FACT CHECK | ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಕಾನ್ಸ್ಟೆಬಲ್‌ಗೆ ಸೋನಿಯಾ ಗಾಂಧಿ ಕುಟುಂಬದೊಂದಿಗೆ ಸಂಬಂಧವಿದೆಯೇ?

13 ಜೂನ್ 2024ರಂದು ಮಂಡಿ ಸಂಸದೆ ಮತ್ತು ನಟಿ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಕಾನ್‌ಸ್ಟೆಬಲ್ ಕುಲ್ವಿಂದರ್‌ ಕೌರ್ ಅವರೊಂದಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಮಹಿಳೆಯೊಂದಿಗೆ ನಿಂತಿರುವ ಫೋಟೊವನ್ನು ಹಂಚಿಕೊಳ್ಳಲಾಗಿದೆ.

ಕೃಷಿ ಕಾಯ್ದೆ ವಿರುದ್ಧ ಹೋರಾಡಿದ ರೈತರು ನಿಜವಾದ ರೈತರಲ್ಲ. ದಿನಕ್ಕೆ 100 ರು. ಹಣ ನೀಡಿ ಅವರನ್ನು ಕರೆತರಲಾಗಿತ್ತು’ ಎಂದು ಈ ಹಿಂದೆ ಕಂಗನಾ ಹೇಳಿದ್ದರು. ಇದರಿಂದ ಕುಪಿತಳಾಗಿದ್ದ ಕೌರ್, ‘ನನ್ನ ಅಮ್ಮನೂ ಪ್ರತಿಭಟನೆಗೆ ಹೋಗಿದ್ದಳು. ಆಕೆ ನಯಾಪೈಸೆ ಪಡೆದಿರಲಿಲ್ಲ’ ಎಂದು ಕಿಡಿಕಾರಿ ಕಂಗನಾ ಕಪಾಳಕ್ಕೆ ಚೆನ್ನಾಗಿ ಬಾರಿಸಿದ್ದರು.

ಈಗ ವೈರಲ್ ಚಿತ್ರದಲ್ಲಿರುವ ಮಹಿಳೆ ನಟಿ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಕುಲ್ವಿಂದರ್ ಕೌರ್, ಕಾಂಗ್ರೆಸ್‌ ಇಂತಹವರಿಗೆ ಚೆನ್ನಾಗಿ ತರಬೇತಿ ನೀಡುತ್ತದೆ. ಕಾಂಗ್ರೆಸ್‌ ಪಕ್ಷದ ಅಸ್ಥಿತ್ವ ಇರುವುದೇ ಇಂತವರಿಂದ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 14 ಫೆಬ್ರವರಿ 2024 ರಂದು Instagram ನಲ್ಲಿ ಮಡೆರ್ನಾ ಅವರು ಪೋಸ್ಟ್ ಮಾಡಿದ ಪೋಟೊ ಲಭ್ಯವಾಗಿದೆ.

ಸೋನಿಯಾ ಗಾಂಧಿಯವರು ರಾಜಸ್ಥಾನದಿಂದ ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಮಡೆರ್ನಾ,ಸೋನಿಯಾ ಗಾಂಧಿ ಮತ್ತು ಕುಟುಂಬದೊಂದಿಗೆ  ಫೋಟೊ ತೆಗೆಸಿಕೊಂಡಿದ್ದಾರೆ.  14 ಫೆಬ್ರವರಿ, 2024 ರಂದು ಅವರ X ಹ್ಯಾಂಡಲ್‌ನಲ್ಲಿ ಇದೇ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಸೋನಿಯಾ ಗಾಂಧಿಯವರಿಗೆ, ರಾಜಸ್ಥಾನದಿಂದ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಂದರ್ಭದಲ್ಲಿ ಅವರನ್ನು ಅಭಿನಂದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಚಿತ್ರದಲ್ಲಿರುವ ಮಹಿಳೆಯ ಕುಲ್ವಿಂದರ್‌ ಕೌರ್ ಅಲ್ಲ:

ದಿವ್ಯಾ ಮಡೆರ್ನಾ ಕಾಂಗ್ರೆಸ್ ಪಕ್ಷದ ಸದಸ್ಯೆ. ಅವರು 2018ರಲ್ಲಿ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಓಸಿಯನ್ ಅಸೆಂಬ್ಲಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ 2023 ರ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಅವರು ಪ್ರಭಾವಿ ಜಾಟ್ ನಾಯಕ ಪರಶ್ರಾಮ್ ಮಡೆರ್ನಾ ಅವರ ಮೊಮ್ಮಗಳು ಮತ್ತು ರಾಜಸ್ಥಾನ ಸರ್ಕಾರದ ಮಾಜಿ ಸಚಿವ ಮಹಿಪಾಲ್ ಮಡೆರ್ನಾ ಅವರ ಪುತ್ರಿ ಎಂದು ತಿಳಿದುಬಂದಿದೆ.

यह तस्वीर कंगना रनौत को कतिथ तौर पर थप्पड़ मरने वाली CISF सुरक्षाकर्मी कुलविंदर कौर की बताकर वायरल है.

ಒಟ್ಟಾರೆಯಾಗಿ ಹೇಳುವುದಾದರೆ, ಮಂಡಿ ಸಂಸದೆ ಮತ್ತು ನಟಿ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಕಾನ್‌ಸ್ಟೆಬಲ್ ಕುಲ್ವಿಂದರ್‌ ಕೌರ್ ಅವರು ಸೋನಿಯಾ ಕುಟುಂಬದೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ವಾಸ್ತತವವಾಗಿ ಚಿತ್ರದಲ್ಲಿರುವ ಮಹಿಳೆ ದಿವ್ಯಾ ಮಹಿಪಾಲ್ ಮಡೆರ್ನಾ ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ರಾಹುಲ್ ಗಾಂಧಿ ಸಮ್ಮುಖದಲ್ಲೆ ಕೆ.ಸಿ ವೇಣುಗೋಪಲ್‌ ಮದ್ಯ ಸೇವನೆ ಮಾಡಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights