FACT CHECK | ಎಸ್‌ಪಿ ಮುಖಂಡ ಅನ್ಸಾರಿಯಿಂದ ಅಧಿಕಾರಿಗಳಿಗೆ ಬೆದರಿಕೆ ! ವೈರಲ್ ವಿಡಿಯೋದ ಅಸಲೀಯತ್ತೇನು?

“ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಗೂಂಡಾಗಿರಿಯ ಪ್ರದರ್ಶನ! ಮಾಫಿಯಾ ಮುಖ್ತಾರ್ ಅನ್ಸಾರಿ ಪುತ್ರ, ಅಖಿಲೇಶ್ ಯಾದವ್ ಅವರ ನಿಕಟವರ್ತಿಯಿಂದ ಅಧಿಕಾರಿಗಳಿಗೆ ನೇರ ಬೆದರಿಕೆ!” ಎಂದು ಬರೆದು ಹಂಚಿಕೊಂಡಿದ್ದಾರೆ. ಅಬ್ಬಾಸ್ ಅನ್ಸಾರಿಯನ್ನು ಉಲ್ಲೇಖಿಸಿ ಪೋಸ್ಟ್‌ನಲ್ಲಿ, “ನಾನು ಅಖಿಲೇಶ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಯಾವುದೇ ಅಧಿಕಾರಿಯನ್ನು ವರ್ಗಾವಣೆ ಮಾಡದಂತೆ ನೋಡಿಕೊಂಡಿದ್ದೇನೆ. ಅವರು ಇಲ್ಲೇ ಇರುತ್ತಾರೆ ಮತ್ತು ಎಲ್ಲಿಗೂ ಹೋಗುವುದಿಲ್ಲ. ಮೊದಲು ನಾವು ಅವರ ಲೆಕ್ಕ ಚುಕ್ತಾ ಮಾಡುತ್ತೇವೆ” ಎಂದು ಬರೆದಿದ್ದಾರೆ.

ಮುಂದಿನ ಆರು ತಿಂಗಳವರೆಗೆ ಯಾವುದೇ ವರ್ಗಾವಣೆ ಅಥವಾ ಪೋಸ್ಟಿಂಗ್ ಇರುವುದಿಲ್ಲ ಎಂದು ನಾನು ಅಖಿಲೇಶ್ ಯಾದವ್‌ ಅವರಿಗೆ ಸ್ಪಷ್ಟಪಡಿಸಿದ್ದೇನೆ. ಪ್ರಸ್ತುತ ಯಾರು ಯಾವ ಸ್ಥಾನದಲ್ಲಿ ಇರುವವರು ಅಲ್ಲೇ ಉಳಿಯುತ್ತಾರೆ. ನಾವು ನಮ್ಮ ಸಮಸ್ಯೆಗಳನ್ನು ಇತ್ಯರ್ಥವಾದ ಬಳಿಕವೇ ಯಾವುದೇ ವರ್ಗಾವಣೆ ಪ್ರಮಾಣಪತ್ರಗಳನ್ನು ಅನುಮೋದಿಸಲಾಗುತ್ತದೆ ಎಂದು ಹೇಳಿದ್ದಾರೆ ಎಂಬ 30 ಸೆಕೆಂಡುಗಳ ವಿಡಿಯೋವೊಂದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಸಾರವಾಗುತ್ತಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಕೀ ಫ್ರೇಮ್‌ಗಳನ್ನು ಗೂಗಲ್‌ನಲ್ಲಿ ರಿವರ್ಸ್‌ ಇಮೇಜಸ್‌ನಲ್ಲಿ ಸರ್ಚ್‌ ಮಾಡಿದಾಗ  @ANINewsUPಯ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಮಾರ್ಚ್ 4, 2022 ರಂದು ಪ್ರಕಟವಾದ ವಿಡಿಯೋ ಲಭ್ಯವಾಗಿದೆ. ANI ಟ್ವೀಟ್‌ನಲ್ಲಿ “#WATCH | ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್‌ಗೆ 6 ತಿಂಗಳವರೆಗೆ ಯಾವುದೇ ವರ್ಗಾವಣೆ ಅಥವಾ ಪೋಸ್ಟಿಂಗ್ ಆಗುವುದಿಲ್ಲ ಎಂದು ಹೇಳಿದ್ದೇನೆ. ಏಕೆಂದರೆ ಮೊದಲು ‘ಹಿಸಾಬ್ ಕಿತಾಬ್’ ನಡೆಯುತ್ತದೆ, ಅದಾದ ನಂತರವಷ್ಟೇ ವರ್ಗಾವಣೆ ಪ್ರಮಾಣ ಪತ್ರಗಳಿಗೆ ಮುದ್ರೆ ಒತ್ತಬೇಕು. ಅಬ್ಬಾಸ್ ಅನ್ಸಾರಿ, ಉತ್ತರ ಪ್ರದೇಶದ ಮೌ ಕ್ಷೇತ್ರದ ಎಸ್‌ಪಿ ಮೈತ್ರಿ ಅಭ್ಯರ್ಥಿ (03.03.2022) ಎಂದು ಬರೆಯಲಾಗಿದೆ.

ಮಾರ್ಚ್ 4, 2022 ರ Navbharat Times ವರದಿಯ ಪ್ರಕಾರ, ಅಬ್ಬಾಸ್ ಅನ್ಸಾರಿ ಅವರು 2022 ರಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಕೊನೆಯ ಹಂತದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಎಸ್‌ಪಿಯ ಮಿತ್ರ ಪಕ್ಷವಾದ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷವನ್ನು ಪ್ರತಿನಿಧಿಸುವ ಮೌ ಅಭ್ಯರ್ಥಿ ಅಬ್ಬಾಸ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದ ಪಹರಪುರ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ. ಸರ್ಕಾರ ರಚನೆಯಾದ ನಂತರ ಜನರ ಮೇಲೆ ದೌರ್ಜನ್ಯ ಎಸಗುವ ಅಧಿಕಾರಿಗಳ ವಿರುದ್ಧ ಸೇಡು ತೀರಿಸಿಕೊಳ್ಳಲಾಗುವುದು ಎಂದು ಅವರು ಹೇಳಿಕೆ ನೀಡಿದ್ದರು.

ಇದರ ನಂತರ ಮಾರ್ಚ್ 4, 2022 ರಂದು ಮೌ ಪೊಲೀಸರು ಟ್ವೀಟ್‌ ಮಾಡಿದ್ದು, ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಅಬ್ಬಾಸ್ ಅನ್ಸಾರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171F ಮತ್ತು 506ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿರುವುದನ್ನು ಉಲ್ಲೇಖಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾತ್ತಿರುವ ವಿಡಿಯೋ 2022 ಘಟನೆಯದ್ದಾಗಿದ್ದು,  2024 ರ ಲೋಕಸಭಾ ಚುನಾವಣೆಯ ನಂತರ ಅಬ್ಬಾಸ್ ಅನ್ಸಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಬಿಜೆಪಿ 500 ಮತಗಳಿಗಿಂತಲೂ ಕಡಿಮೆ ಅಂತರದಲ್ಲಿ 30 ಸ್ಥಾನಗಳನ್ನು ಗೆದ್ದಿದೆ ಎಂಬ ವಾದ ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights