FACT CHECK | ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯಲ್ಲಿ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ ವಿಧಿಸುತ್ತದೆ ಎಂಬುದು ಸುಳ್ಳು

ಇತ್ತೀಚೆಗೆ ರಾಜ್ಯ ಸರ್ಕಾರ  ಪೆಟ್ರೋಲ್  ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಳ ಮಾಡಿದ್ದನ್ನು ಖಂಡಿಸಿ ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದವು. ಆದರೆ ರಾಜ್ಯ ಸರ್ಕಾರ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡು ಬೆಲೆ ಏರಿಕೆ ಅನಿವಾರ್ಯ ಎಂದು ಪ್ರತಿಕ್ರಿಸಿತ್ತು. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ರಾಜ್ಯ ತೆರಿಗೆ ಮತ್ತು ಸುಂಕಗಳು ಕೇಂದ್ರ ತೆರಿಗೆಗಳಿಗಿಂತ ಹೆಚ್ಚಾಗಿದೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

“ಎಲ್ಲಾ ಪೆಟ್ರೋಲ್ ಪಂಪ್‌ಗಳು ಈ ರೀತಿಯ ಬೋರ್ಡ್‌ಗಳನ್ನು ಹೊಂದಿರಬೇಕು: ಮೂಲ ದರ: 35.50, ಕೇಂದ್ರ ಸರ್ಕಾರದ ತೆರಿಗೆ: 19.50, ರಾಜ್ಯ ಸರ್ಕಾರದ ತೆರಿಗೆ: 41.55 ವಿತರಕ: 6.50, ಒಟ್ಟು: 103.05 ಆಗ ಯಾರು ಹೊಣೆ ಎಂದು ಸಾರ್ವಜನಿಕರಿಗೆ ಅರ್ಥವಾಗುತ್ತದೆ. ದಯವಿಟ್ಟು ಇದನ್ನು ನಿಮ್ಮ ಗುಂಪುಗಳು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ.” ಎಂಬ ಪೋಸ್ಟ್‌ವೊಂದನ್ನು ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. 

 

 

 

 

 

 

 

 

ಕಳೆದ ಅನೇಕ ವರ್ಷಗಳಿಂದ ಇದೇ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದ್ದು, ದೆಹಲಿ ಮತ್ತು ಪಶ್ಚಿಮ ಬಂಗಾಳದ ಸರ್ಕಾರಗಳನ್ನು ಟೀಕಿಸಲು ಈ ಪೋಸ್ಟ್‌ಅನ್ನು ಬಳಸಿಕೊಳ್ಳಲಾಗುತ್ತಿದೆ. ಮಮತಾ ಬ್ಯಾನರ್ಜಿಯವರು ಪೆಟ್ರೋಲ್ ಮೇಲೆ ರಾಜ್ಯ ತೆರಿಗೆಯನ್ನು ಹೆಚ್ಚಿಸಿದ್ದಾರೆ ಎಂದು ಪೋಸ್ಟರ್ ಮಾಡಿ ಹಂಚಿಕೊಳ್ಳಲಾಗಿದೆ.

ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ನಡೆಸಿದಾಗ, ಪೋಸ್ಟರ್‌ನಲ್ಲಿರುವ ಮಾಹಿತಿ ಸುಳ್ಳು ಎಂದು ತಿಳಿದು ಬಂದಿದೆ. ClearTaxನ ಮಾಹಿತಿ ಪ್ರಕಾರ “ಭಾರತದಲ್ಲಿ ಪೆಟ್ರೋಲ್ ತೆರಿಗೆಯು ಪೆಟ್ರೋಲ್‌ನ ಚಿಲ್ಲರೆ ಬೆಲೆಯ 55% ಅನ್ನು ಒಳಗೊಂಡಿರುತ್ತದೆ ಆದರೆ ಡೀಸೆಲ್ ತೆರಿಗೆಯು ಇಂಧನದ ಚಿಲ್ಲರೆ ಮೌಲ್ಯದ 50% ಆಗಿದೆ. ಇದರ ಹೊರತಾಗಿ, ಮಾರಾಟ ತೆರಿಗೆ ಮತ್ತು ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಅನ್ನು ರಾಜ್ಯ ಸರ್ಕಾರಗಳು ವಿವಿಧ ದರಗಳಲ್ಲಿ ವಿಧಿಸುತ್ತವೆ.

ಭಾರತದ ಇಂಧನ ಬೆಲೆ ರಚನೆಯಲ್ಲಿ ಇರುವ ಪ್ರಮುಖ ಶುಲ್ಕಗಳು ಇಲ್ಲಿವೆ: ಕಚ್ಚಾ ತೈಲದ ಮೂಲ ಬೆಲೆ, ಅಬಕಾರಿ ತೆರಿಗೆ, ವಿತರಕರ ಕಮಿಷನ್ ಮತ್ತು ಶುಲ್ಕಗಳು ಮೌಲ್ಯವರ್ಧಿತ ತೆರಿಗೆ (ವ್ಯಾಟ್). ಈಗ, ಕಚ್ಚಾ ತೈಲ ಬೆಲೆಗಳು, ಡೀಲರ್ ಶುಲ್ಕಗಳು ಮತ್ತು ಅಬಕಾರಿ ಸುಂಕವು ಭಾರತದಾದ್ಯಂತ ಒಂದೇ ಆಗಿರುತ್ತದೆ. ಆದಾಗ್ಯೂ, ವ್ಯಾಟ್ ಮತ್ತು ಮಾರಾಟ ತೆರಿಗೆಯು ರಾಜ್ಯಗಳಾದ್ಯಂತ ಭಿನ್ನವಾಗಿರುತ್ತದೆ, ಇದು ಇಂಧನ ಬೆಲೆಗಳಲ್ಲಿ ವ್ಯತ್ಯಾಸಕ್ಕೆ ಕಾರಣವಾಗುತ್ತದೆ.

ಭಾರತದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ವಿಧಿಸುತ್ತವೆ. ಕೇಂದ್ರ ಅಧಿಕಾರಿಗಳು ಕ್ರಮವಾಗಿ ರೂ.19.90/ಲೀಟರ್ ಮತ್ತು ರೂ.15.80/ಲೀಟರ್ ದರದಲ್ಲಿ ಅಬಕಾರಿ ಸುಂಕವನ್ನು ಅನ್ವಯಿಸುತ್ತಾರೆ. ದೇಶದಾದ್ಯಂತ ಈ ದರ ಒಂದೇ ಆಗಿರುತ್ತದೆ. ಇದರ ಮೇಲೆ, ರಾಜ್ಯ ಸರ್ಕಾರಗಳು ವ್ಯಾಟ್, ಮಾರಾಟ ತೆರಿಗೆ ಮತ್ತು ಇತರ ಹೆಚ್ಚುವರಿ ಶುಲ್ಕಗಳನ್ನು ವಿಧಿಸುತ್ತವೆ. ಈ ತೆರಿಗೆಗಳ ದರಗಳು ಬದಲಾಗುತ್ತವೆ, ಇದು ಭಾರತದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ವ್ಯತ್ಯಾಸಕ್ಕೆ ಕಾರಣವಾಗುತ್ತದೆ.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯವಾರು ತೆರಿಗೆ ಪಟ್ಟಿ.

ಇತ್ತೀಚೆಗ‍ಷ್ಟೆ ಕರ್ನಾಟಕ ಸರ್ಕಾರ ಪೆಟ್ರೋಲ್ ದರಗಳ ಮೇಲೆ 3 ರೂಪಾಯಿಗಳಷ್ಟು ಹೆಚ್ಚು ಮಾಡಿದೆ. ಇದರಿಂದ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 25.92 ರಿಂದ ಶೇಕಡಾ 29.84 ಕ್ಕೆ ಮತ್ತು ಡೀಸೆಲ್ ಮೇಲೆ ಶೇಕಡಾ 14.3 ರಿಂದ 18.4 ಕ್ಕೆ ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಇದರೊಂದಿಗೆ ಪೆಟ್ರೋಲ್ ಪ್ರತಿ ಲೀಟರ್ಗೆ 99.83 ರೂ.ಗಳಿಂದ 102.85 ರೂ.ಗೆ ಮತ್ತು ಡೀಸೆಲ್ 85.93 ರೂ.ಗಳಿಂದ 88.93 ರೂ.ಗೆ ಏರಿದೆ. ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

 

 

 

 

 

 

 

 

 

 

 

 

 

 

 

 

ಈ ಕುರಿತು ಎಎನ್‌ಐ ಕೂಡ ವರದಿ ಮಾಡಿರುವುದನ್ನು ನಾವಿಲ್ಲಿ ನೋಡಬಹುದು.

ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್ ಬೆಲೆ ಲೀಟರ್‌ಗೆ ₹102.86 ಆಗಿದೆ. ನಿನ್ನೆಗೆ ಹೋಲಿಸಿದರೆ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ 1 ತಿಂಗಳಲ್ಲಿ, ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ₹102.92 ಮತ್ತು ₹102.86 ರ ನಡುವೆ ಏರಿಳಿತವಾಗಿದೆ. ನೀವು ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ಬೆಲೆಗಳನ್ನು ವೀಕ್ಷಿಸಬಹುದು ಮತ್ತು ಹಿಂದಿನ ದಿನದ ದರಗಳೊಂದಿಗೆ ಹೋಲಿಕೆ ಮಾಡಬಹುದು, ಇದರಲ್ಲಿ ಈಗಾಗಲೇ ರಾಜ್ಯದ ತೆರಿಗೆಗಳು ಸೇರಿವೆ.

 

 

 

 

 

 

 

ಒಟ್ಟಾರೆಯಾಗಿ ಹೇಳುವುದಾದರೆ, ಪೆಟ್ರೋಲ್‌ ದರದ ಮೇಲೆ ಕೇಂದ್ರ ಸರ್ಕಾರದ 19.50 ತೆರಿಗೆ ವಿಧಿಸಿದರೆ ರಾಜ್ಯ ಸರ್ಕಾರದ 41.55 ತೆರಿಗೆ ವಿಧಿಸಿಸುತ್ತಿದೆ ಎಂಬುದು ಸುಳ್ಳು.  ವಾಸ್ತವವಾಗಿ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 25.92 ರಿಂದ ಶೇಕಡಾ 29.84 ಕ್ಕೆ ಮತ್ತು ಡೀಸೆಲ್ ಮೇಲೆ ಶೇಕಡಾ 14.3 ರಿಂದ 18.4 ಕ್ಕೆ ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | 2007ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದೊಂದಿಗೆ ಫೋಟೊ ತೆಗೆಸಿಕೊಳ್ಳುವಾಗ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನಿರ್ಲಕ್ಷಿಸಲಾಗಿತ್ತೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights