜ್ಯೋತಿ ಎಂಬುವವರು ಈ ಸುತ್ತೋಲೆಯನ್ನು ಹೊರಡಿಸಿದ್ದು ನಿಜ. ಆದರೆ ಆರೋಗ್ಯ ಇಲಾಖೆಯ ಯಾವುದೇ ಮಾರ್ಗಸೂಚಿ ಇರಲಿಲ್ಲ. ಬದಲಾಗಿ ನಮ್ಮ ವಿದ್ಯಾರ್ಥಿಗಳ ಮತ್ತು ಪೋಷಕರ ಕಾಳಜಿಯ ದೃಷ್ಟಿಯಿಂದಾಗಿ ಈ ಸುತ್ತೋಲೆಯನ್ನು ಹೊರಡಿಸಲಾಗಿದೆ ಎಂದು ತಿಳಿಸಿದರು. ಮತ್ತು ಸುತ್ತೋಲೆಯಲ್ಲಿರುವ ಮೊಬೈಲ್‌ ನಂಬರ್‌ ನಮ್ಮ ಕಾಲೇಜಿನ ಹಿಂದು ಉದ್ಯೋಗಿಯೊಬ್ಬರದ್ದು ಎಂದು ಮಾಹಿತಿ ನೀಡಿದ್ದಾರೆ. ಈ ವಿಚಾರ ಆರೋಗ್ಯ ಇಲಾಖೆಯ ಗಮನಕ್ಕೆ ಬಂದು ಕಾಲೇಜಿಗೆ ನೋಟಿಸ್‌ ಕೂಡ ನೀಡಿದೆ. ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಸ್ಪಷ್ಟನೆ ನೀಡಿದೆ.

ಆರೋಗ್ಯ ಇಲಾಖೆಯ ನೋಟಿಸ್‌
ಆರೋಗ್ಯ ಇಲಾಖೆಯ ನೋಟಿಸ್‌

ಇನ್ನು ಹೆಚ್ಚಿನ ಮಾಹಿತಿಗಾಗಿ ಆರೋಗ್ಯ ಇಲಾಖೆಯ ಎಕ್ಸ್ ಖಾತೆಯನ್ನು ಪರಿಶೀಲಿಸಿದಾಗ ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟನೆಯನ್ನು ನೀಡಿದ್ದು ಈ ರೀತಿಯ ಯಾವುದೇ ಸುತ್ತೋಲೆಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ.

ಇನ್ನು ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ವ್ಯಾಪಕ ಟೀಕೆ ವ್ಯಕ್ತವಾದ ನಂತರ ಎಚ್ಚೆತ್ತುಕೊಂಡು ಶ್ರೀ ಸಿದ್ದರಾಮಯ್ಯ ಕಾನೂನು ಕಾಲೇಜು ಆಡಳಿತ ಮಂಡಳಿತ ತನ್ನ ಸುತ್ತೋಲೆಯಲ್ಲಿದ್ದ “ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ” ಎಂಬ ಸಾಲನ್ನು ತೆಗೆದು “ಟಿವಿ ಮಾಧ್ಯಮ/ಜಾಹಿರಾತು ನೀಡುತ್ತಿರುವ ಮಾಹಿತಿಯ ಪ್ರಕಾರ” ಬದಲಾಯಿಸಿದೆ.

ವ್ಯಾಪಕ ಟೀಕೆಯ ನಂತರ ಹೊಸ ಸುತ್ತೋಲೆ ಹೊರಡಿಸಿದ ಕಾಲೇಜು ಆಡಳಿತ ಮಂಡಳಿ
ವ್ಯಾಪಕ ಟೀಕೆಯ ನಂತರ ಹೊಸ ಸುತ್ತೋಲೆ ಹೊರಡಿಸಿದ ಕಾಲೇಜು ಆಡಳಿತ ಮಂಡಳಿ

 

ಒಟ್ಟಾರೆಯಾಗಿ ಹೇಳುವುದಾದರೆ,  ವೈರಲ್ ಆಗುತ್ತಿರುವ ಶ್ರೀ ಸಿದ್ದರಾಮಯ್ಯ ಕಾನೂನು ಕಾಲೇಜಿನ ಸುತ್ತೋಲೆಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೂ ಯಾವುದೇ ಸಂಬಂಧ ಇಲ್ಲ.  ಟಿವಿ ಜಾಹಿರಾತುಗಳಲ್ಲಿ ಬಂದ ಮಾಹಿತಿಯನ್ನು ಆಧರಿಸಿ ಈ ಸೂಚನೆಯನ್ನು ಕಾಲೇಜು ಆಡಳಿತ ಮಂಡಳಿ ನೀಡಿದೆ ಎಂಬುದು ವಾಸ್ತವ. ಪತ್ರದಲ್ಲಿ ಉಲ್ಲೇಖಿಸಿರುವ ಆರೋಗ್ಯ ಕುರಿತಾದ ಮಾಹಿತಿ ನಿಜವೇ ಎಂಬುದನ್ನು ತಜ್ಞರಿಂದ ಪಡೆದು ಅಪ್‌ಡೆಟ್‌ ಮಾಡಲಾಗುವುದು.

ಸುಳ್ಳು : ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ ಎಲ್ಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್ ನೀರು ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು” ಎಂದು ಶ್ರೀ ಸಿದ್ದರಾಮಯ್ಯ ಕಾನೂನು ಕಾಲೇಜು ಸುತ್ತೋಲೆಯನ್ನು ಹೊರಡಿಸಿದೆ

ನಿಜಾಂಶ : ವೈರಲ್ ಆಗುತ್ತಿರುವ ಶ್ರೀ ಸಿದ್ದರಾಮಯ್ಯ ಕಾನೂನು ಕಾಲೇಜಿನ ಸುತ್ತೋಲೆಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೂ ಯಾವುದೇ ಸಂಬಂಧ ಇಲ್ಲ.  ಟಿವಿ ಜಾಹಿರಾತುಗಳಲ್ಲಿ ಬಂದ ಮಾಹಿತಿಯನ್ನು ಆಧರಿಸಿ ಈ ಸೂಚನೆಯನ್ನು ಕಾಲೇಜು ಆಡಳಿತ ಮಂಡಳಿ ನೀಡಿದೆ ಎಂಬುದು ವಾಸ್ತವ.

ಆಧಾರ :  Health dept Tweet

                https://twitter.com/DHFWKA/status/178627279372777516

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬಿಜೆಪಿಗೆ ಮತ ಹಾಕಿ ಎಂದು ಹೇಳಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights