FACT CHECK | ತೆಲಂಗಾಣದಲ್ಲಿ AIMIM ಪಕ್ಷಕ್ಕೆ ಮತ ನೀಡಿ ಎಂದು ಮೋದಿ ಹೇಳಿಲ್ಲ
ತೆಲಂಗಾಣದ ಹೈದರಾಬಾದ್‌ನಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಪಕ್ಷಕ್ಕೆ ಪ್ರಧಾನಿ ಮೋದಿ ಬೆಂಬಲ ಘೋಷಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ವೀಡಿಯೊವನ್ನು ಪ್ರಸಾರ ಮಾಡಲಾಗುತ್ತಿದೆ.
‘ತೆಲಂಗಾಣ ಹೇಳುತ್ತಿದೆ, ಕಾಂಗ್ರೆಸ್ ಬೇಡ, ಬಿಆರ್‌ಎಸ್ ಬೇಡ, ಬಿಜೆಪಿ ಬೇಡ, ಎಂಐಎಂಗೆ ಮಾತ್ರ ಮತ ನೀಡುತ್ತೇವೆ ಎಂದು’ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹಿಂದಿಯಲ್ಲಿ ಹೇಳಿರುವ ವಿಡಿಯೋ ವೈರಲ್ ಆಗಿದೆ. ಆರ್ಕೈವ್ ಮಾಡಲಾದ ಲಿಂಕ್‌ಅನ್ನು ಇಲ್ಲಿ ನೋಡಬಹುದು
ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರತಿಸ್ಪರ್ಧಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಗೆಲುವು ಸಾಧಿಸಲಿದೆ. ಜನರು ಆ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎನ್ನಲಾದ ವಿಡಿಯೋದ ಸತ್ಯಾಸತ್ಯತೆ ಏನು ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಮೇ 10, 2024ರಂದು ಬಿಜೆಪಿ ತನ್ನ ಅಧಿಕೃತ ಫೇಸ್‌ಬುಕ್ ಫೇಜ್‌ನಲ್ಲಿ ಹಂಚಿಕೊಂಡ ಲೈವ್‌ಸ್ಟ್ರೀಮ್ ವಿಡಿಯೋ ಲಭ್ಯವಾಗಿದೆ.
ಮೇ 10, 2024 ರಂದು ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್, ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಇತರ ವಿರೋಧ ಪಕ್ಷಗಳು ಸುಳ್ಳು ಭರವಸೆಗಳನ್ನು ನೀಡಿ ತೆಲಂಗಾಣ ಜನರನ್ನು ಲೂಟಿ ಮಾಡಿವೆ ಎಂದು ಆರೋಪಿಸಿದ್ದರು.
ಇದರಲ್ಲಿ ವೈರಲ್ ವಿಡಿಯೋದ ಭಾಗವು 3:26ರಿಂದ ಪ್ರಾರಂಭವಾಗುತ್ತದೆ. ಅಲ್ಲಿ, “ತೆಲಂಗಾಣ ಹೇಳುತ್ತಿದೆ, ಕಾಂಗ್ರೆಸ್ ಅಲ್ಲ, ಬಿಆರ್‌ಎಸ್ ಅಲ್ಲ, ಎಂಐಎಂ ಅಲ್ಲ, ನಾವು ಬಿಜೆಪಿಗೆ ಮಾತ್ರ ಮತ ಹಾಕುತ್ತೇವೆ ಮತ್ತು ಬಿಜೆಪಿಯನ್ನು ಗೆಲ್ಲಿಸುತ್ತೇವೆ ಎಂದು,” ಎಂಬುದಾಗಿ ಮೋದಿ ಹೇಳಿದ್ದಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣದ ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಮೂಲ ವಿಡಿಯೋವನ್ನು ಎಡಿಟ್ ಮೂಲಕ ಕಟ್ ಮಾಡಿ ತಮಗೆ ಬೇಕಾದಂತೆ ಮಾರ್ಪಾಡು ಮಾಡಲಾಗಿದೆ. ಆದರೆ ಮೋದಿ ಎಲ್ಲಿಯೂ ತೆಲಂಗಾಣದಲ್ಲಿ AIMIM ಗೆ ಮತ ನೀಡಿ ಓವೈಸಿ ಪಕ್ಷವನ್ನು ಬೆಂಬಲಿಸಿ ಎಂದು ಹೇಳಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | BBC ಸರ್ವೆಯಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ ಬಹುಮತ ! ವಾಸ್ತವವೇನು?

