FACT CHECK | ಬೆಂಗಳೂರಿನ BMTC ಬಸ್‌ಅನ್ನು ಮ್ಯಾಗ್ನೆಟಿಕ್ ಬಾಂಬ್ ದಾಳಿಯಿಂದ ಸ್ಪೋಟಿಸಲಾಗಿತ್ತು ಎಂದು ಸುಳ್ಳು ಫೋಸ್ಟ್‌ ಹಂಚಿಕೆ

ಜನನಿಬಿಡ ರಸ್ತೆಯಲ್ಲಿ ಬಸ್ಸು ಹೊತ್ತಿ ಉರಿಯುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ಕ್ಲಿಪ್ ಜೊತೆಗೆ ಬೆಂಗಳೂರಿನಲ್ಲಿ ಬಸ್ ಅನ್ನು ಗುರಿಯಾಗಿಸಿಕೊಂಡು ಮ್ಯಾಗ್ನೆಟಿಕ್ ಬಾಂಬ್ ದಾಳಿ ನಡೆಸಿದ್ದು, ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್‌ನ (ಡಿಆರ್‌ಡಿಒ) ಮೂವರು ಇಂಜಿನಿಯರ್‌ಗಳು ಸಾವನಪ್ಪಿದ್ದಾರೆ ಎಂದು ಪಾಕಿಸ್ತಾನ್ ಫಸ್ಟ್ ಹೆಸರಿನ ಎಕ್ಸ್ ಹ್ಯಾಂಡಲ್ (@Pak1stTeam) ನಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಬೆಂಗಳೂರು ನಗರದಲ್ಲಿ ಡಿಆರ್‌ಡಿಒದ 3 ಇಂಜಿನಿಯರ್‌ಗಳು ಪ್ರಯಾಣಿಸುತ್ತಿದ್ದ  ಬಸ್ ಅನ್ನು ಗುರಿಯಾಗಿಸಿಕೊಂಡು ಮ್ಯಾಗ್ನೆಟಿಕ್ ಬಾಂಬ್ ದಾಳಿ ನಡೆಸಲಾಗಿದ್ದು, ಎಲ್ಲಾ ಮೂವರು ಡಿಆರ್‌ಡಿಒ ಇಂಜಿನಿಯರ್‌ಗಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಘಟನೆಯು ಡಿಆರ್‌ಡಿಒ ಎಚ್‌ಎಎಲ್ ತೇಜಸ್ ವಿಮಾನ ಪರೀಕ್ಷಾ ಕೇಂದ್ರದಿಂದ 4 ಕಿಮೀ ವ್ಯಾಪ್ತಿಯಲ್ಲಿ ನಡೆದಿದೆ.

ಇತ್ತೀಚೆಗೆ ಬೆಂಗಳೂರಿನ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್‌ವೊಂದು ಹೊತ್ತಿ ಹುರಿದಿದೆ. ಮ್ಯಾಗ್ನೆಟಿಕ್ ಸ್ಪೋಟದಿಂದ ಬಸ್‌ ಮೇಲೆ ದಾಳಿ ನಡೆಲಾಗಿದ್ದು, ಮೂವರು DRDO ಇಂಜಿನಿಯರ್‌ಗಳನ್ನು ಹತ್ಯೆ ಮಾಡಲಾಗಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಪರಿಶೀಲಿಸಿದಾಗ ಇದೊಂದು ಸುಳ್ಳು ಸುದ್ದಿ ಎಂದು ತಿಳಿದುಬಂದಿದೆ.

9 ಜುಲೈ 2024ರಂದು ಬಿಎಂಟಿಸಿ ಬಸ್​ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ ಎಂದು ಕನ್ನಡಪ್ರಭ ಮಾಡಿದ ವರದಿ ಲಭ್ಯವಾಗಿದೆ.

ಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ ನಡೆದ ಘಟನೆ ನಡೆದಿದೆ. ಬಸ್ ನಲ್ಲಿ ಜನರಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದಂತೆ ಎಚ್ಚೆತ್ತ ನಿರ್ವಾಹಕ ಅವರನ್ನು ಕೆಳಕ್ಕಿಳಿಸಿದ್ದಾರೆ. ಘಟನೆ ವೇಳೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆಯಿಂದಾಗಿ, ಎಂಜಿ ರಸ್ತೆಯ ಸದಾ ದಟ್ಟ ವಾಹನನಿಬಿಡ ಸ್ಥಳವಾದ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಟ್ರಾಫಿಕ್‌ ಅಸ್ತವ್ಯಸ್ತವಾಯಿತು. ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್‌ನಿಂದ ಮೇಲೆದ್ದ ಭಾರಿ ಪ್ರಮಾಣದ ಹೊಗೆ ಪಕ್ಕದಲ್ಲಿದ್ದ ಮೆಟ್ರೋ ನಿಲ್ದಾಣವನ್ನು ಸಹ ಆವರಿಸಿತು ಎಂದು ಉಲ್ಲೇಖಿಸಲಾಗಿದೆ.

ಪೋಸ್ಟ್‌ನಲ್ಲಿ ಹೇಳಿರುವಂತೆ ಘಟೆಯಲ್ಲಿ ಯಾವುದೇ ಸಾವು ನೋವುಗಳು ವರದಿಯಾಗಿಲ್ಲ ಮತ್ತು ಈ ಘಟನೆಗೆ ಸಂಬಂಧಿಸಿದ ಯಾವುದೇ ಮಾಧ್ಯಮ ವರದಿಗಳಲ್ಲಿ ಡಿಆರ್‌ಡಿಒ ಎಂಜಿನಿಯರ್‌ಗಳ ಉಲ್ಲೇಖವೂ ಇಲ್ಲ.

DRDO HAL ತೇಜಸ್ ವಿಮಾನ ಪರೀಕ್ಷಾ ಕೇಂದ್ರದಿಂದ 4 ಕಿಮೀ ಪಶ್ಚಿಮಕ್ಕೆ ಸಂಭವಿಸಿದೆ” ಎಂದು ಸಹ ಉಲ್ಲೇಖಿಸಲಾಗಿದೆ. ಾದರೆ ಈ ಹೇಳಿಕೆಯನ್ನು ತನಿಖೆ ಮಾಡಿದಾಗ ಘಟನೆ ಬೆಂಗಳೂರಿನ HAL ವಿಮಾನ ಪರೀಕ್ಷಾ ಕೇಂದ್ರದಿಂದ ಸುಮಾರು 9 ಕಿಮೀ ದೂರದಲ್ಲಿ ಸಂಭವಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 9 ಜುಲೈ 2024ರಂದು ರೋಸ್ ಗಾರ್ಡನ್‌ನಿಂದ ಶಿವಾಜಿನಗರದ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ವೊಂದು ಬೆಂಗಳೂರಿನ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ವೃತ್ತದ ಬಳಿ ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಹೊತ್ತಿಉರಿದಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಆದರೆ ಈ ಘಟನೆಯನ್ನು ತಿರುಚಿ ಮ್ಯಾಗ್ನೆಟಿಕ್ ಬಾಂಬ್ ಸ್ಪೋಟಿಸಿದ ಪರಿಣಾಮ ಮೂವರು ಇಂಜಿನಿರ್‌ಗಳು ಸಾವನಪ್ಪಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ  ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಮಣಿಪುರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ವಿರುದ್ಧ ‘ಗೋ ಬ್ಯಾಕ್ ರಾಹುಲ್’ ಎಂದು ಪ್ರತಿಭಟನೆಗಳು ನಡೆದಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights