FACT CHECK | 2007ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದೊಂದಿಗೆ ಫೋಟೊ ತೆಗೆಸಿಕೊಳ್ಳುವಾಗ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನಿರ್ಲಕ್ಷಿಸಲಾಗಿತ್ತೇ?

ಜೂನ್ 30 ರಂದು ಬಾರ್ಬಡೋಸ್‌ನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಮಣಿಸಿದ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ವಿಜೇತ ತಂಡದೊಂದಿಗೆ ಚರ್ಚೆ ನಡೆಸಿದ ವಿಡಿಯೋ ವೈರಲ್ ಆಗುತ್ತಿದಂತೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಅದರ ಜೊತೆಯಲ್ಲೆ 2007 ರ ಟಿ 20 ವಿಶ್ವಕಪ್ ಗೆದ್ದ ತಂಡದೊಂದಿಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಫೋಟೊ ತೆಗೆಸಿಕೊಂಡಿದ್ದನ್ನು ಹಂಚಿಕೊಳ್ಳುವ ಮೂಲಕ ಇದು ಸರಿಯೇ ಎಂದು ಪ್ರಶ್ನೆಯನ್ನು ಇಟ್ಟಿದ್ದರು.

ಈ ಸಂಭ್ರಮಾಚರಣೆಯ ನಡುವೆ, 2007 ರ ಟಿ 20 ವಿಶ್ವಕಪ್ ವಿಜೇತ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ತಂಡದೊಂದಿಗೆ ಕಾಂಗ್ರೆಸ್ ನಾಯಕಿ ಮತ್ತು ಆಗಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಫೋಟೋದಲ್ಲಿ ಕಾಂಗ್ರೆಸ್ ನಾಯಕ ಮತ್ತು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಕೂಡ ಇದ್ದಾರೆ. ವಿಜೇತ ತಂಡವು ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದಲಿಗೆ ಸೋನಿಯಾ ಗಾಂಧಿಯವರೊಂದಿಗೆ ಛಾಯಾಚಿತ್ರವನ್ನು ತೆಗೆದುಕೊಂಡಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

X ಬಳಕೆದಾರರು ಚಿತ್ರವೊಂದನ್ನು ಹಂಚಿಕೊಂಡು ಹೀಗೆ ಬರೆದಿದ್ದಾರೆ: “2007ರಲ್ಲಿ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದಿತ್ತು. ಮಹೇಂದ್ರ ಸಿಂಗ್ ಧೋನಿ ನಾಯಕರಾಗಿದ್ದರು ಮತ್ತು ರಾಜೀವ್ ಶುಕ್ಲಾ ಬಿಸಿಸಿಐನ ಹಂಗಾಮಿ ಅಧ್ಯಕ್ಷರಾಗಿದ್ದರು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದವರು. ಆದರೆಸೂಪರ್ ಪಿಎಂ ಸೋನಿಯಾ ಗಾಂಧಿ ಜೊತೆಗೆ ಫೋಟೋ ಶೂಟ್ ಮಾಡಲಾಗಿತ್ತು.

ಆಗ ಯಾವ ಪತ್ರಕರ್ತನೂ ಭಾರತ ಕ್ರಿಕೆಟ್ ತಂಡದ ಜೊತೆ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಿರುವ ಸೋನಿಯಾ ಗಾಂಧಿ ಯಾರು ಎಂಬ ಪ್ರಶ್ನೆ ಎತ್ತಲಿಲ್ಲ? ನೀಚ ಕಾಂಗ್ರೆಸ್ ಪಕ್ಷವು ಭಾರತದಲ್ಲಿ ಎಷ್ಟು ಸರ್ವಾಧಿಕಾರಿಯಾಗಿತ್ತು ಮತ್ತು ಅದು ಪ್ರಧಾನಿ ಹುದ್ದೆಯ ಘನತೆಗೆ ಎಷ್ಟು ಅವಮಾನ ಮಾಡಿತ್ತು ಎಂದು ಊಹಿಸಿ.  ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಆಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ನಿರ್ದಿಷ್ಟ ಕೀವರ್ಡ್ ಮೂಲಕ ಸರ್ಚ್ ಮಾಡಿದಾಗ, 31 ಅಕ್ಟೋಬರ್ , 2007 ರಂದು Times of India ಪ್ರಕಟಿಸಿದ ವಿಜೇತ ತಂಡದೊಂದಿಗೆ ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಭೇಟಿಯಾದ ಮತ್ತು ಪೋಸ್ ನೀಡಿದ ಆರು ಫೋಟೋಗಳು ಲಭ್ಯವಾಗಿವೆ. ಈ ಫೋಟೋಗಳಲ್ಲಿ ಒಂದು ಡಾ. ಸಿಂಗ್, ಅವರ ಪತ್ನಿ ಗುರುಶರಣ್ ಕೌರ್ ಮತ್ತು ಇತರ ಗಣ್ಯರು ಗ್ರೂಪ್ ಪೋಟೋಗೆ ಪೋಸ್ ನೀಡಿರುವುದನ್ನು ನೋಡಬಹುದು.

ಸೋನಿಯಾ ಗಾಂಧಿಯವರೊಂದಿಗೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಅವರ ಪತ್ನಿ ಗುರುಶರಣ್ ಕೌರ್ ಮತ್ತು ಇತರ ಕಾಂಗ್ರೆಸ್ ನಾಯಕರು 2007 ರ T20 ವಿಶ್ವಕಪ್ ವಿಜೇತ ತಂಡದೊಂದಿಗೆ ಫೋಟೋ ತೆಗೆಸಿಕೊಂಡಿರುವುದ್ನು ನೋಡಬಹುದು.

 

30 ಅಕ್ಟೋಬರ್, 2007 ರಂದು PMO ಆರ್ಕೈವ್‌ನಲ್ಲಿ ಪ್ರಕಟವಾದ ಮೂರು ಫೋಟೋಗಳನ್ನು ಸಹ ನಾವು ಕಂಡುಕೊಂಡಿದ್ದೇವೆ. ಮೊದಲ ಫೋಟೋ ಡಾ. ಸಿಂಗ್ ಮತ್ತು ಅವರ ಪತ್ನಿ, ವಿಜೇತ ತಂಡದೊಂದಿಗೆ ಪೋಸ್ ನೀಡುತ್ತಿರುವುದನ್ನು ತೋರಿಸುತ್ತದೆ. ಎರಡನೆಯದು ಸಿಂಗ್ ಅವರ ಪತ್ನಿ ಮತ್ತು ಆಗಿನ ಕ್ರೀಡಾ ಸಚಿವ ಮಣಿಶಂಕರ್ ಅಯ್ಯರ್ ಅವರು ವಿಜೇತ ನಾಯಕ ಎಂಎಸ್ ಧೋನಿ ಜೊತೆ ಪೋಸ್ ನೀಡುತ್ತಿರುವುದನ್ನು ಸೆರೆಹಿಡಿಯಲಾಗಿದೆ. ಮತ್ತು ಮೂರನೆಯದು ಸ್ಫೋಟಕ ಎಡಗೈ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್ ಅವರೊಂದಿಗೆ ಸಿಂಗ್ ಹಸ್ತಲಾಘವ ಮಾಡುವುದನ್ನು ತೋರಿಸುತ್ತದೆ.

(Source: PMO)

ಒಟ್ಟಾರೆಯಾಗಿ ಹೇಳುವುದಾದರೆ, 2007 ರ ಟಿ 20 ವಿಶ್ವಕಪ್ ವಿಜೇತ ತಂಡದೊಂದಿಗೆ ಸೋನಿಯಾ ಗಾಂಧಿ ಮಾತ್ರ ಫೋಟೋ ತೆಗೆಸಿಕೊಂಡಿದ್ದಾರೆ ಮತ್ತು ಆದರೆ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಲೆಕ್ಕಕ್ಕೆ ಇಲ್ಲ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಆದರೆ ವಾಸ್ತವವಾಗಿ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಜೊತೆಗೂ ವಿಜೇತ ತಂಡದೊಂದಿಗೆ ಪೋಟೊ ತೆಗಿಸಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಮಾಜಿ ಕ್ರಿಕೆಟ್ ಆಟಗಾರ ಮುಸ್ಲಿಂ ಧರ್ಮಕ್ಕೆ ಗುಡ್‌ ಬೈ ಹೇಳಿ, ಹಿಂದೂ ಧರ್ಮ ಸ್ವೀಕರಿಸಿದರೆ ! ಈ ಸ್ಟೋರಿ ಓದಿ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights