FACT CHECK | ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಲಾರಿ ಚಾಲಕ ಅರ್ಜನ್ ಶವ ಪತ್ತೆಯಾಗಿದೆ ಎಂದು ಸುಳ್ಳು ಪೋಸ್ಟ್‌ ಹಂಚಿಕೆ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ಕಾರ್ಯಾಚರಣೆ ದಿನೇ ದಿನೇ ಸವಾಲಾಗ್ತಿದೆ. ದೆಹಲಿಯಿಂದ  ಬಂದ ತಂಡದಿಂದ ಅಂಡರ್‌ ಗ್ರೌಂಡ್ ಡಿಟೆಕ್ಟ್ ಡ್ರೋನ್ ಮೂಲಕ ಕಾರ್ಯಾಚರಣೆ ನಡೆಸಿ, 3 ಸ್ಪಾಟ್‌ಗಳನ್ನ ಪತ್ತೆ ಮಾಡಲಾಗಿದೆ. ನದಿಯಲ್ಲಿ  ಕೊಚ್ಚಿ ಹೋಗಿದ್ದರ ಪೈಕಿ ರೆಲಿಂಗ್, ಟವರ್, ಲಾರಿ, ಟ್ಯಾಂಕರ್ ಕ್ಯಾಬಿನ್ ಸಿಗಬೇಕಿತ್ತು. ಆದರೆ ಡ್ರೋನ್‌ನಲ್ಲಿ 3 ಸ್ಪಾಟ್‌ಗಳು ಪತ್ತೆಯಾಗಿದ್ದು, ಇದರಲ್ಲಿ ಅರ್ಜುನ್ ಲಾರಿ ಯಾವುದು ಅನ್ನೋದ್ರ ಪತ್ತೆ ಸವಾಲಾಗಿದೆ.

Fact Check: ಅಂಕೋಲಾ ಗುಡ್ಡ ಕುಸಿತ ಪ್ರಕರಣದಲ್ಲಿ ಕೇರಳ ಲಾರಿ ಚಾಲಕ ಅರ್ಜುನ್ ಶವ ಸಿಕ್ಕಿದೆ ಎಂಬ ಸುಳ್ಳು ಹೇಳಿಕೆ ವೈರಲ್

ಇದರ ಮಧ್ಯೆ ಸಾಮಾಜಿಕ ಮಾಧ್ಯಮಗಳಲ್ಲಿ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಲಾರಿ ಚಾಲಕ ಅರ್ಜುನಶ ಶವ ಪತ್ತೆಯಾಗಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ಗಳಲ್ಲಿ ಇದೇ ಸಂದೇಶವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಚಾಲಕ ಅರ್ಜುನ್‌ ಅವರ ಶವ ದೊರಕಿದ ಬಗ್ಗೆ ಯಾವುದೇ ವರದಿಗಳು ಕಂಡುಬಂದಿಲ್ಲ. ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಎನ್‌ಡಿಆರ್ ಎಫ್‌ ಎಕ್ಸ್ ಖಾತೆಯನ್ನೂ ಪರಿಶೀಲಿಸಲಾಗಿದ್ದು, ಯಾವುದೇ ಮಾಹಿತಿಗಳು ಕಂಡುಬಂದಿಲ್ಲ.

ಆ ಬಳಿಕ ಕಾರವಾರ ಪೊಲೀಸ್‌ ವರಿಷ್ಠಾಧಿಕಾರಿಯವರ ಕಚೇರಿಯನ್ನು ಸಂಪರ್ಕಿಸಿದ್ದೇವೆ. ಕಚೇರಿ ಹೇಳಿಕೆ ಪ್ರಕಾರ, ಅರ್ಜುನ್‌ ಅವರ ಶವ ದೊರಕಿದೆ ಎನ್ನುವುದು ತಪ್ಪು ಮಾಹಿತಿಯಾಗಿದೆ. ಅಂಕೋಲಾದ ಗುಡ್ಡ ಕುಸಿತ ಸ್ಥಳ, ಪಕ್ಕದ ಗಂಗಾವಳಿ ನದಿಯಲ್ಲಿ ಇನ್ನೂ ಕಾರ್ಯಾಚರಣೆ ನಡೆಯುತ್ತಿದ್ದು, ಚಾಲಕ ಅರ್ಜುನ್‌ ಅವರೂ ಸೇರಿದಂತೆ ನಾಪತ್ತೆಯಾದ ಮೂವರಿಗೆ ಹುಡುಕಾಟ ನಡೆಯುತ್ತಿದೆ. ಸ್ಥಳದಲ್ಲಿ ಸೇನೆ, ಎನ್‌ಡಿಆರ್ ಎಫ್, ರಕ್ಷಣಾ ತಂಡಗಳು ಇವೆ ಎಂದು ತಿಳಿಸಿದ್ದಾರೆ.

ಇದುವರೆಗೆ ಅರ್ಜುನ್ ಮತ್ತವರ ಲಾರಿಯನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ. ಸದ್ಯ ಗಂಗಾವಳಿ ನದಿಯ ಒಳಭಾಗದಲ್ಲಿ ಮೂರು ಕಡೆಗಳಲ್ಲಿ ಮೆಟಲ್‌ ತಂತ್ರಜ್ಞಾನ ನೆರವಿನಿಂದದ ಲೋಕದ ವಸ್ತುಗಳಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಇದರ ಬಗ್ಗೆ ಶೋಧ ನಡೆಯಬೇಕಿದೆ. ಇದಕ್ಕೆ ಮಲ್ಪೆಯಿಂದ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ತಂಡ ಆಗಮಿಸಿದ್ದು ಶೋಧ ನಡೆಸಲಿದೆ ಎಂದು ಹೇಳಿದ್ದಾರೆ.

ಇನ್ನು ಈ ಕುರಿತಂತೆ ನಾವು ತನಿಖೆ ನಡೆಸಿದಾಗ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ವಾರ್ತಾಭಾರತಿ ಜೊತೆಗೆ ಮಾತನಾಡಿದ ಆಡಿಯೋ ಲಭ್ಯವಾಗಿದೆ. ಜುಲೈ 26, 2024ರಂದು ವಾರ್ತಾಭಾರತಿ ವರದಿಯಲ್ಲಿ, ಈಶ್ವರ್ ಮಲ್ಪೆ ಅವರು 6 ಜನರ ತಂಡ ಅಂಕೋಲಾಕ್ಕೆ ತೆರಳಿ ಅರ್ಜುನ್ ಅವರ ಹುಡುಕಾಟ ನಡೆಸುವುದಾಗಿ ತಿಳಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಕೇರಳ ಲಾರಿ ಚಾಲಕ ಅರ್ಜುನ್‌ ಅವರ ಶವ ದೊರೆತಿದೆ ಎಂಬ ಸಂದೇಶದೊಂದಿಗೆ ಹಂಚಿಕೊಳ್ಳುತ್ತಿರುವ ಪೋಟೋ ತಪ್ಪಾಗಿದೆ. ಅಂತಹ ನಾಪತ್ತೆಯಾದ ಶವ ಪತ್ತೆಯಾದ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | 2015ರ ಹಳೆಯ ರೈಲು ಅಪಘಾತದ ವಿಡಿಯೋವನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights