FACT CHECK | ಪಿ.ಚಿದಂಬರಂ ಹಣಕಾಸು ಸಚಿವರಾಗಿದ್ದಾಗ ಬಜೆಟ್ ತಯಾರಿಕೆಯಲ್ಲಿ ದಲಿತರನ್ನು ಒಳಗೊಂಡಿರಲಿಲ್ಲವೇ? ಈ ಸ್ಟೋರಿ ಓದಿ

ಕೇಂದ್ರ ಬಜೆಟ್‌ಗೆ ಸಿದ್ದತೆ ನಡೆಯುವ ವೇಳೆ ಅಧಿಕಾರಿಗಳ ಜೊತೆ ಕೇಂದ್ರ ಹಣಕಾಸು ಸಚಿವರು ಸಂಪ್ರದಾಯದಂತೆ ಹಲ್ವಾ ಕಾರ್ಯಕ್ರಮ ಮಾಡುತ್ತಾರೆ. ಬಜೆಟ್ ಸಿದ್ದತೆ ವೇಳೆ ಅದರ ಗೌಪ್ಯತೆ ಹಾಗೂ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಬಜೆಟ್ ಸಿದ್ದತಾ ಕಾರ್ಯದಲ್ಲಿ ತೊಡಗುವ ಅಧಿಕಾರಿಗಳು ಕೆಲ ದಿನಗಳ ಕಾಲ ಮನೆಗೆ ಹೋಗದೆ, ಯಾರದ್ದೇ ಸಂಪರ್ಕಕ್ಕೂ ಸಿಗದೆ ಕಚೇರಿಯಲ್ಲಿ ಇರುತ್ತಾರೆ. ಅವರ ಊಟೋಪಚಾರಗಳ ಸಿದ್ದತೆಯ ಆರಂಭಕ್ಕಾಗಿ ಸೂಚ್ಯವಾಗಿ ಹಲ್ವಾ ಕಾರ್ಯಕ್ರಮ ನಡೆಯುತ್ತದೆ.

Image

ಈ ಕಾರ್ಯಕ್ರಮದ ಫೋಟೋವನ್ನು ಲೋಕಸಭಾ ಕಲಾಪದಲ್ಲಿ ಪ್ರದರ್ಶನ ಮಾಡಿದ ರಾಹುಲ್ ಗಾಂಧಿ, ಈ ಫೋಟೋವನ್ನು ಗಮನಿಸಿ. ಇದರಲ್ಲಿ ಇರುವ 20 ಅಧಿಕಾರಿಗಳ ಪೈಕಿ ಯಾರೊಬ್ಬರೂ ಹಿಂದುಳಿದ ವರ್ಗ, ದಲಿತ ಹಾಗೂ ಆದಿವಾಸಿ ಸಮುದಾಯಕ್ಕೆ ಸೇರಿದವರು ಇಲ್ಲ. ನಾನು ಬೇಕಿದ್ದರೆ ಅವರ ಹೆಸರುಗಳನ್ನೂ ಹೇಳಬಲ್ಲೆ ಎಂದರು. ಈ ವೇಳೆ ರಾಹುಲ್ ಗಾಂಧಿ ಅವರ ಮಾತಿನ ದಾಟಿಗೆ ನಿರ್ಮಲಾ ಸೀತಾರಾಮನ್ ಅವರು ಹಣೆ ಚಚ್ಚಿಕೊಂಡು, ತಮ್ಮ ಎರಡೂ ಕೈಗಳಿಂದ ಮುಖ ಮುಚ್ಚಿಕೊಂಡು ನಕ್ಕಿದ್ದರು, ದೇಶದಾದ್ಯಂತ ಜೋರು ಸುದ್ದಿಯಾಗಿತ್ತು.

ಇದಕ್ಕೆ ಪ್ರತಿಯಾಗಿ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ಪಿ.ಚಿದಂಬರಂ ಹಣಕಾಸು ಸಚಿವರಾಗಿ ಬಜೆಟ್‌ ಕಲಾಪದಲ್ಲಿ ಭಾಗವಹಿಸುವ ಮುನ್ನ ನಡೆದ ಸಂಪ್ರದಾಯ ಹಲ್ವಾ ಕಾರ್ಯಕ್ರಮದಲ್ಲಿ ಎಷ್ಟು ದಲಿತರಿದ್ದಾರೆ ಎಂದು ಪ್ರಶ್ನಿಸಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.  ಹಾಗಿದ್ದರೆ ಪೋಸ್ಟ್‌ನಲ್ಲಿ ಹಂಚಿಕೊಂಡಂತೆ ಕಾಂಗ್ರೆಸ್‌ ನೇತೃತ್ವದ ಯುಪಿಎ ಅವದಿಯಲ್ಲಿ ಪಿ.ಚಿದಂಬರಂರೊಂದಿಗೆ ದೇಶದ ಬಹುಸಂಖ್ಯಾತ ಒಬಿಸಿ, ಎಸ್‌ಸಿ, ಎಸ್‌ಟಿ ಸಮುದಾಯದ ಯಾವೊಬ್ಬ ಅಧಿಕಾರಿಯೂ ಬಜೆಟ್ ಸಿದ್ದತಾ ಕಾರ್ಯದಲ್ಲಿ ಭಾಗಿಯಾಗಿರಲಿಲ್ಲ ಎಂಬುದು ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : 

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಂತೆ, ಯುಪಿಎ ಸರ್ಕಾರದ ಅವಧಿಯಲ್ಲಿ ಪಿ.ಚಿದಂಬರಂ ಹಣಕಾಸು ಸಚಿವರಾಗಿ ಬಜೆಟ್‌ ಕಲಾಪದಲ್ಲಿ ಭಾಗವಹಿಸುವ ಮುನ್ನ ನಡೆದ ಸಂಪ್ರದಾಯ ಹಲ್ವಾ ಕಾರ್ಯಕ್ರಮದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ ಅಧಿಕಾರಿಗಳು ಭಾಗವಹಿಸಿರಲಿಲ್ಲ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾದ ಪೋಸ್ಟ್‌ಅನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್ ಆಗಿರುವ ಚಿತ್ರವು ಫೆಬ್ರವರಿ 2014ರಲ್ಲಿ ಮಧ್ಯಂತರ ಬಜೆಟ್ ಸಮಯದಲ್ಲಿ ತೆಗೆದಿದೆ ಎಂದು ದೃಢವಾಗಿದೆ.

ಫೆಬ್ರವರಿ 2014 ರಲ್ಲಿ ಮಧ್ಯಂತರ ಬಜೆಟ್ ಸಮಯದಲ್ಲಿ ತೆಗೆದಿದೆ ಎಂದು ದೃಢಪಡಿಸಿದೆ. ಚಿತ್ರದ ಶೀರ್ಷಿಕೆಯು ಫೆಬ್ರವರಿ 07, 2014 ರಂದು ನವದೆಹಲಿಯಲ್ಲಿ. “ಕೇಂದ್ರ ಹಣಕಾಸು ಸಚಿವ, ಶ್ರೀ ಪಿ. ಚಿದಂಬರಂ ಅವರು ಮಧ್ಯಂತರ ಬಜೆಟ್ ಮುದ್ರಣ ಪ್ರಕ್ರಿಯೆಯ ಪ್ರಾರಂಭವನ್ನು ಗುರುತಿಸುವ ಹಲ್ವಾ ಸಮಾರಂಭದಲ್ಲಿ ಭಾಗವಹಿಸಿದ್ದಾರೆ. 2014-15ರ ಬಜೆಟ್, ಹಣಕಾಸು ಖಾತೆಯ ರಾಜ್ಯ ಮಂತ್ರಿಗಳಾದ ಶ್ರೀ ಜೇಸುದಾಸು ಶೀಲಂ ಮತ್ತು ಶ್ರೀ ನಮೋ ನಾರಾಯಣ್ ಮೀನಾ ಅವರನ್ನು ಸಹ ಕಾಣಬಹುದು ಎಂದು ಪಿಐಬಿ ಸ್ಪಷ್ಟಪಡಿಸಿದೆ.

ರಾಜ್ಯದ ಸಚಿವರಲ್ಲಿ ಹೆಸರು ಹುಡುಕಿದಾಗ ಜೆಡಿ ಶೀಲಂ ಪರಿಶಿಷ್ಟ ಜಾತಿಗೆ ಮತ್ತು ನಮೋ ನರೇನ್ ಮೀನಾ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಎಂದು ತಿಳಿದುಬಂದಿದೆ.

ಹಲವಾರು ಸಂದರ್ಭಗಳಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿಗಾಗಿ ಪ್ರತಿಪಾದಿಸಿದ್ದಾರೆ. ಈ ಉದ್ದೇಶಕ್ಕಾಗಿ ಜಾತಿವಾರು ಜನಗಣತಿ ನಡೆಸಬೇಕು ಎಂದೂ ಅವರು ಒತ್ತಾಯಿಸುತ್ತಾರೆ. ಹಣಕಾಸು ಹೇಳಿಕೆಗಳ ಕುರಿತು ರಾಹುಲ್ ಗಾಂಧಿ ಅವರ ಭಾಷಣವು ಅದರ ಒಂದು ಭಾಗವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ,  ಪಿ.ಚಿದಂಬರಂ ಅವರು ಕೇಂದ್ರ ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಬಜೆಟ್‌ ಹಲ್ವಾ ತಯಾರಿಕಾ ಸಮಾರಂಭದ ವೇಳೆ ಚಿತ್ರೀಕರಿಸಿದ ಫೋಟೋದಲ್ಲಿ ದಲಿತ ಮತ್ತು ಬುಡಕಟ್ಟು ವ್ಯಕ್ತಿಗಳು ಇರುವುದು ದೃಢಪಟ್ಟಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಮಣ್ಣಿನ ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದ ನಾಯಿಯನ್ನು ರಕ್ಷಿಸುವ ವಿಡಿಯೋ 2021ರ ಭೂಕುಸಿತದ್ದು!


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights