FACT CHECK | ಬಾಬಾ ರಾಮ್‌ದೇವ್ 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನು ಹೊಗಳಿದ್ದು ನಿಜವೇ?

ಇತ್ತೀಚೆಗೆ, ಪತಂಜಲಿ ಸಂಸ್ಥಾಪಕ ಬಾಬಾ ರಾಮ್‌ದೇವ್ ಮತ್ತು ಅವರ ಸಹವರ್ತಿ ಆಚಾರ್ಯ ಬಾಲಕೃಷ್ಣ ಅವರಿಗೆ ತಪ್ಪುದಾರಿಗೆಳೆಯುವ ಜಾಹೀರಾತುಗಳ ಸಂಬಂಧ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿತ್ತು. ಪರಿಣಾಮ ಪ್ರಮುಖ ಪತ್ರಿಕೆಗಳಲ್ಲಿ ಕ್ಷಮೆ ಕೇಳುವ ಜಾಹೀರಾತುಗಳನ್ನು ಪ್ರಕಟಿಸಬೇಕಾಗಿ ಬಂದಿತ್ತು. ಇದಾದ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ರಾಮ್‌ದೇವ್ ಮುಕ್ತಕಂಠದಿಂದ ಹೊಗಳುತ್ತಿದ್ದುದನ್ನು ಉಲ್ಲೇಖಿಸಿ ಎಕ್ಸ್ ಖಾತೆ ಬಳಕೆದಾರರೊಬ್ಬರು ವಿಡಿಯೋ ಹಂಚಿಕೊಂಡಿದ್ದು, “ಪರಿಸ್ಥಿತಿಯನ್ನು ಗ್ರಹಿಸಿರುವ ಬಾಬಾ ತಮ್ಮ ಪಾಳಯವನ್ನು ಬದಲಿಸಲು ಪ್ರಾರಂಭಿಸಿದ್ದಾರೆ,” ಎಂದು ಬರೆದುಕೊಂಡಿದ್ದಾರೆ.

“ರಾಹುಲ್ ಗಾಂಧಿಗೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಕಡಿಮೆ ಜಾಗ ಸಿಗುತ್ತಿತ್ತು, ಆದರೆ ಈಗ ಅವರ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ,” ಎಂದು ರಾಮ್‌ದೇವ್ ಈ ವಿಡಿಯೋದಲ್ಲಿ ಹೇಳಿದ್ದಾರೆ. ರಾಹುಲ್ ಅವರ ಫಿಟ್‌ನೆಸ್ ಮತ್ತು ನೆಹರೂ ಅವರ ಕಾಲದಿಂದಲೂ ಗಾಂಧಿ ಕುಟುಂಬ ಯೋಗದೊಂದಿಗೆ ಒಡನಾಟ ಹೊಂದಿರುವುದನ್ನೂ ಅವರು ಶ್ಲಾಘಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಜನಾಭಿಪ್ರಾಯ ವಿರೋಧ ಪಕ್ಷದ ಪರವಾಗಿ ಬದಲಾಗುತ್ತಿದ್ದು, ಈ ಕಾರಣಕ್ಕೆ ಬಾಬಾ ರಾಮ್‌ದೇವ್ ರಾಹುಲ್ ಗಾಂಧಿಯನ್ನು ಹೊಗಳಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

“ರಾಹುಲ್ ಗಾಂಧಿಯವರ ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುತ್ತಿದೆ  ಎಂದು ಬಾಬಾ ರಾಮದೇವ್ ಗಾಂಧಿ ಕುಟುಂಬವನ್ನು ಹೊಗಳಿದ್ದಾರೆ. ಬಾಬಾ ರಾಮದೇವ್‌ರಲ್ಲಿ ಈ ಬದಲಾವಣೆ ಹೇಗಾಯಿತು ? ನಿಜವಾಗಿಯೂ ಈ ವಿಡಿಯೋ 2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದೆಯೇ ಎಂದು ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆ ನಿಜವೇ ಎಂಧು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 16 ಸೆಪ್ಟೆಂಬರ್ , 2022 ರಂದು ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಅವರು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ವಿಡಿಯೋ ಲಭ್ಯವಾಗಿದೆ. ಬಾಬಾ ರಾಮ್‌ದೇವ್ ಅವರನ್ನು ಕುಟುಕಿರುವ ಶ್ರೀನಿವಾಸ್, ‘ಅವರ ಪಾಪಗಳು ಇನ್ನೂ ಹೋಗಿಲ್ಲ’ ಎಂದು ಬರೆದುಕೊಂಡಿದ್ದಾರೆ.

ಸೆಪ್ಟೆಂಬರ್ 17, 2022ರಂದು ಲೈವ್‌ ಹಿಂದೂಸ್ಥಾನ್‌ನ ಯೂಟ್ಯೂಬ್‌ ಚಾನೆಲ್‌ ಮತ್ತು ಅದರ ವೆಬ್‌ಸೈಟ್‌ ಪ್ರಕಟಿಸಿದ ವಿಡಿಯೋ ಲಭ್ಯವಾಗಿದ್ದು, ಬಾಬಾ ರಾಮ್‌ದೇವ್ ಅವರು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು ಶ್ಲಾಘಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

17, ಸೆಪ್ಟೆಂಬರ್  2022ರಂದು ಅಮರ್‌ ಉಜಾಲಾ   ಪ್ರಕಟಿಸಿದ ವಿಡಿಯೋ ಲಭ್ಯವಾಗಿದ್ದು, ಕನ್ಯಾಕುಮಾರಿಯಿಂದ ಪ್ರಾರಂಭವಾದ ಭಾರತ್ ಜೋಡೋ ಯಾತ್ರೆಯನ್ನು ಉಲ್ಲೇಖಿಸಿ ಬಾಬಾ ರಾಮ್‌ದೇವ್ ಅವರು ರಾಹುಲ್ ಗಾಂಧಿಯನ್ನು ಹೊಗಳಿದ್ದಾರೆ ಎಂದು ಉಲ್ಲೇಖಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2022ರ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು ಬಾಬಾ ರಾಮ್‌ದೇವ್ ಹೊಗಳಿರುವ ಹಳೆಯ ವಿಡಿಯೋವನ್ನು 2024 ರ ಲೋಕಸಭಾ ಚುನಾವಣೆಯದ್ದು ಎಂಬಂತೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಫೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ರಾಹುಲ್ ಗಾಂಧಿಯನ್ನು ಭಾರತದ ರಾಜಕೀಯ ಹೀರೋ ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights