FACT CHECK | ಮತ್ತೊಮ್ಮೆ ಮೋದಿಯೇ ಪ್ರಧಾನಿಯಾಗುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿಲ್ಲ

2024 ರ ಲೋಕಸಭಾ ಚುನಾವಣೆಯ ನಂತರ ನರೇಂದ್ರ ಮೋದಿ ಅವರು ಮತ್ತೆ ಭಾರತದ ಪ್ರಧಾನಿಯಾಗಿ ಬರುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ.

ನಾನೇ ನಿಮ್ಮ ಮುಂದೆ ಮೊದಲು ಸತ್ಯವನ್ನು ಹೇಳುತ್ತಿದ್ದೇನೆ. 4 ಜೂನ್ 2024 ರಂದು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ. ನಾವು ಮತ್ತೆ ಮೋದಿ ಅವರು ಪ್ರಧಾನಿಯಾಗಲು ಕಾರ್ಯನಿರ್ವಹಿಸಬೇಕಾಗಿದೆ. ನೀವೇ ನೋಡಬಹುದು ನಮ್ಮ ಇಂಡಿಯಾ ಮೈತ್ರಿಕೂಟ ಈ ಬಾರಿ ಉತ್ತರಪ್ರದೇಶದಲ್ಲಿ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗುವುದಿಲ್ಲ.” ಎಂದು ರಾಹುಲ್ ಗಾಂಧಿಯವರೇ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.

ಹಾಗಿದ್ದರೆ ಈ ವಿಡಿಯೋದಲ್ಲಿ ಇರುವಂತೆ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆಯೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವ ರಾಹುಲ್ ಗಾಂಧಿ ಹೇಳಿದ್ದಾರೆ ಎನ್ನಲಾದ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಗೂಗಲ್ ರಿಸರ್ಚ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 10 ಮೇ 2024ರಂದು ಕಾಂಗ್ರೆಸ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಸಮಾವೇಶದ ನೇರ ಪ್ರಸಾರವನ್ನು ಅಪ್‌ಲೋಡ್‌ ಮಾಡಲಾದ ವಿಡಿಯೋ ಲಭ್ಯವಾಗಿದೆ.

ಉತ್ತರ ಪ್ರದೇಶದ ಕಾನ್ಪುರ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಸಮಾವೇಶದ ಸಭೆಯನ್ನು ಉದ್ದೇಶಿಸಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರು ರಾಹುಲ್ ಗಾಂಧಿಯವರಿಗಿಂತ ಮೊದಲು ಮಾತನಾಡಿದ್ದಾರೆ.

ಸುಮಾರು 43:55 ನಿಮಿಷಗಳ ಟೈಮ್‌ಸ್ಟ್ಯಾಂಪ್‌ನಲ್ಲಿ, ರಾಹುಲ್ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲು ಪ್ರಾರಂಭಿಸುತ್ತಾರೆ. ವೈರಲ್ ಆದ ವೀಡಿಯೋ ಕ್ಲಿಪ್ ಮೂಲ ಆವೃತ್ತಿಯ ಸುಮಾರು 46:00 ನಿಮಿಷಗಳ ಟೈಮ್‌ಸ್ಟ್ಯಾಂಪ್‌ನಲ್ಲಿ ಕಾಣಿಸಿಕೊಳ್ಳುತ್ತದೆ.

ಈ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನಾನು ನಿಮಗೆ ಮೊದಲೇ ಹೇಳುತ್ತಿದ್ದೇನೆ, ಜೂನ್ 4, 2024 ರಂದು ನರೇಂದ್ರ ಮೋದಿ ಭಾರತದ ಪ್ರಧಾನಿಯಾಗಿ ಉಳಿಯುವುದಿಲ್ಲ, ನರೇಂದ್ರ ಮೋದಿ ಪ್ರಧಾನಿಯಾಗಲು ಸಾಧ್ಯವಿಲ್ಲ, ಬರೆದಿಟ್ಟುಕೊಳ್ಳಿ, ನಮ್ಮ ಮೈತ್ರಿಗೆ ಉತ್ತರ ಪ್ರದೇಶದಲ್ಲಿ 50 ಸೀಟುಗಳಿಗಿಂತ ಕಡಿಮೆ ಬರುವುದಿಲ್ಲ ಎಂಬುದನ್ನು ನೀವು ಆಗ ನೋಡುತ್ತೀರಿ” ಎನ್ನುತ್ತಿರುವುದನ್ನು ಕೇಳಬಹುದು.

ಇನ್ನು ಸಾಮಾಜಿಕ ಜಾಲತಾಣದಲ್ಲಿ ಮೂಲ ವಿಡಿಯೋವನ್ನು ಎಡಿಟ್ ಮಾಡಿ ಸುಳ್ಳು ಹರಡುತ್ತಿರುವುದನ್ನ ಗಮನಿಸಿರುವ ಕಾಂಗ್ರೆಸ್ ಪಕ್ಷ, ಸುಳ್ಳಿನ ವಿಡಿಯೋ ಯಾವುದು ಮತ್ತು ಸತ್ಯದ ವಿಡಿಯೋ ಯಾವುದು ಎಂಬುದನ್ನ ಜನರ ಮುಂದೆ ತಮ್ಮ ಅಧಿಕೃತ ಏಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ. ಇದೇ ವಿಡಿಯೋಗೆ ರಿಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಸುಳ್ಳು ಸುದ್ದಿಯನ್ನು ಹರಡಿದ ಬಿಜೆಪಿಯ ಪಕ್ಷದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಮತ್ತು ತಮ್ಮ ಟ್ವೀಟ್ ನಲ್ಲಿ “ಮತ್ತೊಮ್ಮೆ ನಾನು ಹೇಳುತ್ತಿದ್ದೇನೆ ಜೂನ್ 4ರ ನಂತರ ಪ್ರಧಾನಿಯಾಗಿ ಮೋದಿ ಅವರು ಮುಂದುವರೆಯುವುದಿಲ್ಲ. ಆಗ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರವನ್ನು ಸ್ಥಾಪಿಸಲಿದೆ.” ಎಂದು ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ರಾಹುಲ್ ಗಾಂಧಿ ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟದ ಸಮಾವೇಶದಲ್ಲಿ ಮಾತಾಡಿದ್ದಾರೆ ಎನ್ನಲಾದ ವೈರಲ್ ಹೇಳಿಕೆಯನ್ನು ಎಡಿಟ್‌ ಮಾಡಿ ಹಂಚಿಕೊಳ್ಳಲಾಗಿದೆ. ರಾಹುಲ್ ಗಾಂಧಿಯವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮೋದಿಯವರೇ ಪ್ರಧಾನಿಯಾಗಿ ಉಳಿಯಲ್ಲಿದ್ದಾರೆ. ಮತ್ತು ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟ ಒಂದೇ ಒಂದು ಸ್ಥಾನವನ್ನು ಗೆಲ್ಲುವುದಿಲ್ಲ ಎಂದು ಹೇಳಿಲ್ಲ ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಕರ್ನಾಟಕದಲ್ಲಿ ಮುಸ್ಲಿಮರು ನಡುರಸ್ತೆಯಲ್ಲೆ ಗೋಹತ್ಯೆ ಮಾಡಿದ್ದಾರೆ ಎಂಬುದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights