FACT CHECK | ನಟಿ ಕಂಗನಾಗೆ ಕಪಾಳಮೋಕ್ಷ ಮಾಡಿ ಸಸ್ಪೆಂಡ್ ಆಗಿದ್ದ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಬೆಂಗಳೂರಿಗೆ ವರ್ಗಾವಣೆ ಆಗಿರುವುದು ನಿಜವೇ?

ನಟಿ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಸಂಬಂಧ ಸಸ್ಪೆಂಡ್ ಆಗಿದ್ದ ಸಿಐಎಸ್‌ಎಫ್ ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಅಲ್ಲದೇ ಅವರನ್ನು ಚಂಡೀಗಢದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಇರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ.

ಶಹೀದ್ ಭಗತ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜೂನ್ 6ರಂದು ನಡೆದ ಘಟನೆ ಬಳಿಕ ಕುಲ್ವಿಂದರ್ ಕೌರ್ ಅವರನ್ನು ಸಿಐಎಸ್ಎಫ್ ಅಮಾನತು ಮಾಡಿತ್ತು. ಘಟನೆ ಬಳಿಕ ಕೌರ್ ವಿರುದ್ಧ ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಕೂಡ ದಾಖಲಾಗಿತ್ತು. ಆದರೆ ಅವರ ಅಮಾನತು ಆದೇಶವನ್ನು ಈಗ ಹಿಂದಕ್ಕೆ ಪಡೆಯಲಾಗಿದ್ದು, ಸಿಐಎಸ್‌ಎಫ್‌ಗೆ ಮರಳಿ ಸೇರಿಸಲಾಗಿದೆ. ಜತೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ವ್ಯಾಪಕವಾಗಿ ಸುದ್ದಿ ಪ್ರಸಾರ ಮಾಡಲಾಗುತ್ತಿದೆ.

ಹಾಗಿದ್ದರೆ ಈ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಮುಖ್ಯವಾಹಿನಿ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವಂತೆ, ನಟಿ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಅಲ್ಲದೇ ಅವರನ್ನು ಚಂಡೀಗಢದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದ್ದು ಅದನ್ನು ಪರಿಶೀಲಿಸಿದಾಗ ವಾಸ್ತವ ಬೇರೆಯದೇ ಆಗಿದೆ. ಈ ಸಂಬಂಧ  ಕೀವರ್ಡ್‌ ಮೂಲಕ ಸರ್ಚ್ ಮಾಡಿದಾಗ,  3 ಜುಲೈ 2024ರಂದು ANI ಸುದ್ದಿ ಸಂಸ್ಥೆ ಮಾಡಿದ  ಟ್ವೀಟ್‌ ಲಭ್ಯವಾಗಿದೆ.

“ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರಿಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಅವರನ್ನು ಇನ್ನೂ ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಇಲಾಖಾ ವಿಚಾರಣೆ ಇನ್ನೂ ನಡೆಯುತ್ತಿದೆ – ಸಿಐಎಸ್‌ಎಫ್” ಎಂಬ ಶೀರ್ಷಿಕೆಯನ್ನು ಪೋಸ್ಟ್ ಮಾಡಲಾಗಿದೆ.

ಇದನ್ನು ಸುಳಿವಿನಂತೆ ಬಳಸಿಕೊಂಡು, ನಾವು ಹೆಚ್ಚುವರಿ ಸಂಶೋಧನೆ ನಡೆಸಿದ್ದೇವೆ ಮತ್ತು ಜುಲೈ 3, 2024 ರ ಬಿಸಿನೆಸ್ ಸ್ಟ್ಯಾಂಡರ್ಡ್ ವರದಿಯೊಂದು ಲಭ್ಯವಾಗಿದೆ.

ವರದಿಯ ಪ್ರಕಾರ, “ಕಳೆದ ತಿಂಗಳು ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಮೇಲೆ ಹಲ್ಲೆ ನಡೆಸಿ ಸುದ್ದಿ ಮಾಡಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಅವರನ್ನು ಕರ್ನಾಟಕದ ಬೆಂಗಳೂರಿಗೆ ವರ್ಗಾಯಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಬಗ್ಗೆ ಸಿಐಎಸ್ಎಫ್ ಸ್ಪಷ್ಟೀಕರಣವನ್ನು ನೀಡಿದ್ದು, ಕುಲ್ವಿಂದರ್ ಕೌರ್ ಅವರನ್ನು ಇನ್ನೂ ಅಮಾನತ್ತಿನಲ್ಲಿರಸಲಾಗಿದ್ದು,  ಅವರ ವಿರುದ್ಧ ಇಲಾಖಾ ವಿಚಾರಣೆ ಮುಂದುವರೆದಿದೆ ಎಂದು ಹೇಳಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಅವರನ್ನು ಇನ್ನೂ ಅಮಾನತುಗೊಳಿಸಲಾಗಿದೆ. ಅವರನ್ನು ಚಂಡೀಗಢದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಇರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ವರ್ಗಾವಣೆ ಮಾಡಲಾಗಿದೆ ಎಂಬುದು ಸುಳ್ಳು.

ಮೂಲ: ಬಿಸಿನೆಸ್ ಸ್ಟ್ಯಾಂಡರ್ಡ್

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಸಂವಿಧಾನದಲ್ಲಿ ಎಷ್ಟು ಫೇಜುಗಳಿವೆ ನಿನಗೆ ಗೊತ್ತಾ ಎಂದು BJP ಸಂಸದ ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights