FACT CHECK | ಬಾಂಗ್ಲಾದೇಶದಲ್ಲಿ ಪ್ರಾಣ ಉಳಿಸಿಕೊಳ್ಳಲು ಬಹುಮಹಡಿ ಕ್ಟಡದಿಂದ ಜಿಗಿದ್ರಾ ಹಿಂದೂಗಳು? ವೈರಲ್ ವಿಡಿಯೋದ ಅಸಲೀಯತ್ತೇನು?

ಬಹುಮಹಡಿ ಕಟ್ಟಡವೊಂದರ ಮೇಲಿಂದ ಕೆಳಗಿಳಿಯಲು ಪರದಾಡುತ್ತಿರುವ ವಿದ್ಯಾರ್ಥಿಗಳು, ಅದೇ ವಿದ್ಯಾರ್ಥಿಗಳನ್ನು ಥಳಿಸುತ್ತಿರುವ ಮತ್ತೊಂದು ಗುಂಪು, ಈ ವಿಡಿಯೋವನ್ನು ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮಗಳ ಬಳಕೆದಾರರು”ಇಸ್ಲಾಮಿ ಮೂಲಭೂತವಾದಿ ಗುಂಪು ಜಮಾತ್-ಎ-ಇಸ್ಲಾಮಿಯ ಜನರು ಬಾಂಗ್ಲಾದೇಶದಲ್ಲಿ ಹಿಂದೂ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದಾರೆ. ಇವರಿಂದ ಪಾರಾಗಲು ಹಿಂದೂ ವಿದ್ಯಾರ್ಥಿಗಳು ಕಟ್ಟಡದಿಂದ ಜಿಗಿಯುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ”.

ರಿಷಬ್‌ ಎಂಬ ಎಕ್ಸ್‌ ಕಾತೆ ಬಳಕೆದಾರರೊಬ್ಬರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು“ಬಾಂಗ್ಲಾದೇಶದ ಢಾಕಾದಲ್ಲಿ ಹಿಂದೂ ವಿದ್ಯಾರ್ಥಿಗಳ ಭಯಾನಕ ದೃಶ್ಯ: ಜಮಾತ್-ಎ-ಇಸ್ಲಾಮಿ ನಡೆಸಿದ ದಾಳಿಯಿಂದ ಭಯಭೀತರಾದ ಹಿಂದೂ ವಿದ್ಯಾರ್ಥಿಗಳು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಹೇಗೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು ಎಂಬುದನ್ನು ನೋಡಿ. ಇವರಲ್ಲಿ ಎಷ್ಟು ಜನರು ಮೇಲಿನಿಂದ ಕೆಳಗೆ ಬಿದ್ದರು ನೋಡಿ,”  ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ ಮಾಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 18 ಜುಲೈ 2024ರಂದು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಿದ ವಿಡಿಯೋವೊಂದು ಲಭ್ಯವಾಗಿದೆ.

ಯೂಟ್ಯೂಬ್‌ನಲ್ಲಿ ಲಭ್ಯವಾದ ವಿಡಿಯೋ ಶೀರ್ಷಿಕೆಯಲ್ಲಿ ಬಾಂಗ್ಲಾದೇಶದ ಮೀಸಲಾತಿ ಕೋಟಾ ವಿರೋಧಿ ಪ್ರತಿಭಟನೆ ಎಂದು ಕಂಡುಬಂದಿದೆ. ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ನಡುವೆ ಬಾಂಗ್ಲಾದೇಶ ಛತ್ರ ಲೀಗ್ ನಾಯಕರನ್ನು ಮತ್ತು ಕಾರ್ಯಕರ್ತರನ್ನು ಆರು ಅಂತಸ್ತಿನ ಕಟ್ಟಡದಿಂದ ಎಸೆಯಲಾಯಿತು ಎಂದು ವಿಡಿಯೋದಲ್ಲಿ ಆ್ಯಂಕರ್ ಹೇಳುವುದನ್ನುಕೇಳಬಹುದು.

ಇದೇ ವಿಡಿಯೋವನ್ನು RTV ಯೂಟ್ಯೂಬ್ ಚಾನಲ್‌ನಲ್ಲಿ ಅಪ್‌ಲೋಡ್ ಮಾಡಿರುವುದು ಕಂಡುಬಂದಿದೆ. ಕೋಟಾ ವಿರೋಧಿ ಪ್ರತಿಭಟನೆ ನಡುವೆ, ಛತ್ರ ಲೀಗ್ ಮತ್ತು ಜುಬೋ ಲೀಗ್‌ನ ಕಾರ್ಯಕರ್ತರು ಆತ್ಮರಕ್ಷಣೆಗಾಗಿ ಕಟ್ಟಡದ ಮೇಲ್ಛಾವಣಿ ಹತ್ತಿದ್ದಾರೆ ಎಂದು ವರದಿಯಲ್ಲಿದೆ. ಬಾಂಗ್ಲಾ ಟ್ರಿಬ್ಯೂನ್ ಎಂಬ ವೆಬ್‌ಸೈಟ್‌ನಲ್ಲಿ 18 ಜುಲೈ , 2024 ರಂದು ಈ ಕುರಿತು ಸುದ್ದಿ ಪ್ರಕಟವಾಗಿದೆ.

ಇನ್ನು ಕಟ್ಟಡದಿಂದ ತಳಲ್ಪಟ್ಟ ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. “ಚಿತ್ತಗಾಂಗ್‌ನಲ್ಲಿ ಕೋಟಾ ಸುಧಾರಣೆಗಾಗಿ ಆಂದೋಲನ ನಡೆಸುತ್ತಿದ್ದ ವಿದ್ಯಾರ್ಥಿಗಳೊಂದಿಗಿನ ಘರ್ಷಣೆಯ ಸಂದರ್ಭದಲ್ಲಿ ಆರು ಅಂತಸ್ತಿನ ಕಟ್ಟಡದಿಂದ ಎಸೆಯಲ್ಪಟ್ಟ ಆರು ಬಿಸಿಎಲ್ ಕಾರ್ಯಕರ್ತರ ಸ್ಥಿತಿ ಗಂಭೀರವಾಗಿದೆ. ಅವರನ್ನು ಚಿತ್ತಗಾಂಗ್‌ನ ಎರಡು ಆಸ್ಪತ್ರೆಗಳ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇರಿಸಲಾಗಿದೆ. ಉಳಿದವರು ಚಿತ್ತಗಾಂಗ್ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಪಾರ್ಕ್‌ವ್ಯೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,” ಎಂದು ಬರೆಯಲಾಗಿದೆ.

ವೈರಲ್ ವೀಡಿಯೊದಲ್ಲಿರುವಂತೆ ಬಾಂಗ್ಲಾದೇಶದಲ್ಲಿ ಹಿಂದೂ ವಿದ್ಯಾರ್ಥಿಗಳ ಮೇಲೆ ಯಾವುದೇ ದಾಳಿ ನಡೆದಿಲ್ಲ ಎಂಬುದು ಸ್ಟಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಬಾಂಗ್ಲಾದೇಶದಲ್ಲಿ ಹಿಂದೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದ ಎಂಬುದು ಸುಳ್ಳು. ವಾಸ್ತವವಾಗಿ ಬಾಂಗ್ಲಾದೇಶ ಛತ್ರ ಲೀಗ್ ನಾಯಕರು ಮತ್ತು ಜುಬೋ ಲೀಗ್‌ನ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯನ್ನು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಶರವೇಗದಲ್ಲಿ ಹೆಚ್ಚಿದ ಜಲಪಾತದ ನೀರಿನ ಹರಿವು, ತಾಯಿ ಮಗು ಗ್ರೇಟ್‌ ಎಸ್ಕೇಪ್ ! ಆದ್ರೆ ಇದು ಹೊಗೇನಕಲ್‌ನಲ್ಲಿ ನಡೆದ ಘಟನೆಯಲ್ಲ! ಮತ್ತೆಲ್ಲಿಯದ್ದು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights