FACT CHECK | ದೇವಸ್ಥಾನದ ಆವರಣದಲ್ಲಿ ಮಹಿಳೆಯೊಬ್ಬರು ಧೂಮಪಾನ ಮಾಡುತ್ತಿದ್ದಾರೆ ಎಂದು ಸ್ಕ್ರಿಪ್ಟೆಡ್ ವಿಡಿಯೋ ಹಂಚಿಕೆ

“ಮಹಿಳೆಯೊಬ್ಬರು ದೇವಸ್ಥಾನದ ಆವರಣದಲ್ಲಿ ಧೂಮಪಾನ ಮಾಡುತ್ತಿರುವ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ದೇವಸ್ಥಾನದ ಆವರಣದಲ್ಲಿ ಸಿಗರೇಟ್ ಸೇದಿದರೆ ಇದೇ ಗತಿ ಆಗುತ್ತದೆ ಎಂದು ಪ್ರತಿಪಾದಿಸಿ  ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.

 

ವೈರಲ್  ವಿಡಿಯೋದಲ್ಲಿ  ಮಹಿಳೆಯೊಬ್ಬರು ದೇವಸ್ಥಾನದ ಒಳಗೆ ಸಿಗರೇಟ್ ಸೇದಲು ಯತ್ನಿಸುವಾಗ ಮತ್ತೊಬ್ಬ ಮಹಿಳೆ ಅದನ್ನು ಪ್ರಶ್ನಿಸುತ್ತಾರೆ ಆದರೆ ಅದಕ್ಕೆ ಕೇರ್‌ ಮಾಡದ ಆಕ್ ಧೂಮಪಾನ ಮಾಡುವುದನ್ನು ಮುಂದುವರೆಸಿ ಹೊರ ನಡೆಯಲು ಮುಂದಾಗುವಾಗ ಕಾಲು ಜಾರಿ ಬೀಳುವುದನ್ನು ಕಾಣಬಹುದಾಗಿದೆ.

ಈ ವೈರಲ್ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಇದರ ಸತ್ಯಾಸತ್ಯತೆ ಏನೆಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ದೃಶ್ಯಗಳನ್ನು ಪರಿಶೀಲಿಸಲು ವಿಡಿಯೋದ ಕೀ ಫ್ರೇಮ್‌ಗಳನ್ನು ಬಳಸಿ ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ,  3RD EYE ಎಂಬ ಯುಟ್ಯೂಬ್ ಚಾನೆಲ್ ನಲ್ಲಿ ಅಪ್‌ಲೋಡ್‌ ಮಾಡಿದ ವಿಡಿಯೋ ಲಭ್ಯವಾಗಿದೆ.

ಹೀಗೆ ಕಂಡು ಬಂದ ಯೂಟ್ಯೂಬ್ ವಿಡಿಯೋ ವೈರಲ್ ವಿಡಿಯೋದ ಪೂರ್ಣ ಆವೃತ್ತಿಯ ದೃಶ್ಯಾವಳಿಗಳಾಗಿದ್ದು, ಈ ವಿಡಿಯೋದ ಡಿಸ್‌ಕ್ರಿಪ್ಷನ್‌ನಲ್ಲಿ ಇದು ಮನೋರಂಜನೆಯ ಉದ್ದೇಶಗಳಿಗಾಗಿ ಮತ್ತು ಸಾಮಾಜಿಕ ತಿಳುವಳಿಕೆಗಾಗಿ ಈ ವಿಡಿಯೋವನ್ನು ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಮತ್ತು ಇದು ಸ್ಕ್ರಿಪ್ಟ್‌ ಮಾಡಲಾದ ವಿಡಿಯೋ ಎಂಬುದು ಸ್ಪಷ್ಟವಾಗಿದೆ.

 

 

 

 

 

 

 

 

 

ಮತ್ತಷ್ಟು ಮಾಹಿತಿಗಾಗಿ ಸರ್ಚ್ ಮಾಡಿದಾಗ, ಇದೆ ಯೂಟ್ಯೂಬ್ ಚಾನೆಲ್ ನಲ್ಲಿ ಹಂಚಿಕೊಳ್ಳಲಾದ ಮತ್ತೊಂದು ವಿಡಿಯೋದಲ್ಲಿ ವೈರಲ್ ವಿಡಿಯೋದಲ್ಲಿ ನಟಿಸಿರುವ ಅದೇ ಕಲಾವಿದರು ಬೇರೆ ಬೇರೆ ವಿಡಿಯೋದಲ್ಲಿ ನಟಿಸಿದ ವಿಡಿಯೋಗಳು ಲಭ್ಯವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ದೇವಸ್ಥಾನದಲ್ಲಿ ಮಹಿಳೆಯೊಬ್ಬರು ಸಿಗರೇಟ್ ಸೇದಿದ್ದಾರೆ ಎಂಬ ವಿಡಿಯೋ ಸ್ಕ್ರಿಪ್ಟೆಡ್‌ ವಿಡಿಯೋವಾಗಿದ್ದು, ಇದು ಮನೋರಂಜನೆ ಮತ್ತು ಜಾಗೃತಿ ಮೂಡಿಸುವ ಉದ್ದೇಶಕ್ಕಾಗಿ ಚಿತ್ರಿಕರಿಸಲಾಗಿದೆ ಎಂಬುದು ಸ್ಪಷ್ಟವಾಗಿದೆ. ಆದರೆ ಕೆಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ವಿಡಿಯೋವನ್ನು ತಪ್ಪಾಗಿ ಗ್ರಹಿಸಿ ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದ್ದಾರೆ ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ರಾಹುಲ್‌ ಗಾಂಧಿ ಒಬ್ಬ ನಿಷ್ಪ್ರಯೋಜಕ ಎಂದು ಹೇಳಿದ್ರಾ ಉದ್ಧವ್‌ ಠಾಕ್ರೆ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights