FACT CHECK | ಬಾಲಿವುಡ್ ‘ತೌಬಾ ತೌಬಾ’ ಹಾಡಿಗೆ ಸ್ಟೆಪ್ ಹಾಕಿದ್ರಾ ಮುತ್ತಯ್ಯ ಮುರಳೀಧರನ್? ಈ ಸ್ಟೋರಿ ಓದಿ
ಸೋಶಿಯಲ್ ಮೀಡಿಯಾದಲ್ಲಿ ‘ತೌಬಾ ತೌಬಾ’ ಹಾಡಿಗೆ ರೀಲ್ಸ್ ಮಾಡುತ್ತಾ ಸ್ಟೆಪ್ ಹಾಕುವ ವಿಡಿಯೋಗಳು ಭಾರೀ ಸದ್ದು ಮಾಡುತ್ತಿವೆ. ಈಗ ಈ ಹಾಡಿಗೆ ಶ್ರೀಲಂಕಾದ ಲೆಜೆಂಡರಿ ಬೌಲರ್ ಮುತ್ತಯ್ಯ ಮುರಳೀಧರನ್ ಕೂಡ ನೃತ್ಯ ಮಾಡಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.
ಕರಿಯಪ್ಪ ಸ್ನೇಹಜೀವಿ ಎಂಬ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ‘ಇವರು.. ಅವರೇ.. ಮುತ್ತಯ್ಯ ಮುರಳೀಧರನ್…’ ಎಂದು ನೃತ್ಯ ಮಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.
ಹಾಗೆಯೆ ಎಕ್ಸ್ನಲ್ಲಿ ಕೂಡ ಅನೇಕರು ಈ ವೀಡಿಯೊವನ್ನು ಮುತ್ತಯ್ಯ ಮುರಳೀಧರನ್ ಎಂದು ಹಂಚಿಕೊಂಡಿದ್ದು, ‘ಇದು ಮುರಳೀಧರನ್ ಅವರ ನಿವೃತ್ತಿಯ ನಂತರದ ಜೀವನ, ಮುತ್ತಯ್ಯ ಮುರಳೀಧರನ್ ಅವರ ಹೊಸ ಅವತಾರ, ಲೆಜೆಂಡರಿ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ತಮ್ಮ ನೃತ್ಯ ಕೌಶಲ್ಯವನ್ನು ತೋರಿಸುತ್ತಿರುವುದು,’ ಎಂದು ಬರೆದುಕೊಂಡಿದ್ದಾರೆ. ಈ ಕುರಿತ ಲಿಂಕ್ ಅನ್ನು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 22 ಜುಲೈ, 2024 ರಂದು ಕಿರಣ್ ಜೆ ಎಂಬ ನೃತ್ಯ ಸಂಯೋಜಕರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್‌ಲೋಡ್ ಮಾಡಲಾದ ಅದೇ ವಿಡಿಯೋ ಲಭ್ಯವಾಗಿದೆ.
View this post on Instagram
ವೈರಲ್ ವಿಡಿಯೋದಲ್ಲಿ ಕಂಡುಬರುವ ವ್ಯಕ್ತಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅಲ್ಲ. ಬದಲಿಗೆ ಮುಂಬೈನ ಪ್ರಸಿದ್ಧ ನೃತ್ಯ ಸಂಯೋಜಕ ಕಿರಣ್ ಜೋಪಾಲ್ ಎಂಬುದು ಸ್ಪಷ್ಟವಾಗಿದೆ.
ಇದರ ಜೊತೆಗೆ ಜುಲೈ 25 ರಂದು ಕಿರಣ್ ಜೆ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಕೂಡ ಇದೇ ವೀಡಿಯೊವನ್ನು ಅಪ್‌ಲೋಡ್ ಮಾಡಿರುವುದನ್ನು ನಾವು ಕಂಡುಕೊಂಡಿದ್ದೇವೆ. ಇದಕ್ಕೆ ತೌಬಾ ತೌಬಾ ಎಂದು ಕ್ಯಾಪ್ಷನ್ ನೀಡಿದ್ದಾರೆ. ಫೇಸ್‌ಬುಕ್ ಖಾತೆಯಲ್ಲಿ ಕೂಡ ಇದೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ವೈರಲ್ ವಿಡಿಯೋದಲ್ಲಿ ನೃತ್ಯ ಮಾಡಿರುವ ವ್ಯಕ್ತಿ ಕಿರಣ್ ಜೋಪಾಲ್
ಕಿರಣ್ ಜೋಪಾಲ್ ಮುಂಬೈನ ಪ್ರಸಿದ್ಧ ನೃತ್ಯ ಸಂಯೋಜಕ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಆಕ್ಟೀವ್ ಇರುವ ವ್ಯಕ್ತಿ. ಕಂಪ್ಯೂಟರ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದ ಇವರು ನೃತ್ಯದ ಕಲೆಯಲ್ಲಿ ಹೆಸರು ಮಾಡಿದ್ದಾರೆ.ಇವರ ಜೀವನದ ಕುರಿತು 4 ವರ್ಷದ ಹಿಂದೆ TEDx ಟಾಕ್ಸ್ ಎಂಬ ಯೂಟ್ಯೂಬ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ತಮ್ಮ ಜೀವನದ ಪಯಣದ ಬಗ್ಗೆ ಮಾತನಾಡಿದ್ದಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ತೌಬಾ ತೌಬಾ ಹಾಡಿಗೆ ಮುಂಬೈನ ಕಿರಣ್ ಜೋಪಾಲೆ ನೃತ್ಯ ಮಾಡುತ್ತಿರುವ ವಿಡಿಯೋವನ್ನು, ಶ್ರೀಲಂಕಾದ ಲೆಜೆಂಡರಿ ಬೌಲರ್ ಮುತ್ತಯ್ಯ ಮುರಳೀಧರನ್ ನೃತ್ಯ ಮಾಡುತ್ತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | 2024ರ ‘ಒಲಿಂಪಿಕ್ಸ್‌ನ ಹೊಸ ದಂತಕಥೆ’ ಎಂದು ಎಡಿಟ್ ಮಾಡಿದ ಪೋಟೊ ಹಂಚಿಕೆ